Bike accident in Konandur: A young man died near Ripponpet, another is in critical condition
ಕೋಣಂದೂರಿನಲ್ಲಿ ಬೈಕ್ ಅಪಘಾತ: ರಿಪ್ಪನ್ ಪೇಟೆ ಸಮೀಪದ ಯುವಕ ಸಾವು, ಮತ್ತೊಬ್ಬ ಗಂಭೀರ

ರಿಪ್ಪನ್ ಪೇಟೆ: ತೀರ್ಥಹಳ್ಳಿಯ ಎಳ್ಳಮಾವಸೆ ಜಾತ್ರೆ ಮುಗಿಸಿಕೊಂಡು ಹಿಂದಿರುಗುತ್ತಿದ್ದ ವೇಳೆ ಕೋಣಂದೂರು ಸಮೀಪ ಸಂಭವಿಸಿದ ಬೈಕ್ ಅಪಘಾತದಲ್ಲಿ ರಿಪ್ಪನ್ ಪೇಟೆ ಸಮೀಪದ ಬಿಳಿಕಿ ಗ್ರಾಮದ ಯುವಕನೊಬ್ಬ ಸಾವನ್ನಪ್ಪಿ, ಇನ್ನೊಬ್ಬ ಯುವಕ ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ಭಾನುವಾರ ತಡರಾತ್ರಿ ನಡೆದಿದೆ.
ಮೃತಪಟ್ಟ ಯುವಕನನ್ನು ಬಿಳಿಕಿ ಗ್ರಾಮದ ಅವಿನಾಶ್ (25) ಎಂದು ಗುರುತಿಸಲಾಗಿದೆ.
ಅವಿನಾಶ್ ಮೂಲತಃ ಶಿವಮೊಗ್ಗ ಜಿಲ್ಲೆಯ ತುಪ್ಪೂರು ಸಮೀಪದ ಸನ್ನಿವಾಸ ಗ್ರಾಮದ ಯೋಗೇಶ್ ಅವರ ಪುತ್ರನಾಗಿದ್ದು, ಬಿಳಿಕಿ ಗ್ರಾಮದಲ್ಲಿರುವ ತಮ್ಮ ದೊಡ್ಡಪ್ಪನ ಮನೆಯಲ್ಲಿ ವಾಸವಾಗಿದ್ದನು. ರಿಪ್ಪನ್ ಪೇಟೆಯ ಕಾಲೇಜಿನಲ್ಲಿ ವ್ಯಾಸಂಗ ಪೂರ್ಣಗೊಳಿಸಿದ್ದ ಅವಿನಾಶ್, ಸ್ನೇಹಿತರೊಂದಿಗೆ ಜಾತ್ರೆಗೆ ತೆರಳಿ ವಾಪಸ್ಸಾಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಬಿಳಿಕಿ ಗ್ರಾಮದ ನಿತ್ಯಾನಂದ ಎಂಬ ಯುವಕನನ್ನು ತಕ್ಷಣ ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.
ಘಟನೆಯ ಹಿನ್ನಲೆ :
ಭಾನುವಾರ ತಡರಾತ್ರಿ ತೀರ್ಥಹಳ್ಳಿಯಿಂದ ವಾಪಸ್ಸಾಗುವಾಗ ಕೋಣಂದೂರಿನ ಎನ್‌ಆರ್‌ಎಸ್ ಶಾಲೆಯ ಸಮೀಪದ ತಿರುವಿನಲ್ಲಿ ಬೈಕ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಲೈಟ್ ಕಂಬಕ್ಕೆ ಡಿಕ್ಕಿಯಾಗಿದೆ. ಡಿಕ್ಕಿಯ ತೀವ್ರತೆಗೆ ಬೈಕ್ ಹಿಂಬದಿಯಲ್ಲಿ ಕುಳಿತಿದ್ದ ಅವಿನಾಶ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಬೈಕ್ ಚಲಾಯಿಸುತ್ತಿದ್ದ ನಿತ್ಯಾನಂದನಿಗೆ ಗಂಭೀರ ಗಾಯಗಳಾಗಿವೆ.
ಈ ಘಟನೆ ತೀರ್ಥಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.