ಅಂತಿಮ ಬಿ.ಕಾಂ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು
Final year B.Com student dies of heart attack
ಅಂತಿಮ ಬಿ.ಕಾಂ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು
Final year B.Com student dies of heart attack
Final year B.Com student dies of heart attack
Final year B.Com student dies of heart attack

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ವಿದ್ಯಾರ್ಥಿನಿಯೊಬ್ಬರು ದಿಡೀರ್ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.
ತೀರ್ಥಹಳ್ಳಿ ಮೂಲದ 22 ವರ್ಷದ ವಿದ್ಯಾರ್ಥಿನಿ ದಿಶಾ ಮೃತಪಟ್ಟವರು.
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯ ಜೆಸಿಬಿಎಂ ಕಾಲೇಜಿನಲ್ಲಿ ಅಂತಿಮ ಬಿ.ಕಾಂ ಪದವಿ ವ್ಯಾಸಂಗ ಮಾಡುತ್ತಿದ್ದ ಇವರು ಶೃಂಗೇರಿ ಪೇಟೆಯಲ್ಲಿ ಬಿಸಿಎಂ ಹಾಸ್ಟೆಲ್‌ನಲ್ಲಿ ವಾಸವಾಗಿದ್ದರು. ಹಾಸ್ಟೆಲ್‌ನಲ್ಲಿರುವಾಗಲೇ ದಿಶಾರಿಗೆ ಹಠಾತ್ತನೆ ಎದೆನೋವು ಕಾಣಿಸಿಕೊಂಡಿದೆ.ಪರಿಣಾಮ ಅವರು ಸ್ಥಳದಲ್ಲಿಯೇ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರ ಸಹಪಾಠಿಗಳು ಸಹಾಯಕ್ಕೆ ಧಾವಿಸಿದ್ದರೂ, ಅದಾಗಲೇ ದಿಶಾ ಅವರು ಕೊನೆಯುಸಿರೆಳೆದಿದ್ದರು.
ಮೃತ ದಿಶಾ ತೀರ್ಥಹಳ್ಳಿ ತಾಲೂಕಿನವರಾಗಿದ್ದಾರೆ. ಈ ಅಕಾಲಿಕ ಸಾವಿನ ಸುದ್ದಿಯು ಕಾಲೇಜಿನ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಅವರ ಕುಟುಂಬದ ಸದಸ್ಯರಲ್ಲಿ ತೀವ್ರ ಆಘಾತ ಮತ್ತು ದುಃಖವನ್ನುಂಟುಮಾಡಿದೆ.