Headlines

ಖಾಸಗಿ ಶಾಲೆಗಳ ವ್ಯಾಮೋಹ ತ್ಯಜಿಸಿ ಸರ್ಕಾರಿ ಶಾಲೆಗಳಿಗೆ ಆದ್ಯತೆ ನೀಡಿ – ಶಾಸಕ ಆರಗ ಜ್ಞಾನೇಂದ್ರ

Parents, who understand the importance of education, are placing more faith in government schools. He said that teachers and parents bear equal responsibility in shaping the future of their children and should provide opportunities for sports and cultural activities along with academic studies.

ಖಾಸಗಿ ಶಾಲೆಗಳ ವ್ಯಾಮೋಹ ತ್ಯಜಿಸಿ ಸರ್ಕಾರಿ ಶಾಲೆಗಳಿಗೆ ಆದ್ಯತೆ ನೀಡಿ – ಶಾಸಕ ಆರಗ ಜ್ಞಾನೇಂದ್ರ

Give up the obsession with private schools and give priority to government schools – MLA Araga Gyanendra

ರಿಪ್ಪನ್‌ಪೇಟೆ : ಖಾಸಗಿ ಶಾಲೆಗಳ ವ್ಯಾಮೋಹವನ್ನು ಬಿಟ್ಟು ಸರ್ಕಾರಿ ಶಿಕ್ಷಣ ಸಂಸ್ಥೆಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಮಾಜಿ ಗೃಹ ಸಚಿವರು ಹಾಗೂ ಹಾಲಿ ಶಾಸಕ ಆರಗ ಜ್ಞಾನೇಂದ್ರ ಅವರು ಹೇಳಿದರು. ಭಾರತದಲ್ಲಿ, ವಿಶೇಷವಾಗಿ ಕರ್ನಾಟಕದ ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಇಂದು ಗುಣಮಟ್ಟದ ಶಿಕ್ಷಣ ಲಭ್ಯವಿದ್ದು, ಜಗತ್ತಿನಾದ್ಯಂತ ಅವರಿಗೆ ಉತ್ತಮ ಗೌರವವೂ ಇದೆ ಎಂದು ಅವರು ಅಭಿಪ್ರಾಯಪಟ್ಟರು.

ಗರ್ತಿಕೆರೆ ಗ್ರಾಮದ ಅಮೃತ ಕರ್ನಾಟಕ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಗ್ರಾಮ ಪಂಚಾಯತ್ ಹಾಗೂ ಸಮೂಹ ಸಂಪನ್ಮೂಲ ಕೇಂದ್ರದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಮೃತ ಪಬ್ಲಿಕ್ ಸ್ಕೂಲ್ ನೂತನ ಕಟ್ಟಡ ಉದ್ಘಾಟನೆ ಹಾಗೂ 2025–26ನೇ ಸಾಲಿನ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರು ಮತ್ತು ಉಪನ್ಯಾಸಕರು ಉನ್ನತ ವಿದ್ಯಾರ್ಹತೆ ಹೊಂದಿದ್ದು, ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಆಯ್ಕೆಯಾಗಿರುವವರು. ಸ್ವಾತಂತ್ರ್ಯೋತ್ತರ ಆರಂಭಿಕ ದಿನಗಳಲ್ಲಿ ಸಾಕ್ಷರತೆ ಪ್ರಮಾಣ ಕಡಿಮೆಯಾಗಿದ್ದರೂ, ಇಂದು ಶೇಕಡಾ 88ಕ್ಕೂ ಅಧಿಕ ಜನರು ವಿದ್ಯಾವಂತರಾಗಿದ್ದಾರೆ. ಶಿಕ್ಷಣದ ಮಹತ್ವ ಅರಿತ ಪೋಷಕರು ಸರ್ಕಾರಿ ಶಾಲೆಗಳತ್ತ ಹೆಚ್ಚಿನ ನಂಬಿಕೆ ಇಡುತ್ತಿದ್ದಾರೆ. ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರು ಮತ್ತು ಪೋಷಕರು ಸಮಾನ ಹೊಣೆ ಹೊತ್ತಿದ್ದು, ಪಠ್ಯ ಅಧ್ಯಯನದ ಜೊತೆಗೆ ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೂ ಅವಕಾಶ ನೀಡಬೇಕು ಎಂದು ಹೇಳಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ವಿಧಾನಪರಿಷತ್ ಸದಸ್ಯೆ ಬಲ್ಕೀಶ್ ಭಾನು ಅವರು ಮಾತನಾಡಿ, ಸರ್ಕಾರಿ ಶಾಲೆಗಳು ಇಂದು ಮೂಲಸೌಕರ್ಯ, ಶಿಕ್ಷಕರ ಗುಣಮಟ್ಟ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಖಾಸಗಿ ಶಾಲೆಗಳ ಮಟ್ಟಕ್ಕೆ ತಲುಪುತ್ತಿವೆ. ಗ್ರಾಮೀಣ ಮಕ್ಕಳಿಗೂ ಉತ್ತಮ ಶಿಕ್ಷಣ ದೊರಕಿಸುವ ಉದ್ದೇಶದಿಂದ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಪಾಲಕರು ಸರ್ಕಾರಿ ಶಿಕ್ಷಣ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಇನ್ನಷ್ಟು ಹೆಚ್ಚಿಸಬೇಕು ಎಂದರು.

ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಆರ್.ಎಂ. ಮಂಜುನಾಥ್ ಗೌಡ ಅವರು ಮಾತನಾಡಿ, ಮಲೆನಾಡು ಭಾಗದ ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗೆ ಸರ್ಕಾರ ನಿರಂತರ ಅನುದಾನ ನೀಡುತ್ತಿದ್ದು, ನೂತನ ಶಾಲಾ ಕಟ್ಟಡಗಳು ವಿದ್ಯಾರ್ಥಿಗಳಿಗೆ ಉತ್ತಮ ಕಲಿಕಾ ವಾತಾವರಣ ಒದಗಿಸುತ್ತವೆ. ಶಿಕ್ಷಣವೇ ಸಮಾಜದ ಪ್ರಗತಿಗೆ ಬಲವಾದ ಅಡಿಪಾಯ ಎಂದು ಹೇಳಿದರು.


ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಬಂಡಿ ರಾಮಚಂದ್ರ ಮಾತನಾಡಿ ಸರ್ಕಾರಿ–ಸಹಕಾರಿ ಮನೋಭಾವದಿಂದ ಶಿಕ್ಷಣ ಕ್ಷೇತ್ರದಲ್ಲಿ ನಡೆದ ಕೆಲಸಗಳನ್ನು ಶ್ಲಾಘಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ವೈ. ಗಣೇಶ್ ಮಾತನಾಡಿ ಸರ್ಕಾರಿ ಶಾಲೆಗಳಲ್ಲಿನ ಕಲಿಕೆಯ ಗುಣಮಟ್ಟ ಹೆಚ್ಚಿಸಲು ಶಿಕ್ಷಕರು ಶ್ರಮಿಸುತ್ತಿದ್ದು, ಪೋಷಕರ ಸಹಕಾರ ಅಗತ್ಯವಿದೆ ಎಂದರು.

ಅಮೃತ ಗ್ರಾಮ ಪಂಚಾಯತ್ ಅಧ್ಯಕ್ಷ ಸಚಿನ್ ಗೌಡ ಮಾತನಾಡಿ ಗ್ರಾಮೀಣ ಪ್ರದೇಶದಲ್ಲಿ ಇಂತಹ ಶಿಕ್ಷಣ ಸಂಸ್ಥೆಗಳು ಇನ್ನಷ್ಟು ಬೆಳೆಯಲಿ ಎಂದು ಆಶಯ ವ್ಯಕ್ತಪಡಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ಮಹಮ್ಮದ್ ನಜ್ಹತ್ ಉಲ್ಲಾ ವಹಿಸಿದ್ದರು.

ರಾಷ್ಟ್ರೀಯ ಸೇವಾ ಯೋಜನೆಯ ಸಂಚಾಲಕ ಹಾಗೂ ಹಿರಿಯ ಉಪನ್ಯಾಸಕ ಹಾಲಪ್ಪ ಸಂಕೂರ್ ಸ್ವಾಗತಿಸಿದರು. ಫ್ರಾನ್ಸಿಸ್ ಬೆಂಜಮಿನ್ ಕಾರ್ಯಕ್ರಮ ನಿರೂಪಣೆ ಮತ್ತು ಸಂಯೋಜನೆ ಮಾಡಿದರು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಜನಪ್ರತಿನಿಧಿಗಳು, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಸೋಮಶೇಖರ್, ಮಾಜಿ ಅಧ್ಯಕ್ಷ ಬಶೀರ್ ಅಹಮದ್ ಸಾಬ್, ಹೆಚ್.ಎಸ್. ಅನಂತಮೂರ್ತಿ ಸೇರಿದಂತೆ ಎಸ್‌ಡಿಎಂಸಿ, ಸಿಡಿಸಿ ಸದಸ್ಯರು, ಶಿಕ್ಷಕರು, ಪೋಷಕರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.