w
Headlines
Home » ಹೊಸ ವರ್ಷಾಚರಣೆ | ನಶೆ ಏರಿಸಿಕೊಂಡು ಹೋಗುವವರಿಗೆ ವಿಶ್ರಾಂತಿಗೆ ಸ್ಥಳ ವ್ಯವಸ್ಥೆ : ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು..!!???

ಹೊಸ ವರ್ಷಾಚರಣೆ | ನಶೆ ಏರಿಸಿಕೊಂಡು ಹೋಗುವವರಿಗೆ ವಿಶ್ರಾಂತಿಗೆ ಸ್ಥಳ ವ್ಯವಸ್ಥೆ : ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು..!!???

GridArt 20251231

New Year Celebration | Arrangement of places to rest for those who go on drug rides: What did Home Minister Parameshwara say..!!???

ಹೊಸ ವರ್ಷಾಚರಣೆ | ನಶೆ ಏರಿಸಿಕೊಂಡು ಹೋಗುವವರಿಗೆ ವಿಶ್ರಾಂತಿಗೆ ಸ್ಥಳ ವ್ಯವಸ್ಥೆ : ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು..!!???

New Year Celebration | Arrangement of places to rest for those who go on drug rides: What did Home Minister Parameshwara say..!!???

‘ಹೊಸ ವರ್ಷಾಚರಣೆಯ ವೇಳೆ ಮದ್ಯದ ನಶೆ ಏರಿಸಿಕೊಂಡವರನ್ನು ಅವರವರ ಮನೆಗಳಿಗೆ ತಲುಪಿಸುವುದಿಲ್ಲ. ಅತಿಯಾಗಿ ಮದ್ಯ ಸೇವಿಸಿಕೊಂಡು ನಡೆದುಕೊಂಡು ಹೋಗಲು ಸಾಧ್ಯ ಆಗದವರು ಹಾಗೂ ಪ್ರಜ್ಞೆ ಕಳೆದುಕೊಂಡವರ ಸುರಕ್ಷತೆಗೆ ಆದ್ಯತೆ ನೀಡಲಾಗುವುದು’ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಮಹಿಳೆಯರು ಅತಿಯಾದ ಮದ್ಯಪಾನ ಮಾಡಿ ಪ್ರಜ್ಞೆ ಇಲ್ಲದಂತೆ ಇದ್ದರೆ, ನಡೆದಾಡಲೂ ಸಾಧ್ಯವಾಗದ ಪರಿಸ್ಥಿತಿ ಇದ್ದರೆ ಮಾತ್ರ ಆದ್ಯತೆ ಮೇರೆಗೆ ಅವರನ್ನು ಮನೆಗೆ ತಲುಪಿಸುವ ವ್ಯವಸ್ಥೆ ಮಾಡಲಾಗುತ್ತದೆ. ಈ ರೀತಿ ತಲುಪಿಸುವುದಕ್ಕೂ ಮೊದಲು ವಿಶ್ರಾಂತಿ ಸ್ಥಳಗಳಿಗೆ ಕರೆದೊಯ್ಯಲಾಗುವುದು, ಅಲ್ಲಿ ವೈದ್ಯರು, ನರ್ಸ್‌ಗಳು ಪರೀಕ್ಷಿಸಿದ ಬಳಿಕ ಅವರನ್ನು ಮನೆಗೆ ತಲುಪಿಸುವ ಕೆಲಸ ಮಾಡಲಾಗುವುದು. ನಗರದ ವಿವಿಧೆಡೆ 15 ವಿಶ್ರಾಂತಿ ಸ್ಥಳಗಳನ್ನು ಗುರುತಿಸಲಾಗಿದೆ’ ಎಂದರು.

‘ಮದ್ಯಪಾನ ಮಾಡಿದ ಸಂದರ್ಭದಲ್ಲಿ ಯಾವ ರೀತಿ ಇರುತ್ತಾರೆ ಎಂದು ಹೇಳಲು ಸಾಧ್ಯವಿಲ್ಲ. ಆ ಸಮಯದಲ್ಲಿ ಏನು ಬೇಕಾದರೂ ಆಗಬಹುದು, ಕೆಲವು ಕಿಡಿಗೇಡಿಗಳು ಈ ಸಂದರ್ಭವನ್ನು ಬಳಸಿಕೊಳ್ಳುವ ಸಾಧ್ಯತೆ ಇದ್ದು, ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಎಚ್ಚರಿಕೆ ವಹಿಸುವಂತೆ ಸಿಬ್ಬಂದಿಗೆ ತಿಳಿಸಲಾಗಿದೆ. ಬಾರ್, ಪಬ್ ತೆರೆದಿಡಲು ಸಮಯ ನಿಗದಿ ಮಾಡಲಾಗಿದೆ. ರಾತ್ರಿ ಒಂದು ಗಂಟೆಗೆ ಎಲ್ಲ ಬಾರ್‌ಗಳನ್ನು ಮುಚ್ಚಬೇಕು. ಮುಚ್ಚದಿದ್ದರೆ ಪ್ರಕರಣ ದಾಖಲಿಸಲಾಗುವುದು’ ಎಂದರು.

‘ಹೊಸ ವರ್ಷದ ಸಂಭ್ರಮಾಚರಣೆ ಮಾಡಲು ಬೆಂಗಳೂರಿಗೆ ಬಹಳಷ್ಟು ಜನರು ಹೊರಗಿನಿಂದ ಬರುತ್ತಾರೆ. ಸಂಭ್ರಮಾಚರಣೆ ಮಾಡಿ ಮದ್ಯಪಾನ ಮಾಡುತ್ತಾರೆ. ಈ ಸಂದರ್ಭದಲ್ಲಿ ಹೆಚ್ಚು ಜನರು ಸೇರಿದಾಗ ತಳ್ಳಾಟ- ನೂಕಾಟ ಆಗಲಿದೆ. ಅದಕ್ಕಾಗಿ ಹೆಚ್ಚು ಗಮನಹರಿಸಿದ್ದೇವೆ. ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು’ ಎಂದರು.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.