ಬಂಗಾರಧಾಮದಲ್ಲಿ ಡಿಜಿಟಲ್ ಸಾಕ್ಷ್ಯಚಿತ್ರ ವ್ಯವಸ್ಥೆ: ಸಚಿವ ಮಧು ಬಂಗಾರಪ್ಪ ಘೋಷಣೆ

Digital documentary system at Bangar Dham: Minister Madhu Bangarappa announces

ಬಂಗಾರಧಾಮದಲ್ಲಿ ಡಿಜಿಟಲ್ ಸಾಕ್ಷ್ಯಚಿತ್ರ ವ್ಯವಸ್ಥೆ: ಸಚಿವ ಮಧು ಬಂಗಾರಪ್ಪ ಘೋಷಣೆ

Digital documentary system at Bangar Dham: Minister Madhu Bangarappa announces

ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ 14ನೇ ಪುಣ್ಯಸ್ಮರಣೆ; ಅಭಿಮಾನಿಗಳಿಂದ ಭಾವಪೂರ್ಣ ಗೌರವ

Digital documentary system at Bangar Dham: Minister Madhu Bangarappa announces

ಸೊರಬ: ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರ ಜೀವನಗಾಥೆ, ರಾಜಕೀಯ ಪಯಣ ಹಾಗೂ ಮುಖ್ಯಮಂತ್ರಿ ಆಗಿದ್ದ ವೇಳೆ ಸಾಧಿಸಿದ ಮಹತ್ವದ ಕಾರ್ಯಗಳನ್ನು ಒಳಗೊಂಡ ಡಿಜಿಟಲ್ ಸಾಕ್ಷ್ಯಚಿತ್ರವನ್ನು ಶೀಘ್ರದಲ್ಲೇ ಸೊರಬದ ಬಂಗಾರಧಾಮದಲ್ಲಿ ಅಳವಡಿಸಲಾಗುವುದು ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಇಲ್ಲಿನ ಬಂಗಾರಧಾಮದಲ್ಲಿ ಶುಕ್ರವಾರ ಎಸ್. ಬಂಗಾರಪ್ಪ ಅವರ 14ನೇ ಪುಣ್ಯತಿಥಿ ಅಂಗವಾಗಿ ಪೂಜಾ ಕಾರ್ಯಕ್ರಮ ನೆರವೇರಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಬಂಗಾರಧಾಮಕ್ಕೆ ಪ್ರವಾಸಿ ಕೇಂದ್ರದ ಸ್ಥಾನಮಾನ ನೀಡಿರುವುದರಿಂದ ನಾಡಿನ ನಾನಾ ಭಾಗಗಳಿಂದ ಅಭಿಮಾನಿಗಳು ಹಾಗೂ ಬೆಂಬಲಿಗರು ಭೇಟಿ ನೀಡುತ್ತಿದ್ದಾರೆ ಎಂದರು.

ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಬಂಗಾರಪ್ಪ ಅವರು ಜಾರಿಗೆ ತಂದ ಆಶ್ರಯ, ಅಕ್ಷಯ, ಆರಾಧನಾ, ವಿಶ್ವ ಯೋಜನೆಗಳು ಲಕ್ಷಾಂತರ ಬಡವರ ಬದುಕಿಗೆ ಆಶಾಕಿರಣವಾಗಿವೆ. ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ಸೇರಿದಂತೆ ರೈತಪರ ಯೋಜನೆಗಳಿಂದ ಲಾಭ ಪಡೆದ ಜನರು ಇಂದಿಗೂ ಗೌರವಭಾವದಿಂದ ಬಂಗಾರಧಾಮಕ್ಕೆ ಆಗಮಿಸುತ್ತಿದ್ದಾರೆ. ಡಿಜಿಟಲ್ ಸಾಕ್ಷ್ಯಚಿತ್ರ ವ್ಯವಸ್ಥೆ ಕಲ್ಪಿಸಿದರೆ ಬಂಗಾರಪ್ಪ ಅವರ ಬದುಕಿನ ಹಾದಿ ಹೊಸ ಪೀಳಿಗೆಗೂ ಸ್ಪಷ್ಟವಾಗಲಿದೆ ಎಂದು ಹೇಳಿದರು.

