Headlines

ಬೈಕ್ ಮತ್ತು ಬಸ್ ನಡುವೆ ಡಿಕ್ಕಿ, 26 ವರ್ಷದ ಯುವಕ ಸಾವು

ಬೈಕ್–ರಾಜಹಂಸ ಬಸ್ ಡಿಕ್ಕಿ, 26 ವರ್ಷದ ಯುವಕ ಸಾವು

ತೀರ್ಥಹಳ್ಳಿ ತಾಲ್ಲೂಕಿನ ರಂಜದಕಟ್ಟೆ ಸಮೀಪದ ಶಿವರಾಜಪುರ ಬಳಿ ನಿನ್ನೆ ತಡರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ 26 ವರ್ಷದ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ನಡೆದಿದೆ.

ಬೈಕ್ ಮತ್ತು ರಾಜಹಂಸ ಬಸ್ ನಡುವೆ ಸಂಭವಿಸಿದ ಡಿಕ್ಕಿಯಲ್ಲಿ ಮೀನುಗುಂದ ಗ್ರಾಮದ ಪುನೀತ್ (26) ಎಂಬ ಯುವಕ ಮೃತನಾಗಿದ್ದು, ಆತ ಕುರುವಳ್ಳಿಯಲ್ಲಿರುವ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಅಪಘಾತದಲ್ಲಿ ಪುನೀತ್‌ ತಲೆಗೆ ತೀವ್ರವಾಗಿ ಪೆಟ್ಟು ಬಿದ್ದು ಗಂಭೀರ ಗಾಯಗೊಂಡಿದ್ದರಿಂದ ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಪ್ರಾಣಬಿಟ್ಟಿದ್ದಾನೆ.

ಘಟನಾ ಸ್ಥಳಕ್ಕೆ ತೀರ್ಥಹಳ್ಳಿ ಪೊಲೀಸ್ ಠಾಣಾ ಸಿಬ್ಬಂದಿ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ಸ್ಥಳೀಯರ ಪ್ರಕಾರ, ‘ಡೆವಿಲ್’ ಸಿನಿಮಾ ಬಿಡುಗಡೆಯ ಸಂಭ್ರಮದಲ್ಲಿ ಪಾಲ್ಗೊಂಡು ವಾಪಾಸ್ ಆಗುವ ವೇಳೆ ಈ ದುರಂತ ಸಂಭವಿಸಿದಂತೆ ಮಾಹಿತಿ ಲಭ್ಯವಾಗಿದೆ.