ಸರ್ಕಾರಿ ಶಾಲೆಯ ಮಕ್ಕಳೇ  ಪ್ರತಿಭಾವಂತರು – ಶಾಸಕ ಬೇಳೂರು ಗೋಪಾಲಕೃಷ್ಣ

With the good intention that children in rural areas should not lag behind in educational activities for any reason, the central and state governments are implementing many schemes to provide quality education, and to attract intelligent and…

ಸರ್ಕಾರಿ ಶಾಲೆಯ ಮಕ್ಕಳೇ  ಪ್ರತಿಭಾವಂತರು: ಗೋಪಾಲಕೃಷ್ಣ  ಬೇಳೂರು

Government school children are talented: Gopalakrishna Belur

ರಿಪ್ಪನ್ ಪೇಟೆ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ಪಡೆದ ಮಕ್ಕಳೇ ಪ್ರತಿಭಾವಂತರು , ಖಾಸಗಿ ಶಾಲೆಗಳ ಶಿಕ್ಷಣಕ್ಕಿಂತ ಸರ್ಕಾರಿ ಶಾಲೆಯಲ್ಲಿ ನೀಡುತ್ತಿರುವ ಶಿಕ್ಷಣವು ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತೀಣರಾಗುವುದ ಮೂಲಕ ಉನ್ನತ ಉದ್ಯೋಗಗಳನ್ನು ಅಲಂಕರಿಸುವುದಕ್ಕೆ ಕಾರಣವಾಗುತ್ತಿದೆ ಎಂದು ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಕರ್ನಾಟಕ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ  ಬೇಳೂರು ಹೇಳಿದರು.

ಪಟ್ಟಣದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದ್ದ ಶಾಲಾ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು ಗ್ರಾಮೀಣ ಪ್ರದೇಶದ ಮಕ್ಕಳು ಯಾವುದೇ ಕಾರಣಕ್ಕೂ ಶಿಕ್ಷಣಕ್ಕೆ ಚಟುವಟಿಕೆಗಳಲ್ಲಿ ಹಿಂದುಳಿಯ ಬಾರದು ಎಂಬ ಸದುದ್ದೇಶದಿಂದ ಕೇಂದ್ರ ಹಾಗೂ ರಾಜ್ಯ ಸರಕಾರವು ಅನೇಕ ಯೋಜನೆಗಳನ್ನು ಅನುಷ್ಠಾನಗೊಳಿಸುವುದರ ಮೂಲಕ ಉತ್ತಮವಾದ ಶಿಕ್ಷಣವನ್ನು ನೀಡುತ್ತಿದೆ, ಶಿಕ್ಷಣ ಕ್ಷೇತ್ರದಲ್ಲಿ ಬುದ್ದಿವಂತರು ಹಾಗೂ ತರಬೇತಿಯನ್ನು ಹೊಂದಿದಂತಹ ಶಿಕ್ಷಕರುಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಿಕೊಂಡು ಶಿಕ್ಷಕರುಗಳನ್ನಾಗಿ ಉಪನ್ಯಾಸಕರನ್ನಾಗಿ ನೇಮಕ ಮಾಡುವುದರ ಮೂಲಕ ಸರಕಾರಿ ಶಾಲೆಗಳಲ್ಲಿ ಶಿಕ್ಷಣ ಪಡೆಯುತ್ತಿರುವ ಮಕ್ಕಳು ಒಳ್ಳೆಯ ಶಿಕ್ಷಣವನ್ನು ಪಡೆದು ಉನ್ನತ ಉದ್ಯೋಗವನ್ನು ಅಲಂಕರಿಸಿ ಸಮಾಜದ ಮುಖ್ಯ ವಾಹಿನಿಗೆ ಬಂದಾಗ ರಾಷ್ಟ್ರದ ಅಭಿವೃದ್ಧಿಗೆ ಪೂರಕವಾಗುತ್ತದೆ ಎಂದರು.

