With the good intention that children in rural areas should not lag behind in educational activities for any reason, the central and state governments are implementing many schemes to provide quality education, and to attract intelligent and…
ಸರ್ಕಾರಿ ಶಾಲೆಯ ಮಕ್ಕಳೇ ಪ್ರತಿಭಾವಂತರು: ಗೋಪಾಲಕೃಷ್ಣ ಬೇಳೂರು
Government school children are talented: Gopalakrishna Belur
ರಿಪ್ಪನ್ ಪೇಟೆ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ಪಡೆದ ಮಕ್ಕಳೇ ಪ್ರತಿಭಾವಂತರು , ಖಾಸಗಿ ಶಾಲೆಗಳ ಶಿಕ್ಷಣಕ್ಕಿಂತ ಸರ್ಕಾರಿ ಶಾಲೆಯಲ್ಲಿ ನೀಡುತ್ತಿರುವ ಶಿಕ್ಷಣವು ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತೀಣರಾಗುವುದ ಮೂಲಕ ಉನ್ನತ ಉದ್ಯೋಗಗಳನ್ನು ಅಲಂಕರಿಸುವುದಕ್ಕೆ ಕಾರಣವಾಗುತ್ತಿದೆ ಎಂದು ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಕರ್ನಾಟಕ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು.

ಪಟ್ಟಣದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದ್ದ ಶಾಲಾ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು ಗ್ರಾಮೀಣ ಪ್ರದೇಶದ ಮಕ್ಕಳು ಯಾವುದೇ ಕಾರಣಕ್ಕೂ ಶಿಕ್ಷಣಕ್ಕೆ ಚಟುವಟಿಕೆಗಳಲ್ಲಿ ಹಿಂದುಳಿಯ ಬಾರದು ಎಂಬ ಸದುದ್ದೇಶದಿಂದ ಕೇಂದ್ರ ಹಾಗೂ ರಾಜ್ಯ ಸರಕಾರವು ಅನೇಕ ಯೋಜನೆಗಳನ್ನು ಅನುಷ್ಠಾನಗೊಳಿಸುವುದರ ಮೂಲಕ ಉತ್ತಮವಾದ ಶಿಕ್ಷಣವನ್ನು ನೀಡುತ್ತಿದೆ, ಶಿಕ್ಷಣ ಕ್ಷೇತ್ರದಲ್ಲಿ ಬುದ್ದಿವಂತರು ಹಾಗೂ ತರಬೇತಿಯನ್ನು ಹೊಂದಿದಂತಹ ಶಿಕ್ಷಕರುಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಿಕೊಂಡು ಶಿಕ್ಷಕರುಗಳನ್ನಾಗಿ ಉಪನ್ಯಾಸಕರನ್ನಾಗಿ ನೇಮಕ ಮಾಡುವುದರ ಮೂಲಕ ಸರಕಾರಿ ಶಾಲೆಗಳಲ್ಲಿ ಶಿಕ್ಷಣ ಪಡೆಯುತ್ತಿರುವ ಮಕ್ಕಳು ಒಳ್ಳೆಯ ಶಿಕ್ಷಣವನ್ನು ಪಡೆದು ಉನ್ನತ ಉದ್ಯೋಗವನ್ನು ಅಲಂಕರಿಸಿ ಸಮಾಜದ ಮುಖ್ಯ ವಾಹಿನಿಗೆ ಬಂದಾಗ ರಾಷ್ಟ್ರದ ಅಭಿವೃದ್ಧಿಗೆ ಪೂರಕವಾಗುತ್ತದೆ ಎಂದರು.

