ರಿಪ್ಪನ್ ಪೇಟೆ ಬಂಟರ ಯಾನೆ ನಾಡವರ ಸಂಘದ ವಾರ್ಷಿಕೋತ್ಸವ

ರಿಪ್ಪನ್ ಪೇಟೆ ಬಂಟರ ಯಾನೆ ನಾಡವರ ಸಂಘದ ವಾರ್ಷಿಕೋತ್ಸವ

ಸಂಘಟನೆ ಇಲ್ಲದೆ ಶಕ್ತಿ ಇಲ್ಲ – ಸುಧೀರ್ ಶೆಟ್ಟಿ

He praised the progress made by the Ripponpet Buntara or Nadavara Sangha in just two years and said that the association is successfully working to unite the society through organization, cooperation and service spirit. He advised the youth to not forget their original culture while advancing in education, employment and technology.

ರಿಪ್ಪನ್ ಪೇಟೆ: ಸಾಂಸ್ಕೃತಿಕವಾಗಿ ಶ್ರೀಮಂತವಾದ ರಿಪ್ಪನ್ ಪೇಟೆಯಲ್ಲಿ ಬಂಟರ ಯಾನೆ ನಾಡವರ ಸಂಘದ ಎರಡನೇ ವರ್ಷದ ವಾರ್ಷಿಕೋತ್ಸವ ಭಾನುವಾರ ಅದ್ದೂರಿಯಾಗಿ ನಡೆಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಸಾಗರದ ಬಂಟರ ಸಂಘದ ಅಧ್ಯಕ್ಷ ಸುಧೀರ್ ಶೆಟ್ಟಿ (ಸಾಗರ) ಮಾತನಾಡಿ, “ಇಂತಹ ಮಹತ್ವದ ಸಮಾರಂಭದಲ್ಲಿ ಭಾಗವಹಿಸುವ ಅವಕಾಶ ನನಗೆ ಹೆಮ್ಮೆಯ ಕ್ಷಣ. ಬಂಟರ–ನಾಡವರ ಸಮುದಾಯವು ಶ್ರಮ, ಶಿಸ್ತು, ಸಂಸ್ಕಾರ ಮತ್ತು ಸೇವೆಯನ್ನು ಜೀವನ ಮೌಲ್ಯಗಳಾಗಿ ಅಳವಡಿಸಿಕೊಂಡು ಸಮಾಜದ ಎಲ್ಲ ಕ್ಷೇತ್ರಗಳಲ್ಲಿ ತನ್ನದೇ ಆದ ಛಾಪು ಮೂಡಿಸಿದೆ” ಎಂದರು.

ಕೇವಲ ಎರಡು ವರ್ಷಗಳಲ್ಲಿ ರಿಪ್ಪನ್ ಪೇಟೆ ಬಂಟರ ಯಾನೆ ನಾಡವರ ಸಂಘ ಸಾಧಿಸಿರುವ ಪ್ರಗತಿ ಶ್ಲಾಘನೀಯವಾಗಿದೆ ಎಂದು ಪ್ರಶಂಸಿಸಿದ ಅವರು, ಸಂಘಟನೆ, ಸಹಕಾರ ಮತ್ತು ಸೇವಾ ಮನೋಭಾವದ ಮೂಲಕ ಸಮಾಜವನ್ನು ಒಗ್ಗೂಡಿಸುವ ಕಾರ್ಯವನ್ನು ಈ ಸಂಘ ಯಶಸ್ವಿಯಾಗಿ ಮಾಡುತ್ತಿದೆ ಎಂದರು. ಯುವಕರು ಶಿಕ್ಷಣ, ಉದ್ಯೋಗ ಹಾಗೂ ತಂತ್ರಜ್ಞಾನದಲ್ಲಿ ಮುನ್ನಡೆಯುವ ಜೊತೆಗೆ ತಮ್ಮ ಮೂಲ ಸಂಸ್ಕೃತಿಯನ್ನು ಮರೆತಬಾರದು ಎಂದು ಸಲಹೆ ನೀಡಿದರು.

