POSTMAN NEWS

ನೈಜ ಸುದ್ದಿ ನೇರ ಬಿತ್ತರ..

ಅಡಿಕೆ ಕೊನೆ ಕೊಯ್ಯುವ ವೇಳೆ ವಿದ್ಯುತ್ ಅವಘಡ: ಓರ್ವ ಮೃತ್ಯು, ಮತ್ತೊಬ್ಬ ಗಂಭೀರ

JPEG 20251227 165640

ಅಡಿಕೆ ಕೊನೆ ಕೊಯ್ಯುವ ವೇಳೆ ವಿದ್ಯುತ್ ಅವಘಡ: ಓರ್ವ ಮೃತ್ಯು, ಮತ್ತೊಬ್ಬ ಗಂಭೀರ

The deceased has been identified as Puttaswamy (52). He was electrocuted and died on the spot when the doti he was using while harvesting the last of the areca nuts in an acquaintance’s areca nut plantation accidentally touched an electric wire.

ಶಿವಮೊಗ್ಗ : ಅಡಿಕೆ ತೋಟದಲ್ಲಿ ಕೊನೆ ಕೊಯ್ಯುವ ಸಂದರ್ಭದಲ್ಲಿ ವಿದ್ಯುತ್ ತಂತಿಗೆ ಸ್ಪರ್ಶವಾದ ಪರಿಣಾಮ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಹೊಸನಗರ ತಾಲ್ಲೂಕಿನ ತ್ರಿಣಿವೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಂಡಳ್ಳಿ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಪುಟ್ಟಸ್ವಾಮಿ (52) ಎಂದು ಗುರುತಿಸಲಾಗಿದ್ದು, ಅವರು ಪರಿಚಯಸ್ಥರ ಅಡಿಕೆ ತೋಟದಲ್ಲಿ ಕೊನೆ ಕೊಯ್ಯುವ ವೇಳೆ ಬಳಸುತ್ತಿದ್ದ ದೋಟಿ ಆಕಸ್ಮಿಕವಾಗಿ ವಿದ್ಯುತ್ ತಂತಿಗೆ ತಾಗಿದ ಪರಿಣಾಮ ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಘಟನೆಯ ವೇಳೆ ಅವರ ಜೊತೆಗೆ ಕೆಲಸ ಮಾಡುತ್ತಿದ್ದ ರವಿ ಶೆಟ್ಟಿ (35) ಅವರು ಪುಟ್ಟಸ್ವಾಮಿಯನ್ನು ರಕ್ಷಿಸಲು ಮುಂದಾದಾಗ ಅವರಿಗೆ ಸಹ ವಿದ್ಯುತ್ ಸ್ಪರ್ಶಿಸಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುವನ್ನು ತಕ್ಷಣ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆಯ ಕುರಿತು ಸಂಬಂಧಪಟ್ಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.