Headlines

ಹುಂಚ | ಅಕ್ರಮ ಮದ್ಯ ಮಾರಾಟ ಅಡ್ಡೆ ಮೇಲೆ ಪೊಲೀಸರ ದಾಳಿ  – ಮಾಲು ಸಮೇತ ಇಬ್ಬರು ವಶಕ್ಕೆ

Police raid illegal liquor shop in Huncha – Two arrested along with goods

ರಿಪ್ಪನ್ ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಆನೆಗದ್ದೆ ಗ್ರಾಮದಲ್ಲಿ ಕಿರಾಣಿ ಅಂಗಡಿಯ ಮುಂಭಾಗ ಸಾರ್ವಜನಿಕರಿಗೆ ಮದ್ಯ ಸೇವನೆಗೆ ಅವಕಾಶ ಕಲ್ಪಿಸಿದ್ದ ಆರೋಪದ ಮೇರೆಗೆ ಎರಡು ಕಡೆ ದಿಡೀರ್ ದಾಳಿ ನಡೆಸಿ ರಿಪ್ಪನ್ ಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಈ ಸಂಬಂಧ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ.

ಅಕ್ರಮ ಮದ್ಯ ಮಾರಾಟದ ಬಗ್ಗೆ ಖಚಿತ ಮಾಹಿತಿ ಪಡೆದ ಸಬ್‌ಇನ್ಸ್‌ಪೆಕ್ಟರ್ ರಾಜುರೆಡ್ಡಿ ನೇತೃತ್ವದಲ್ಲಿ ಪೊಲೀಸರು ಎರಡು ಕಡೆ ದಾಳಿ ನಡೆಸಿ ಮಾಲು ಸಮೇತ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.

ಆನೆಗದ್ದೆ ಗ್ರಾಮದ ಆನಂದ್ ಹಾಗೂ ವೀರೇಶ್ ಎಂಬುವವರ ಕಿರಾಣಿ ಅಂಗಡಿಯ ಮುಂಭಾಗ ಅಕ್ರಮ ಮದ್ಯ ಮಾರಾಟ ಮಾಡಲಾಗುತಿದ್ದು ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನಕ್ಕೆ ಅವಕಾಶ ನೀಡಿರುವುದು ಅಬಕಾರಿ ಕಾಯ್ದೆ ಉಲ್ಲಂಘನೆಯಾಗಿದೆ ಎಂಬ ಹಿನ್ನೆಲೆಯಲ್ಲಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆನೆಗದ್ದೆಯ ವೀರಭದ್ರೇಶ್ವರ ಟ್ರೇಡರ್ಸ್ ಮಾಲೀಕ ಹಿರೆಬೈಲ್ ವೀರೇಶ್ ಮತ್ತು ಆನಂದ್ ಎಂಬುವವರನ್ನು ಮಾಲು ಸಮೇತ ವಶಕ್ಕೆ ಪಡೆದಿದ್ದಾರೆ.

ಈ ಸಂಬಂಧ ಕರ್ನಾಟಕ ಅಬಕಾರಿ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ. ಗ್ರಾಮೀಣ ಪ್ರದೇಶಗಳಲ್ಲಿ ಇಂತಹ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಪೊಲೀಸರು ಮುಂದಾಗಿರುವುದು ಶ್ಲಾಘನೀಯವಾಗಿದೆ.

ಈ ಕಾರ್ಯಾಚರಣೆಯಲ್ಲಿ ಪೊಲೀಸ್ ಸಿಬ್ಬಂದಿಗಳಾದ ಉಮೇಶ್ , ರಾಮಚಂದ್ರ , ಸಂತೋಷ್ ಕೊರವರ , ಪರಮೇಶ್ವರ್ ಹಾಗೂ ಅವಿನಾಶ್ ಇದ್ದರು.