ವಿದ್ಯಾನಗರ ರೈಲ್ವೆ ಫ್ಲೈಓವರ್ ಬಳಿ ಭೀಕರ ಅಪಘಾತ: ಲಾರಿ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾವು
As a result of the collision, Raghavendra fell on the road and at the same time the rear wheel of the lorry ran over his head. As a result, he suffered severe injuries and died on the spot, police said.

ಶಿವಮೊಗ್ಗ: ನಗರದ ವಿದ್ಯಾನಗರದ ರೈಲ್ವೆ ಫ್ಲೈಓವರ್ ಬ್ರಿಡ್ಜ್ ಬಳಿ ಭಾನುವಾರ ಬೆಳಗ್ಗೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.
ಮೃತರನ್ನು ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಕೂಗಲೂರು ಗ್ರಾಮದ ರಾಘವೇಂದ್ರ (40) ಎಂದು ಗುರುತಿಸಲಾಗಿದೆ.
ರಾಘವೇಂದ್ರ ಅವರು ಚನ್ನಗಿರಿ ರಸ್ತೆಯಿಂದ ಶಿವಮೊಗ್ಗ ನಗರದತ್ತ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ, ಅಡಕೆ ತುಂಬಿದ್ದ ಲಾರಿಯೊಂದಿಗೆ ಡಿಕ್ಕಿ ಸಂಭವಿಸಿದೆ ಎನ್ನಲಾಗಿದೆ.
ಡಿಕ್ಕಿಯ ಪರಿಣಾಮವಾಗಿ ರಾಘವೇಂದ್ರ ಅವರು ರಸ್ತೆಗೆ ಬಿದ್ದುಬಿದ್ದಿದ್ದು, ಅದೇ ಸಮಯದಲ್ಲಿ ಲಾರಿಯ ಹಿಂಬದಿ ಚಕ್ರ ಅವರ ತಲೆಯ ಮೇಲೆ ಹರಿದಿದೆ. ಪರಿಣಾಮವಾಗಿ ಅವರು ತೀವ್ರ ಗಾಯಗೊಂಡು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಘಟನಾ ಸ್ಥಳಕ್ಕೆ ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಅಪಘಾತದ ಹಿನ್ನೆಲೆಯಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿದ್ದು, ನಂತರ ಪೊಲೀಸರು ವಾಹನ ಸಂಚಾರವನ್ನು ಸುಗಮಗೊಳಿಸಿದ್ದಾರೆ.