ಕೆಂಚನಾಲ | ರೈಲ್ವೆ  ಹಳ್ಳಿ ದಾಟಲು ಪಾದಚಾರಿಗಳಿಗೆ ಅವಕಾಶಕ್ಕೆ ಅಗ್ರಹ – ಶಾಸಕರ ಮನವಿಗೆ ಸ್ಪಂದನೆ

Kenchanala | Demand for pedestrians to cross the railway village – Response to the request of the MLA

ಕೆಂಚನಾಲ | ರೈಲ್ವೆ  ಹಳ್ಳಿ ದಾಟಲು ಪಾದಚಾರಿಗಳಿಗೆ ಅವಕಾಶಕ್ಕೆ ಅಗ್ರಹ – ಶಾಸಕರ ಮನವಿಗೆ ಸ್ಪಂದನೆ

Since there are Gram Panchayat offices, upon our request to leave a gap of 1 or 2 feet for pedestrians to walk at the place where the barrier is being built, we immediately contacted the Railway Department contractor over the phone and after convincing them of the issue, they responded and provided a solution to the problem.

ರಿಪ್ಪನ್‌ಪೇಟೆ;-ಸಮೀಪದ ತಾಳಗುಪ್ಪಾ-ಬೆಂಗಳೂರು ಸಂಪರ್ಕದ ಕೆಂಚನಾಲ ಬಳಿ ರೈಲ್ವೆ ಇಲಾಖೆಯವರು ಗ್ರಾಮಾಂತರ ಪ್ರದೇಶದ ಸಂಪರ್ಕ ರಸ್ತೆಯನ್ನು ಬಂದ್ ಮಾಡಲು ತಡೆಗೋಡೆ ನಿರ್ಮಿಸುತ್ತಿದ್ದು ಇದರಿಂದ ಶಾಲಾ ಮಕ್ಕಳು ಮತ್ತು ಸಾರ್ವನಿಕರು ಕೊಂಕಣಿ ಸುತ್ತಿ ಬರುಬೇಕಾದ ಅನಿವಾರ್ಯತೆ ಎದುರಾಗುತ್ತದೆಂದು ರೈಲ್ವೆ ಇಲಾಖೆಯವರಿಗೆ ತಡೆಗೋಡೆ ಮಾಡುವ ಮಧ್ಯದಲ್ಲಿ ಸ್ಪಲ್ಪ ಜಾಗ ಪಾದಚಾರಿಗಳಿಗೆ ಓಡಾಡಲು ಬಿಡಿ ಎಂದು ಸುತ್ತಮುತ್ತಲಿನ ಗ್ರಾಮಸ್ಥರು ಆಗ್ರಹಿಸಿದರು.

ಇವರ ಆಗ್ರಹಕ್ಕೆ ಮಣಿಯದೆ ಗುತ್ತಿಗೆದಾರ ಯಾವುದೇ ಕಾರಣಕ್ಕೂ ಜಾಗ ಬಿಡುವುದಿಲ್ಲ ಎಂದು ಹಠ ಹಿಡಿದಿದ್ದು ಆಗ ಖಾಸಗಿ ಕಾರ್ಯಕ್ರಮದ ನಿಮಿತ್ತ ಶಾಸಕ ಗೋಪಾಲಕೃಷ್ಣ ಬೇಳೂರು ಇದೇ ಮಾರ್ಗದಲ್ಲಿ ಬರುತ್ತಿದ್ದಾರೆಂಬ ಮಾಹಿತಿಯನ್ನಾದರಿಸಿ ಗ್ರಾಮಸ್ಥರು ಶಾಸಕರನ್ನು ತಡೆದು ಸ್ಥಳಕ್ಕೆ ಕರೆತಂದು ಇಲ್ಲಿ ಶಾಲೆ ಮತ್ತು ಗ್ರಾಮಪಂಚಾಯಿತಿ ಕಛೇರಿಗಳು ಇರುವುದರಿಂದ ನಮಗೆ ತಡೆಗೋಡೆ ಮಾಡುವ ಸ್ಥಳದಲ್ಲಿ ಪಾದಚಾರಿಗಳು ಓಡಾಡಲು 1 ಆಥವಾ 2 ಅಡಿ ಜಾಗ ಗ್ಯಾಪ್ ಬಿಡುವಂತೆ ಕೋರಿಕೊಂಡ ಮೇರೆಗೆ ತಕ್ಷಣ ರೈಲ್ವೆ ಇಲಾಖೆಯ ಗುತ್ತಿಗೆದಾರನಿಗೆ ದೂರವಾಣಿ ಮೂಲಕ ಸಂಪರ್ಕಿಸಿ ವಿಚಾರ ಮನವರಿಕೆ ಮಾಡಿದ ಮೇರೆಗೆ ಸ್ಪಂದಿಸಿ ಸಮಸ್ಯೆಗೆ ಪರಿಹಾರ ಕಲ್ಪಿಸಿದರು.

ಈ ಸಂದರ್ಭದಲ್ಲಿ ತಾಲ್ಲೂಕ್ ಪಂಚಾಯಿತ್ ಮಾಜಿ ಅಧ್ಯಕ್ಷ ವೀರೇಶ್ ಅಲವಳ್ಳಿ, ಕೆಂಚನಾಲ ಗ್ರಾಮ ಪಂಚಾಯಿತ್ ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಉಬೇದುಲ್ಲಾ ಷರೀಫ್,ಇನ್ನಿತರ ನೂರಾರು ಗ್ರಾಮಸ್ಥರು ಹಾಜರಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…

6 hours ago

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…

6 hours ago

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…

6 hours ago

ಹುಂಚ ಆಸ್ಪತ್ರೆಯ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ

ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…

11 hours ago

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…

11 hours ago

ಬೀದಿ ನಾಯಿಗಳ ದಾಳಿಗೆ ಆರು ಕುರಿ ಮರಿಗಳು ಸಾವು

ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…

11 hours ago