ಚಾಲಕನ ನಿಯಂತ್ರಣ ತಪ್ಪಿ ಕಾರು ಕೆರೆಗೆ ಪಲ್ಟಿ : ಇಬ್ಬರು ಸಾವು

Driver loses control, car overturns into lake: Two dead

ಚಾಲಕನ ನಿಯಂತ್ರಣ ತಪ್ಪಿ ಕಾರು ಕೆರೆಗೆ ಪಲ್ಟಿ : ಇಬ್ಬರು ಸಾವು, ಇಬ್ಬರು ಪಾರು

At around 3.20 in the morning, four people were travelling in an Eco car when the driver lost control near the Kanekoppa-Hosur road junction and the car overturned into a roadside lake.


ಸೊರಬ : ಚಾಲಕನ ನಿಯಂತ್ರಣ ಕಳೆದುಕೊಂಡ ಕಾರೊಂದು ಕೆರೆಗೆ ಪಲ್ಟಿಯಾಗಿ ಬಿದ್ದ ಪರಿಣಾಮ ಇಬ್ಬರು ಮೃತಪಟ್ಟಿದ್ದು, ಇನ್ನಿಬ್ಬರು ಪ್ರಾಣಾಪಾಯದಿಂದ ಪಾರಾಗಿರುವ ದುರ್ಘಟನೆ ಸೊರಬ ತಾಲೂಕಿನ ಆನವಟ್ಟಿ ಸಮೀಪದ ಕನೆಕೊಪ್ಪ ಹೊಸೂರು ಬಳಿ ಡಿಸೆಂಬರ್ 24ರ ಮುಂಜಾನೆ ನಡೆದಿದೆ.


ಶಿಕಾರಿಪುರ ತಾಲೂಕಿನ ಪುನೇದಹಳ್ಳಿ ನಿವಾಸಿಗಳಾದ ನವೀನ್ (21) ಮತ್ತು ರಾಮಚಂದ್ರ (37) ಮೃತಪಟ್ಟವರು. ಕಾರು ಕೆರೆಗೆ ಬಿದ್ದ ಕೂಡಲೇ ರಾಮಚಂದ್ರ ನೀರುಪಾಲಾಗಿ ನಾಪತ್ತೆಯಾಗಿದ್ದು, ಶೋಧ ಕಾರ್ಯ ಮುಂದುವರಿದಿದೆ. ರುದ್ರೇಶ್ (26) ಹಾಗೂ ಮಂಜುನಾಥ್ (21) ಎಂಬ ಇಬ್ಬರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.


ಬೆಳಗಿನ ಜಾವ ಸುಮಾರು 3.20ರ ವೇಳೆಗೆ ಶಿಕಾರಿಪುರದಿಂದ ಆನವಟ್ಟಿ ಕಡೆಗೆ ಇಕೋ ಕಾರಿನಲ್ಲಿ ನಾಲ್ವರು ಪ್ರಯಾಣಿಸುತ್ತಿದ್ದ ವೇಳೆ, ಕನೆಕೊಪ್ಪ ಹೊಸೂರು ರಸ್ತೆ ತಿರುವಿನ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಯ ಕೆರೆಗೆ ಪಲ್ಟಿಯಾಗಿದೆ.


ಘಟನಾ ಸ್ಥಳಕ್ಕೆ ಆನವಟ್ಟಿ ಪೊಲೀಸ್ ಠಾಣೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿವರಗಳು ಇನ್ನಷ್ಟೇ ತಿಳಿದುಬರಬೇಕಾಗಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ One-month skill development training on bakery product preparation…

17 hours ago

ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್‌ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ

ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್‌ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ Thirthahalli police…

19 hours ago

ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ

ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ House fire reported at Keelambi…

20 hours ago

ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ

ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ Two traffic police personnel in Shivamogga…

20 hours ago

ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು

ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು Retired Vice Chancellor Prof. M.K. Naik, 63,…

21 hours ago

ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ

ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ Kalluru Meghraj urges the Karnataka government…

2 days ago