ಆನ್ಲೈನ್ನಲ್ಲಿ 1000 ಬ್ಯಾಗ್ ಸಿಮೆಂಟ್ಗೆ ಆರ್ಡರ್ – 4.15 ಲಕ್ಷ ಕಳೆದುಕೊಂಡ ಸಾಗರದ ವ್ಯಕ್ತಿ
ಶಿವಮೊಗ್ಹ: ಆನ್ಲೈನ್ನಲ್ಲಿ ವಸ್ತುಗಳನ್ನು ತಲುಪಿಸುವ ನೆಪದಲ್ಲಿ ಹಣ ಪಡೆದು ಮೋಸ ಮಾಡುವ ಜಾಲಗಳು ಸಕ್ರಿಯವಾಗಿದ್ದು ಇಂತಹ ವಂಚನೆಗೆ ಸಾಗರದ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ.
ಸಿಮೆಂಟ್ ಖರೀದಿಯ ನೆಪದಲ್ಲಿ ಲಕ್ಷಾಂತರ ರೂಪಾಯಿ ಕಳೆದುಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಕಾಮಗಾರಿ ನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬರಿಗೆ 1000 ಬ್ಯಾಗ್ ಸಿಮೆಂಟ್ ಅಗತ್ಯವಿತ್ತು. ಆದರೆ, ಅವರು ಯಾವಾಗಲೂ ಖರೀದಿ ಮಾಡುತ್ತಿದ್ದ ಸಿಮೆಂಟ್ ಅಂಗಡಿಯಲ್ಲಿ ಸ್ಟಾಕ್ ಲಭ್ಯವಿರದ ಕಾರಣ, ಆನ್ಲೈನ್ನಲ್ಲಿ ಖರೀದಿಸಲು ಮುಂದಾಗಿದ್ದಾರೆ. ಈ ಸಂದರ್ಭದಲ್ಲಿ ಅವರಿಗೆ ಅಪರಿಚಿತ ಆನ್ಲೈನ್ ಕಂಪನಿಯೊಂದರ ಮೊಬೈಲ್ ನಂಬರ್ಗಳು ಲಭ್ಯವಾಗಿವೆ.ಈ ನಂಬರ್ಗಳನ್ನು ಸಂಪರ್ಕಿಸಿದಾಗ, ವಂಚಕರು ಕೋರಮಂಡಲ್ ಕಂಪನಿಯ ಹೆಸರನ್ನು ಬಳಸಿಕೊಂಡು, 1000 ಬ್ಯಾಗ್ ಸಿಮೆಂಟ್ ಕಳುಹಿಸಿಕೊಡುವುದಾಗಿ ಒಪ್ಪಂದ ಮಾಡಿಕೊಂಡಿದ್ದಾರೆ. ಬಳಿಕ ದೂರುದಾರರ ವಾಟ್ಸಾಪ್ಗೆ ಕೊಟೇಶನ್ ಮಾಹಿತಿ ಕಳುಹಿಸಿ, ಒಟ್ಟು ಜಿ.ಎಸ್.ಟಿ. ಸೇರಿ 4,15,000 ಹಣವನ್ನು ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ಬೆಂಗಳೂರು ಶಾಖೆಯ ಖಾತೆಗೆ ಪೇ ಮಾಡುವಂತೆ ಹೇಳಿದ್ದಾರೆ.
ವಂಚಕರ ಮಾತನ್ನು ನಂಬಿದ ದೂರುದಾರರು ಹಂತ ಹಂತವಾಗಿ 4,15,000 ಪೇ ಮಾಡಿದ್ದಾರೆ. ಆದರೆ ಕೆಲ ದಿನಗಳು ಕಳೆದರೂ ಸಹ ಸಿಮೆಂಟ್ ತಲುಪಲೇ ಇಲ್ಲ. ಇದರಿಮದ ಗಾಬರಿಗೊಂಡ ದೂರುದಾರ ಅವರು ಮೊಬೈಲ್ ನಂಬರ್ಗಳಿಗೆ ಕರೆ ಮಾಡಿದ್ದಾರೆ. ಆಗ ಅವರ ಫೋನ್ಗಳು ಸ್ವಿಚ್ ಆಫ್ ಆಗಿರುವುದು ತಿಳಿದಿದೆ. ಆಗಲೇ ತಾವು ಮೋಸ ಹೋಗಿರುವುದು ಅರಿತುಕೊಂಡ ದೂರುದಾರರು ಈ ಸಂಬಂಧ ಸಾಗರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್