ಸರಕಾರಿ ಶಾಲೆಗಳಲ್ಲಿ ನೀಡುತ್ತಿರುವ ಶಿಕ್ಷಣವು ಉಚಿತವಾಗಿದ್ದು ಒಂದರಿಂದ ಹತ್ತನೆಯ ತರಗತಿಯಲ್ಲಿ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಪುಸ್ತಕಗಳು,ಯೂನಿಫಾರಂ, ಶೂ, ಹಾಗೂ ಮಧ್ಯಾಹ್ನದ ಊಟ, ಬಿಸಿ ಹಾಲು, ಮೊಟ್ಟೆ,ಕಡ್ಲೆ ಮಿಠಾಯಿ ಯನ್ನು ಸಹ ಉಚಿತವಾಗಿ ನೀಡುತ್ತಿದೆ, ವಿದ್ಯಾರ್ಥಿಗಳು ಪ್ರಾಮಾಣಿಕವಾಗಿ ಹಾಗೂ ನಿಷ್ಠೆಯಿಂದ ಓದಬೇಕು, ತಂದೆ ತಾಯಿಗಳಿಗೆ ಹಿರಿಯರಿಗೆ ಹಾಗೆ ಕಲಿಸಿದ ಗುರುಗಳಿಗೆ ಸಮಾಜದ ಎಲ್ಲಾ ವ್ಯಕ್ತಿಗಳಿಗೆ ಗೌರವ ಕೊಡುವಂತದ್ದು ಬಾಲ್ಯದಲ್ಲಿ ಕಲಿತಾಗ ಮಾತ್ರ ಉತ್ತಮ ಸಮಾಜ ನಿರ್ಮಾಣವಾಗಲು ಸಾಧ್ಯವಾಗುತ್ತದೆ ಎಂದರು.
ಸರಕಾರಿ ಶಾಲೆಗಳ ಅಭಿವೃದ್ಧಿಯ ದೃಷ್ಟಿಯಿಂದ ಸರ್ಕಾರದಿಂದ ಬರುವಂತಹ ಶಾಲಾ ಅಭಿವೃದ್ಧಿಯ ಎಲ್ಲಾ ಅನುದಾನವನ್ನು ಕೊಡಿಸಲು ನಾನು ಸದಾ ಸಿದ್ದನಾಗಿದ್ದು ಶಾಲೆಗಳಿಗೆ ಬೇಕಾಗಿರುವಂತಹ ಮೂಲಭೂತ ಸೌಕರ್ಯಗಳ ಬಗ್ಗೆ ಮಾಹಿತಿ ನೀಡಿದರೆ ತಕ್ಷಣ ಅದಕ್ಕೆ ಪರಿಹಾರವನ್ನು ಒದಗಿಸಲಾಗುತ್ತದೆ ಎಂದು ಈ ಸಂದರ್ಭದಲ್ಲಿ ಹೇಳಿದರು.
ಇದೇ ಸಂಧರ್ಭದಲ್ಲಿ ಶಾಸಕರು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೆರವೇರಿಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿಎಂ ಸಿ ಅಧ್ಯಕ್ಷ ಮಂಜಪ್ಪ ವಹಿಸಿದ್ದರು.
ಈ ಸಂಧರ್ಭದಲ್ಲಿ ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ , ಉಪಾಧ್ಯಕ್ಷ ಸುಧೀಂದ್ರ ಪೂಜಾರಿ , ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ್ ವೈ , ಗ್ರಾಪಂ ಸದಸ್ಯರಾದ ನಿರೂಪ್ ಕುಮಾರ್ , ಆಸೀಫ಼್ , ಮಹಾಲಕ್ಷ್ಮಿ ಅಣ್ಣಪ್ಪ , ದಾನಮ್ಮ , ಮಲ್ಲಿಕಾರ್ಜುನ್ ,ಮಧುಸೂಧನ್ ,ಗ್ಯಾರಂಟಿ ಸಮಿತಿ ಸದಸ್ಯ ರವೀಂದ್ರ ಕೆರೆಹಳ್ಳಿ ಹಾಗೂ ಶಿಕ್ಷಣ ಇಲಾಖೆಯ ಸೋಮಶೇಖರ್ ಬಂಡಿ , ಜಗದೀಶ್ ಕಾಗಿನೆಲೆ , ಕರಿಬಸಪ್ಪ , ನಾಗರಾಜ್ , ಶಿವಮೂರ್ತಿ ಸೇರಿದಂತೆ ಇನ್ನಿತರರು ಇದ್ದರು.