Headlines

ಪತ್ನಿಯ ಮೇಲೆ ಪೆಟ್ರೋಲ್ ಸುರಿದು ಕೊಲೆಗೆ ಯತ್ನಿಸಿದ ಪತಿಗೆ 10 ವರ್ಷ ಜೈಲು ಶಿಕ್ಷೆ

ಪತ್ನಿಯ ಮೇಲೆ ಪೆಟ್ರೋಲ್ ಸುರಿದು ಕೊಲೆಗೆ ಯತ್ನಿಸಿದ ಪತಿಗೆ 10 ವರ್ಷ ಜೈಲು ಶಿಕ್ಷೆ

ಶಿವಮೊಗ್ಗ, ಡಿಸೆಂಬರ್ 1: ಪತ್ನಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ಆರೋಪಿಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿರುವುದಾಗಿ ಶಿವಮೊಗ್ಗ 1ನೇ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ತೀರ್ಪು ನೀಡಿದೆ.

ತೀರ್ಥಹಳ್ಳಿ ತಾಲ್ಲೂಕಿನ ಮೂವಳ್ಳಿ ಗ್ರಾಮದ ಆಲ್ಬರ್ಟ್ (45) ಶಿಕ್ಷೆಗೆ ಗುರಿಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಜೊತೆಗೆ ರೂ.15,000 ದಂಡ ಹಾಗೂ ದಂಡ ಪಾವತಿಸಲು ವಿಫಲವಾದಲ್ಲಿ ಹೆಚ್ಚುವರಿ 2 ವರ್ಷಗಳ ಸಾಧಾರಣ ಜೈಲು ಶಿಕ್ಷೆ ಅನುಭವಿಸಲು ನ್ಯಾಯಾಲಯ ಆದೇಶಿಸಿದೆ.

ನ್ಯಾಯಾಧೀಶ ಅಭಯ್ ಧನಪಾಲ್ ಚೌಗಲಾರವರು ತೀರ್ಪು ನೀಡಿದ್ದು, ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಮಮತ ರವರು ವಾದ ಮಂಡಿಸಿದರು.

ಪ್ರಕರಣದ ಹಿನ್ನೆಲೆ:
ಪತ್ನಿ ಕೆಲಸಕ್ಕೆ ಹೋಗಿಲ್ಲವೆಂದು ಆಕ್ರೋಶಗೊಂಡ ಆಲ್ಬರ್ಟ್, ಜಗಳದ ವೇಳೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ್ದಾನೆ. ಈ ಸಂಬಂಧ ಮಾಳೂರು ಪೊಲೀಸ್ ಠಾಣೆಯಲ್ಲಿ 105/2024, U/s 85, 109 (1) BNS ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ಸಬ್‌ ಇನ್ಸ್‌ಪೆಕ್ಟರ್ ಶಿವಾನಂದ ಧರಣ್ಯನವರ್ ಅವರು ಪ್ರಕರಣದ ತನಿಖೆ ನಡೆಸಿ, ದೋಷಾರೋಪಣ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.