Groom dies of heart attack just one day after wedding
ಮದುವೆಯಾದ ಒಂದೇ ದಿನಕ್ಕೆ ಮದುಮಗ ಹೃದಯಾಘಾತದಿಂದ ಸಾವು
Groom dies of heart attack just one day after wedding
ಶಿವಮೊಗ್ಗ: ಮದುವೆಯಾಗಿ ಒಂದೇ ದಿನದಲ್ಲಿ ವರ ಹೃದಯಾಘಾತದಿಂದ ಸಾವನ್ನಪ್ಪಿರುವ ದುರ್ಘಟನೆ ಭದ್ರಾವತಿ ತಾಲೂಕಿನ ಹನುಮಂತಾಪುರದಲ್ಲಿ ನಡೆದಿದೆ.
ನವವಿವಾಹಿತ ರಮೇಶ್ (28) ಅವರು ಸೋಮವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಹರಪನಹಳ್ಳಿಯ ಬಂಡ್ರಿಯ ಮಧುವನ್ನು ರಮೇಶ್ ಭಾನುವಾರ ಶಿವಮೊಗ್ಗದ ಬಿ.ಹೆಚ್ ರಸ್ತೆ ಗಂಗಾಪ್ರಿಯಾ ಕಲ್ಯಾಣ ಮಂಟಪದಲ್ಲಿ ವಿವಾಹವಾಗಿದ್ದರು. ಸೋಮವಾರ ವಧುವಿನ ಮನೆಗೆ ಮೆರವಣಿಗೆ ಮೂಲಕ ಕರೆದುಕೊಂಡು ಹೋದ ಬಳಿಕ, ದೇವರ ಮನೆಯಲ್ಲಿ ಪ್ರಾರ್ಥನೆ ಸಲ್ಲಿಸಲು ತೆರಳಿದ ಸಂದರ್ಭದಲ್ಲಿ ರಮೇಶ್ ಅಚಾನಕ್ ಕುಸಿದು ಬಿದ್ದರು.
ಕುಟುಂಬಸ್ಥರು ತಕ್ಷಣ ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನ ಮಾಡಿದರೂ, ಮಾರ್ಗ ಮಧ್ಯದಲ್ಲೇ ಅವರು ಮೃತಪಟ್ಟಿದ್ದಾರೆ. ಮಂಗಳವಾರ ಹೊಸಕೊಪ್ಪದಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು.
Groom dies of heart attack just one day after wedding
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್