ಪೊಕ್ಸೊ ಪ್ರಕರಣದಲ್ಲಿ ಯುವಕನಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಕೋರ್ಟ್ ಆದೇಶ
ಶಿವಮೊಗ್ಗ ಡಿಸೆಂಬರ್ 1: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಭದ್ರಾವತಿಯ ಯುವಕನೋರ್ವನಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ, ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್.ಟಿ.ಎಸ್.ಸಿ – 1 ಕೋರ್ಟ್ ತೀರ್ಪು ನೀಡಿದೆ.
21 ವರ್ಷದ ಯುವಕನೇ ಜೈಲು ಶಿಕ್ಷೆಗೆ ಗುರಿಯಾದ ಯುವಕನಾಗಿದ್ದಾನೆ ಜೈಲು ಶಿಕ್ಷೆಯ ಜೊತೆಗೆ 61 ಸಾವಿರ ರೂ. ದಂಡ ವಿಧಿಸಲಾಗಿದೆ.
ನ್ಯಾಯಾಧೀಶ ನಿಂಗನಗೌಡ ಪಾಟೀಲ ಈ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಶ್ರೀಧರ್ ಅವರು ವಾದ ಮಂಡಿಸಿದ್ದರು.
ಪ್ರಕರಣದ ಹಿನ್ನೆಲೆ
16 ವರ್ಷದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ದೂರಿನ ಹಿನ್ನೆಲೆಯಲ್ಲಿ, ಭದ್ರಾವತಿ ಹೊಸಮನೆ ಪೊಲೀಸ್ ಠಾಣೆಯಲ್ಲಿ ಐಪಿಸಿ ಕಲಂ 376 (2) (ಎಫ್), 448 ಹಾಗೂ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.
ಅಂದಿನ ಭದ್ರಾವತಿ ನಗರ ವೃತ್ತದ ಸರ್ಕಲ್ ಇನ್ಸ್’ಪೆಕ್ಟರ್ ಶ್ರೀಧರ್ ಅವರು ಪ್ರಕರಣದ ತನಿಖೆ ನಡೆಸಿ, ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ದಾಖಲಿಸಿದ್ದರು.



