POSTMANNEWS

ನೈಜ ಸುದ್ದಿ ನೇರ ಬಿತ್ತರ..

RIPPONPETE | ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು

RIPPONPETE | ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು

ರಿಪ್ಪನ್ ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಹೊಸನಗರ ರಸ್ತೆಯ ತಾವರೆಕೆರೆಗೆ ಉರುಳಿಬಿದ್ದ ಘಟನೆ ಇಂದು ಮಧ್ಯಾಹ್ನ ನಡೆದಿದೆ.

ಹಾಸನದಿಂದ ಕೊಲ್ಲೂರಿಗೆ ತೆರಳುತಿದ್ದ ಮಾರುತಿ ಆಲ್ಟೋ ಕಾರು ಹೊಸನಗರ ರಸ್ತೆಯ ತಾವರೆಕೆರೆ ಬಳಿಯಲ್ಲಿ ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿಬಿದ್ದಿರುವ ಘಟನೆ ನಡೆದಿದೆ.ಕಾರಿನಲ್ಲಿ ಮೂವರು ಪ್ರಯಾಣಿಸುತಿದ್ದು ಅದೃಷ್ಟವಶಾತ್ ಘಟನೆಯಲ್ಲಿ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಕಾರು ಏಕಾಏಕಿ ಕೆರೆಗೆ ಉರುಳುತಿದ್ದಂತೆ ಸ್ಥಳೀಯರು ಸಹಾಯಕ್ಕೆ ಧಾವಿಸಿ ಕಾರಲ್ಲಿದ್ದವರನ್ನು ಮೇಲಕ್ಕೆತ್ತಿದ್ದಾರೆ ಎಂದು ತಿಳಿದುಬಂದಿದೆ.

ರಿಪ್ಪನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

About The Author

Exit mobile version