“ಸಮಾಜದಲ್ಲಿ ವೇಗವಾಗಿ ಬದಲಾವಣೆ ನಡೆಯುತ್ತಿರುವ ಈ ಕಾಲಘಟ್ಟದಲ್ಲಿ ಒಗ್ಗಟ್ಟೇ ನಮ್ಮ ಬಲ. ಸಂಘಟನೆ ಇಲ್ಲದೆ ಶಕ್ತಿ ಇಲ್ಲ ಎಂಬುದನ್ನು ಪ್ರತಿಯೊಬ್ಬರೂ ಮನಗಾಣಬೇಕು” ಎಂದು ಹೇಳಿದರು. ಮಹಿಳೆಯರು ಕುಟುಂಬದ ಬೆನ್ನೆಲುಬಾಗಿರುವಂತೆ, ಸಂಘದ ಚಟುವಟಿಕೆಗಳಲ್ಲಿಯೂ ಮುನ್ನಡೆದರೆ ಸಮಾಜದ ಅಭಿವೃದ್ಧಿ ಇನ್ನಷ್ಟು ವೇಗವಾಗುತ್ತದೆ ಎಂದರು. ಮಂಗಳೂರಿನ ಆಶಾ–ಪ್ರಕಾಶ್ ಶೆಟ್ಟಿ ದಂಪತಿಗಳಂತೆ ಸಮಾಜಸೇವೆಯ ಮೂಲಕ ಜನಮಾನಸದಲ್ಲಿ ಗುರುತಿಸಿಕೊಂಡು, ರಿಪ್ಪನ್ ಪೇಟೆ ಬಂಟರ ಯಾನೆ ನಾಡವರ ಸಂಘ ಮುಂದಿನ ವರ್ಷಗಳಲ್ಲಿ ಇನ್ನಷ್ಟು ಎತ್ತರಕ್ಕೆ ಏರಲಿ ಎಂದು ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಜಯ್ ಕುಮಾರ್ ಶೆಟ್ಟಿ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಸುಧೀರ್ ಶೆಟ್ಟಿ (ಸಾಗರ), ಸದಾನಂದ ಶೆಟ್ಟಿ, ಪ್ರಕಾಶ್ ಶೆಟ್ಟಿ (ಸಾಗರ), ಹೊಸನಗರ ತಾಲ್ಲೂಕು ಅಧ್ಯಕ್ಷ ಸದಾನಂದ ಶೆಟ್ಟಿ, ನಾಗರಾಜ್ ಶೆಟ್ಟಿ, ಬಟ್ಟೆ ಮಲ್ಲಪ್ಪ, ಚಂದ್ರಶೇಖರ್ ಶೆಟ್ಟಿ (ಹೊಸನಗರ) ಉಪಸ್ಥಿತರಿದ್ದರು. ಉಪಾಧ್ಯಕ್ಷ ವಿನಯ್ ಶೆಟ್ಟಿ ವರದಿ ವಾಚಿಸಿದರು. ಕಾರ್ಯದರ್ಶಿ ಪವನ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಆರುಶ್ ಶೆಟ್ಟಿ ಪ್ರಾರ್ಥನೆ ಸಲ್ಲಿಸಿದರು. ಆರ್.ಇ. ಭಾಸ್ಕರ್ ಶೆಟ್ಟಿ (ರಿಪ್ಪನ್ ಪೇಟೆ) ಸ್ವಾಗತಿಸಿದರು. ವನಜಾ ಶೆಟ್ಟಿ ನಿರೂಪಣೆ ನಡೆಸಿದರು. ಕೃತಿ ಶೆಟ್ಟಿ ವಂದಿಸಿದರು.

ಬಂಟರ ಯಾನೆ ನಾಡವರ ಸಂಘದ ಎರಡನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಸತ್ಯನಾರಾಯಣ ಪೂಜೆ ಏರ್ಪಡಿಸಲಾಗಿತ್ತು.

ರಿಪ್ಪನ್ ಪೇಟೆ ಸೇರಿದಂತೆ ಸುತ್ತಮುತ್ತಲಿನ ಬಂಟರ ಯಾನೆ ನಾಡವರ ಸಂಘದ ಪದಾಧಿಕಾರಿಗಳು, ಸದಸ್ಯರು ಹಾಗೂ ಕುಟುಂಬ ವರ್ಗದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…

5 hours ago

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…

5 hours ago

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…

6 hours ago

ಹುಂಚ ಆಸ್ಪತ್ರೆಯ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ

ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…

10 hours ago

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…

10 hours ago

ಬೀದಿ ನಾಯಿಗಳ ದಾಳಿಗೆ ಆರು ಕುರಿ ಮರಿಗಳು ಸಾವು

ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…

10 hours ago