ಬಂಗಾರಪ್ಪ ಅವರು ಬರೀ ವ್ಯಕ್ತಿಯಲ್ಲ, ಬಡವರ ಮತ್ತು ಶೋಷಿತರ ಶಕ್ತಿ ತುಂಬಿದ ಜನನಾಯಕ. ಅವರು ದೇಹತಃ ಇಲ್ಲದಿದ್ದರೂ ತಮ್ಮ ಚಿಂತನೆಗಳ ಮೂಲಕ ಜನಮಾನಸದಲ್ಲಿ ಸದಾ ಜೀವಂತವಾಗಿದ್ದಾರೆ. ಅವರ ವಿಚಾರಗಳು ಇಂದಿಗೂ ಪ್ರಸ್ತುತವಾಗಿರುವುದರಿಂದಲೇ ಬಂಗಾರಧಾಮ ಶೋಷಿತರು ಮತ್ತು ಬಡವರ ಚೈತ್ರಭೂಮಿಯಾಗಿದೆ ಎಂದು ಮಧು ಬಂಗಾರಪ್ಪ ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಮಧು ಬಂಗಾರಪ್ಪ ಅವರ ಪತ್ನಿ ಅನಿತಾ, ಪುತ್ರ ಸೂರ್ಯ ಹಾಗೂ ಮಾವನೂ ಆದ ಶಿರಸಿ ಶಾಸಕ ಭೀಮಣ್ಣ ನಾಯ್ಕ ಅವರೊಂದಿಗೆ ಬಂಗಾರಪ್ಪ–ಶಕುಂತಲಾ ದಂಪತಿಯ ಸಮಾಧಿ ಸ್ಥಳದಲ್ಲಿ ಪೂಜಾ ಕಾರ್ಯದಲ್ಲಿ ಪಾಲ್ಗೊಂಡರು. ಸೊರಬ ಕ್ಷೇತ್ರ ಮಾತ್ರವಲ್ಲದೆ ಕಲಬುರಗಿ, ಬೆಂಗಳೂರು, ಶಿವಮೊಗ್ಗ, ಸಾಗರ ಸೇರಿದಂತೆ ವಿವಿಧ ಭಾಗಗಳಿಂದ ಆಗಮಿಸಿದ ಅಭಿಮಾನಿಗಳು ಹೂ ಅರ್ಪಿಸಿ ಗೌರವ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಗಣಪತಿ ಹುಲ್ತಿಕೊಪ್ಪ, ಕೆ.ಪಿ. ರುದ್ರಗೌಡ್ರು, ತಬಲಿ ಬಂಗಾರಪ್ಪ, ಜಯಶೀಲ ಗೌಡ್ರು, ಜಿ.ಡಿ. ಮಂಜುನಾಥ್, ಬ್ಲಾಕ್ ಅಧ್ಯಕ್ಷ ಅಣ್ಣಪ್ಪ ಹಾಲ್ಘಟ್ಟ, ಸದಾ ಗೌಡ್ರು, ಚಂದ್ರಭೂಪಾಲ್, ಎಂ.ಡಿ. ಶೇಖರ್, ಚಿಕ್ಕ ಸವಿ ನಾಗರಾಜ್ ಸೇರಿದಂತೆ ಹಲವು ಮುಖಂಡರು ಹಾಗೂ ಅಪಾರ ಅಭಿಮಾನಿಗಳು ಉಪಸ್ಥಿತರಿದ್ದರು. ಶಹನಾಯ್ ವಾದನದೊಂದಿಗೆ ನಮನ ಸಲ್ಲಿಸಲಾಯಿತು; ಎಲ್ಲರಿಗೂ ಉಪಾಹಾರದ ವ್ಯವಸ್ಥೆ ಮಾಡಲಾಗಿತ್ತು.

ಬಸ್ ಸಂಚಾರಕ್ಕೆ ಚಾಲನೆ

ಇದೇ ಸಂದರ್ಭದಲ್ಲಿ ಶಿವಮೊಗ್ಗ–ಸೊರಬ– ಬನವಾಸಿ – ಶಿರಸಿ ಮಾರ್ಗದಲ್ಲಿ ಗ್ರಾಮೀಣ ಸಂಪರ್ಕಕ್ಕೆ ನೆರವಾಗುವಂತೆ ಎರಡು ಸಾರಿಗೆ ಸಂಸ್ಥೆಯ ಬಸ್‌ಗಳಿಗೆ ಮಧು ಬಂಗಾರಪ್ಪ ಚಾಲನೆ ನೀಡಿದರು. ಗ್ರಾಮೀಣರ ಬೇಡಿಕೆಯ ಹಿನ್ನೆಲೆಯಲ್ಲಿ ಸೊರಬ ಕ್ಷೇತ್ರಕ್ಕೆ ಶೀಘ್ರದಲ್ಲೇ ಇನ್ನೂ 15 ಬಸ್‌ಗಳನ್ನು ಬಿಡುಗಡೆ ಮಾಡಲಾಗುವುದು ಎಂದರು.

ಜನವರಿ ಅಂತ್ಯದೊಳಗೆ ರಾಜ್ಯದ ಎಲ್ಲಾ ರಸ್ತೆಗಳನ್ನು ಗುಂಡಿಮುಕ್ತಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸೊರಬ ಕ್ಷೇತ್ರಕ್ಕೆ ಬಿಡುಗಡೆಯಾದ ₹50 ಕೋಟಿಯಲ್ಲಿ ₹45 ಕೋಟಿಯನ್ನು ರಸ್ತೆ ಅಭಿವೃದ್ಧಿಗೆ ಮೀಸಲಿಡಲಾಗಿದ್ದು, ಕಾಮಗಾರಿ ಈಗಾಗಲೇ ಆರಂಭವಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…

3 hours ago

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…

3 hours ago

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…

4 hours ago

ಹುಂಚ ಆಸ್ಪತ್ರೆಯ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ

ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…

8 hours ago

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…

8 hours ago

ಬೀದಿ ನಾಯಿಗಳ ದಾಳಿಗೆ ಆರು ಕುರಿ ಮರಿಗಳು ಸಾವು

ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…

9 hours ago