Headlines

ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಯ ನಿವೃತ್ತ ಕಾಂಪೌಂಡರ್ ಮುಕ್ತಿಯಾರ್ ನಿಧನ

Retired Compounder of Ripon Town Government Hospital Muktiyar passed away

ರಿಪ್ಪನ್ ಪೇಟೆ: ಪಟ್ಟಣದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮೂವತ್ತೆರಡು ವರ್ಷಗಳಿಗೂ ಅಧಿಕ ಕಾಲ ಸೇವೆ ಸಲ್ಲಿಸಿ ಜನಮನ ಗೆದ್ದಿದ್ದ ಕಾಂಪೌಂಡರ್ ಮುಕ್ತಿಯಾರ್ ಸಾಬ್ ಅವರು ತೀವ್ರ ಹೃದಯಾಘಾತದಿಂದ ಶನಿವಾರ ರಾತ್ರಿ ನಿಧನರಾಗಿದ್ದಾರೆ.

ಶನಿವಾರ ರಾತ್ರಿ ಅಕಸ್ಮಾತ್ತಾಗಿ ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕುಟುಂಬಸ್ಥರು ಅವರನ್ನು ತಕ್ಷಣ ಶಿವಮೊಗ್ಗದ ನಂಜಪ್ಪ ಲೈಫ್ ಕೇರ್ ಆಸ್ಪತ್ರೆಗೆ ಕರೆದೊಯ್ದರು. ಆದರೆ ಆಸ್ಪತ್ರೆಗೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ದೃಢಪಡಿಸಿದರು.

ಮುಕ್ತಿಯಾರ್ ಸಾಬ್ ಅವರು ಕಳೆದ ಮೂವತ್ತೆರಡು ವರ್ಷಗಳಿಂದ ರಿಪ್ಪನ್ ಪೇಟೆ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಾಂಪೌಂಡರ್ ಆಗಿ ಸೇವೆ ಸಲ್ಲಿಸುತ್ತಿದ್ದರು. ರೋಗಿಗಳೊಂದಿಗೆ ಆತ್ಮೀಯವಾಗಿ ವರ್ತಿಸುವ ಸ್ವಭಾವ, ಸಮಯಪಾಲನೆ ಹಾಗೂ ಕರ್ತವ್ಯನಿಷ್ಠೆಯಿಂದ ಅವರು ಸಾರ್ವಜನಿಕರ ಅಪಾರ ಗೌರವಕ್ಕೆ ಪಾತ್ರರಾಗಿದ್ದರು. ದಿನದ ಯಾವುದೇ ಸಮಯದಲ್ಲೂ ರೋಗಿಗಳ ನೆರವಿಗೆ ಧಾವಿಸುತ್ತಿದ್ದ ಅವರು, ವಿಶೇಷವಾಗಿ ಬಡ ಮತ್ತು ಗ್ರಾಮೀಣ ಜನರಿಗೆ ಆಶ್ರಯವಾಗಿದ್ದರು ಎಂದು ಸ್ಥಳೀಯರು ಸ್ಮರಿಸುತ್ತಿದ್ದಾರೆ.

ಇನ್ನೂ ಅವರ ಸೇವಾ ಅವಧಿಯಲ್ಲಿ ಆಸ್ಪತ್ರೆಯ ಅವಿಭಾಜ್ಯ ಅಂಗವಾಗಿದ್ದರು. ಅವರ ಸೇವಾಭಾವ, ಅನುಭವ ಹಾಗೂ ಮಾನವೀಯತೆ ನಮಗೆ ಸದಾ ಪ್ರೇರಣೆಯಾಗಿತ್ತು” ಎಂದು ಹಲವು ಹಿರಿಯರು ಸಂತಾಪ ವ್ಯಕ್ತಪಡಿಸಿದರು. ಸ್ಥಳೀಯ ಜನಪ್ರತಿನಿಧಿಗಳು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಕೂಡ ಮೃತರ ನಿವಾಸಕ್ಕೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಮೃತರು ಪತ್ನಿ, ನಾಲ್ವರು ಪುತ್ರರು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

Exit mobile version