RIPPONPETE | ಚಿಪ್ಪಿಗರ ಕೆರೆ ಬಳಿ ರಸ್ತೆ ಸುರಕ್ಷತೆಗೆ ತಡೆಗೋಡೆ – ಪೊಲೀಸರಿಂದ ರಿಫ್ಲೆಕ್ಟರ್ ಅಳವಡಿಕೆ, ಅಪಘಾತಗಳಿಗೆ ತಡೆ

Barrier for road safety near Chippigara Lake – Police install reflectors, prevent accidents

RIPPONPETE | ಚಿಪ್ಪಿಗರ ಕೆರೆ ಬಳಿ ರಸ್ತೆ ಸುರಕ್ಷತೆಗೆ ತಡೆಗೋಡೆ: ಪೊಲೀಸರಿಂದ ರಿಫ್ಲೆಕ್ಟರ್ ಅಳವಡಿಕೆ, ಅಪಘಾತಗಳಿಗೆ ತಡೆ

Barrier for road safety near Chippigara Lake – Police install reflectors, prevent accidents

ರಿಪ್ಪನ್ ಪೇಟೆ : ಪಟ್ಟಣದ ಹೊಸನಗರ ರಸ್ತೆಯಲ್ಲಿರುವ ಚಿಪ್ಪಿಗರ ಕೆರೆ ದಂಡೆಯ ಬಳಿ ಅಪಾಯಕಾರಿ ತಿರುವುಗಳು ಹಾಗೂ ಸೂಕ್ತ ತಡೆಗೋಡೆಗಳ ಕೊರತೆಯಿಂದಾಗಿ ನಿರಂತರವಾಗಿ ರಸ್ತೆ ಅಪಘಾತಗಳು ಸಂಭವಿಸುತ್ತಿದ್ದವು. ಇತ್ತೀಚೆಗೆ ಕಾರೊಂದು ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ವೃದ್ಧೆಯೊಬ್ಬರು ಮೃತಪಟ್ಟ ದುರ್ಘಟನೆ ಬಳಿಕ ಸಾರ್ವಜನಿಕರಲ್ಲಿ ಆತಂಕ ಹೆಚ್ಚಾಗಿತ್ತು. ಈ ಹಿನ್ನೆಲೆಯಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಸೂಚನೆಯಂತೆ ಚಿಪ್ಪಿಗರ ಕೆರೆ ದಂಡೆಯ ಮೇಲೆ ತಡೆಗೋಡೆ ನಿರ್ಮಿಸಲಾಗಿದ್ದು, ರಸ್ತೆ ಸುರಕ್ಷತೆಗಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಚಿಪ್ಪಿಗರ ಕೆರೆ ಏರಿ ಭಾಗದಲ್ಲಿ ತಡೆಗೋಡೆ ಹಾಗೂ ಸೂಚನಾ ಫಲಕಗಳಿಲ್ಲದೇ ಇದ್ದ ಕಾರಣ ರಾತ್ರಿ ವೇಳೆ ವಾಹನ ಸವಾರರಿಗೆ ತಿರುವುಗಳು ಸ್ಪಷ್ಟವಾಗಿ ಕಾಣದೇ ಅಪಘಾತಗಳು ಸಂಭವಿಸುತ್ತಿದ್ದವು. ಈ ಸಮಸ್ಯೆಯನ್ನು ಪೋಸ್ಟ್‌ಮ್ಯಾನ್ ನ್ಯೂಸ್ ತಂಡ ಶಾಸಕರ ಗಮನಕ್ಕೆ ತಂದಿದ್ದು, ವಿಷಯ ತಿಳಿಯುತ್ತಿದ್ದಂತೆ ಅವರು ಸಂಬಂಧಪಟ್ಟ ಲೋಕೋಪಯೋಗಿ ಇಲಾಖೆಗೆ ಸೂಚನೆ ನೀಡಿ ತುರ್ತು ಕ್ರಮವಾಗಿ ಬ್ಯಾರಿಕೇಡ್ ನಿರ್ಮಿಸುವಂತೆ ನಿರ್ದೇಶಿಸಿದ್ದರು.

ಇದರಂತೆ ನಿರ್ಮಿಸಲಾದ ತಡೆಗೋಡೆಗೆ ಪಟ್ಟಣದ ಪಿಎಸ್ಐ ರಾಜು ರೆಡ್ಡಿ ಅವರ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿಗಳು ರಿಫ್ಲೆಕ್ಟರ್‌ಗಳನ್ನು ಅಳವಡಿಸಿ, ರಾತ್ರಿ ಹಾಗೂ ಮಂಜಿನ ವೇಳೆಯಲ್ಲೂ ವಾಹನ ಸವಾರರಿಗೆ ಸ್ಪಷ್ಟ ಮಾರ್ಗದರ್ಶನ ದೊರೆಯುವಂತೆ ಮಾಡಿದ್ದಾರೆ. ಜೊತೆಗೆ ಅಪಾಯ ಸೂಚಿಸುವ ನಾಮಫಲಕಗಳನ್ನೂ ಅಳವಡಿಸಲಾಗಿದ್ದು, ಸಂಚಾರ ಸುರಕ್ಷತೆ ಹೆಚ್ಚಿಸುವ ಉದ್ದೇಶದಿಂದ ರಸ್ತೆ ಸುರಕ್ಷತಾ ಅಭಿಯಾನ ನಡೆಸಲಾಗಿದೆ.

ಸ್ಥಳೀಯ ನಿವಾಸಿಗಳು ಹಾಗೂ ವಾಹನ ಸವಾರರು ಈ ಕ್ರಮವನ್ನು ಸ್ವಾಗತಿಸಿದ್ದು, “ತಡೆಗೋಡೆ ಮತ್ತು ರಿಫ್ಲೆಕ್ಟರ್ ಅಳವಡಿಕೆಯಿಂದ ಅಪಘಾತಗಳ ಸಂಖ್ಯೆ ಕಡಿಮೆಯಾಗಲಿದೆ” ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮುಂದಿನ ದಿನಗಳಲ್ಲಿ ಶಾಶ್ವತ ಪರಿಹಾರವಾಗಿ ಹೆಚ್ಚುವರಿ ಸುರಕ್ಷತಾ ಕ್ರಮಗಳು ಹಾಗೂ ರಸ್ತೆ ಸುಧಾರಣೆ ಕೈಗೊಳ್ಳುವಂತೆ ಸಾರ್ವಜನಿಕರು ಮನವಿ ಮಾಡಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

14 hours ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

15 hours ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

19 hours ago

ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆ ಮಾಲೀಕ, ಮಾಜಿ ವಕ್ಫ್‌ ಬೋರ್ಡ್ ಅಧ್ಯಕ್ಷ ತಲ್ಕೀನ್ ಅಹ್ಮದ್ ನಿಧನ

ಈಸ್ಟ್‌ವೆಸ್ಟ್‌ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…

21 hours ago

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…

21 hours ago

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

1 day ago