POSTMAN NEWS

ನೈಜ ಸುದ್ದಿ ನೇರ ಬಿತ್ತರ..

HOSANAGARA | ಭೀಕರ ರಸ್ತೆ ಅಪಘಾತ – ಟೈರ್ ಸ್ಪೋಟಗೊಂಡು ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ, ಮಹಿಳೆ ಸಾವು

GridArt 20251228 181518799 wm

HOSANAGARA | ಭೀಕರ ರಸ್ತೆ ಅಪಘಾತ – ಟೈರ್ ಸ್ಪೋಟಗೊಂಡು ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ, ಮಹಿಳೆ ಸಾವು

A woman has died in a horrific road accident. The tire of a moving car suddenly burst, causing the driver to lose control and crash into an electric pole on the side of the road.

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಗೊರಗೋಡು ಗ್ರಾಮದಲ್ಲಿ ಭಾನುವಾರ ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಚಲಿಸುತ್ತಿದ್ದ ಕಾರಿನ ಟೈರ್ ಏಕಾಏಕಿ ಸ್ಪೋಟಗೊಂಡ ಪರಿಣಾಮ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.

ಸಿಗಂದೂರಿನಿಂದ ತೀರ್ಥಹಳ್ಳಿಗೆ ವಾಪಸ್ ಆಗುವ ಸಂದರ್ಭ ಗೊರಗೋಡು ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಯಿಂದ ಕಾರಿನಲ್ಲಿದ್ದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಇತರ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತ ಮಹಿಳೆ ಹಾಗೂ ಕಾರಿನಲ್ಲಿದ್ದವರು ಬೆಂಗಳೂರು ಮೂಲದವರಾಗಿದ್ದಾರೆ ಎಂದು ತಿಳಿದುಬಂದಿದ್ದು, ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ.

ಘಟನೆಯ ಕುರಿತು ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.