ಸರಕಾರಿ ಶಾಲೆಗಳಲ್ಲಿ ನೀಡುತ್ತಿರುವ ಶಿಕ್ಷಣವು ಉಚಿತವಾಗಿದ್ದು   ಒಂದರಿಂದ ಹತ್ತನೆಯ ತರಗತಿಯಲ್ಲಿ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ  ಪುಸ್ತಕಗಳು,ಯೂನಿಫಾರಂ, ಶೂ, ಹಾಗೂ ಮಧ್ಯಾಹ್ನದ ಊಟ, ಬಿಸಿ ಹಾಲು, ಮೊಟ್ಟೆ,ಕಡ್ಲೆ ಮಿಠಾಯಿ ಯನ್ನು ಸಹ ಉಚಿತವಾಗಿ ನೀಡುತ್ತಿದೆ, ವಿದ್ಯಾರ್ಥಿಗಳು ಪ್ರಾಮಾಣಿಕವಾಗಿ ಹಾಗೂ ನಿಷ್ಠೆಯಿಂದ ಓದಬೇಕು, ತಂದೆ ತಾಯಿಗಳಿಗೆ ಹಿರಿಯರಿಗೆ ಹಾಗೆ ಕಲಿಸಿದ ಗುರುಗಳಿಗೆ ಸಮಾಜದ ಎಲ್ಲಾ ವ್ಯಕ್ತಿಗಳಿಗೆ ಗೌರವ ಕೊಡುವಂತದ್ದು ಬಾಲ್ಯದಲ್ಲಿ ಕಲಿತಾಗ ಮಾತ್ರ ಉತ್ತಮ ಸಮಾಜ ನಿರ್ಮಾಣವಾಗಲು ಸಾಧ್ಯವಾಗುತ್ತದೆ ಎಂದರು.

ಸರಕಾರಿ ಶಾಲೆಗಳ ಅಭಿವೃದ್ಧಿಯ ದೃಷ್ಟಿಯಿಂದ ಸರ್ಕಾರದಿಂದ ಬರುವಂತಹ  ಶಾಲಾ ಅಭಿವೃದ್ಧಿಯ ಎಲ್ಲಾ ಅನುದಾನವನ್ನು ಕೊಡಿಸಲು ನಾನು ಸದಾ ಸಿದ್ದನಾಗಿದ್ದು ಶಾಲೆಗಳಿಗೆ ಬೇಕಾಗಿರುವಂತಹ ಮೂಲಭೂತ ಸೌಕರ್ಯಗಳ ಬಗ್ಗೆ ಮಾಹಿತಿ ನೀಡಿದರೆ ತಕ್ಷಣ ಅದಕ್ಕೆ ಪರಿಹಾರವನ್ನು ಒದಗಿಸಲಾಗುತ್ತದೆ ಎಂದು ಈ ಸಂದರ್ಭದಲ್ಲಿ ಹೇಳಿದರು.

ಇದೇ ಸಂಧರ್ಭದಲ್ಲಿ ಶಾಸಕರು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೆರವೇರಿಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿಎಂ ಸಿ ಅಧ್ಯಕ್ಷ ಮಂಜಪ್ಪ ವಹಿಸಿದ್ದರು.

ಈ ಸಂಧರ್ಭದಲ್ಲಿ ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ , ಉಪಾಧ್ಯಕ್ಷ ಸುಧೀಂದ್ರ ಪೂಜಾರಿ , ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ್ ವೈ , ಗ್ರಾಪಂ ಸದಸ್ಯರಾದ ನಿರೂಪ್ ಕುಮಾರ್ , ಆಸೀಫ಼್ , ಮಹಾಲಕ್ಷ್ಮಿ ಅಣ್ಣಪ್ಪ , ದಾನಮ್ಮ , ಮಲ್ಲಿಕಾರ್ಜುನ್ ,ಮಧುಸೂಧನ್ ,ಗ್ಯಾರಂಟಿ ಸಮಿತಿ ಸದಸ್ಯ ರವೀಂದ್ರ ಕೆರೆಹಳ್ಳಿ ಹಾಗೂ ಶಿಕ್ಷಣ ಇಲಾಖೆಯ ಸೋಮಶೇಖರ್ ಬಂಡಿ , ಜಗದೀಶ್ ಕಾಗಿನೆಲೆ , ಕರಿಬಸಪ್ಪ , ನಾಗರಾಜ್ , ಶಿವಮೂರ್ತಿ ಸೇರಿದಂತೆ ಇನ್ನಿತರರು ಇದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ

ರಿಪ್ಪನ್‌ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ “ಕೊಟ್ಟ ಮಾತಿನಂತೆ ವಿದ್ಯುತ್ ದೀಪ ಅಳವಡಿಸಿದ್ದೇನೆ” —…

7 hours ago

ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ

ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ Ripponpete celebrates the 59th annual Ganapati festival with…

9 hours ago

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

1 day ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

2 days ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

2 days ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

2 days ago