Headlines

ಅಮ್ಮನಘಟ್ಟ ಜೇನುಕಲ್ಲಮ್ಮ ದೇವಸ್ಥಾನ ಸಮಿತಿ ಅಧ್ಯಕ್ಷರಾಗಿ ಕಲಗೋಡು ರತ್ನಾಕರ್ ಆಯ್ಕೆ

The Ammanaghatta Jenukallamma Temple Committee, comprising 9 members, was formed by the Muzarai Department, and Kalagodu Ratnakar was elected as the president in the general meeting of the committee held on Monday.

ಅಮ್ಮನಘಟ್ಟ ಜೇನುಕಲ್ಲಮ್ಮ ದೇವಸ್ಥಾನ ಸಮಿತಿ ಅಧ್ಯಕ್ಷರಾಗಿ ಕಲಗೋಡು ರತ್ನಾಕರ್ ಆಯ್ಕೆ

Kalagodu Ratnakar elected as Ammanaghatta Jenukalamma Temple Committee President

ಹೊಸನಗರ: ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಸ್ಥಾನದ ಸಮಿತಿಯ ಅಧ್ಯಕ್ಷರಾಗಿ ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.

ಮುಜರಾಯಿ ಇಲಾಖೆಯ ವತಿಯಿಂದ 9 ಸದಸ್ಯರನ್ನು ಒಳಗೊಂಡಂತೆ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಸ್ಥಾನ ಸಮಿತಿ ರಚಿಸಲಾಗಿದ್ದು, ಸೋಮವಾರ ನಡೆದ ಸಮಿತಿಯ ಸಾಮಾನ್ಯ ಸಭೆಯಲ್ಲಿ ಕಲಗೋಡು ರತ್ನಾಕರ್ ಅವರನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಮಾತನಾಡಿದ ಕಲಗೋಡು ರತ್ನಾಕರ್, ಪ್ರಸ್ತುತ ವರ್ಷದ ಪ್ರವಾಸಿ ತಾಣಗಳ ಪಟ್ಟಿಯಲ್ಲಿ ಅಮ್ಮನಘಟ್ಟ ಜೇನುಕಲ್ಲಮ್ಮ ಕ್ಷೇತ್ರ ಸ್ಥಾನ ಪಡೆದಿರುವುದು ಅತ್ಯಂತ ಸಂತಸದ ವಿಷಯ ಎಂದು ಹೇಳಿದರು. ದೇವಸ್ಥಾನವನ್ನು ರಾಜ್ಯದ ಪ್ರಮುಖ ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಪಡಿಸುವ ಉದ್ದೇಶದಿಂದ ಸಮಿತಿಯು ಅಗತ್ಯವಿರುವ ಎಲ್ಲಾ ರೀತಿಯ ಯೋಜನೆಗಳನ್ನು ರೂಪಿಸಿದ್ದು, ಮುಂದಿನ ದಿನಗಳಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಸಾಮಾನ್ಯ ಸಭೆಯ ಬಳಿಕ ದೇವಸ್ಥಾನ ಸಮಿತಿಯ ಸದಸ್ಯರು ಸಾಗರ–ಹೊಸನಗರ ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣ ಅವರನ್ನು ಅವರ ಸ್ವಗೃಹದಲ್ಲಿ ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಹೊಸನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ. ಚಂದ್ರಮೌಳಿ, ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಚಿದಂಬರ, ದೇವಸ್ಥಾನ ಸಮಿತಿ ಸದಸ್ಯರಾದ ಎಂ.ಪಿ. ಸುರೇಶ್, ಯೋಗೇಂದ್ರ, ಉಮೇಶ್, ಗುರುರಾಜ್, ಶಿವಮ್ಮ, ಹೇಮಾ, ಭದ್ರಪ್ಪಗೌಡ ಹಾಗೂ ದೇವಸ್ಥಾನದ ಅರ್ಚಕರಾದ ಭಾಸ್ಕರ್ ಜೋಯ್ಸ್ ಉಪಸ್ಥಿತರಿದ್ದರು.