RIPPONPETE | ವರ್ಷದ ಹಿಂದೆ ಮೊಬೈಲ್ ಕಳೆದುಕೊಂಡವರ ಮೊಗದಲ್ಲಿ ಸಂತಸ ಮೂಡಿಸಿದ ರಿಪ್ಪನ್‌ಪೇಟೆ ಪೊಲೀಸರು

RIPPONPETE | Ripponpete Police bring joy to those who lost their mobile phones a year ago

RIPPONPETE | ವರ್ಷದ ಹಿಂದೆ ಮೊಬೈಲ್ ಕಳೆದುಕೊಂಡವರ ಮೊಗದಲ್ಲಿ ಸಂತಸ ಮೂಡಿಸಿದ ರಿಪ್ಪನ್‌ಪೇಟೆ ಪೊಲೀಸರು

Based on the complaint filed with the CEIR, the Rippanpet police, who conducted an investigation, successfully located the mobile phone and handed it over to Nagaraj. The mobile phone, which was lost after years, has been returned, bringing immense joy to the owner of the mobile phone.

ರಿಪ್ಪನ್‌ಪೇಟೆ : ಕಳೆದ ಒಂದು ವರ್ಷದ ಹಿಂದೆ ಮೊಬೈಲ್ ಕಳೆದುಕೊಂಡು ನಿರಾಶರಾಗಿದ್ದ ಪಟ್ಟಣದ ವ್ಯಕ್ತಿಯೊಬ್ಬರಿಗೆ, ರಿಪ್ಪನ್‌ಪೇಟೆ ಪೊಲೀಸರ ಕಾರ್ಯಚರಣೆಯಿಂದ ಮತ್ತೆ ತಮ್ಮ ಮೊಬೈಲ್ ಕೈಗೆ ಬಂದಿದ್ದು, ಅವರ ಮೊಗದಲ್ಲಿ ಸಂತಸ ಮೂಡಿಸಿದೆ.

ಪಟ್ಟಣದ ನಾಗರಾಜ್ ಎಂಬವರು 30/08/2024 ರಂದು ತಮ್ಮ ವೀವೋ ಮೊಬೈಲ್ ಕಳೆದುಹೋಗಿರುವ ಬಗ್ಗೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಮೊಬೈಲ್ ಕಳೆದುಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಇಐಆರ್ (CEIR) ಪೋರ್ಟಲ್‌ನಲ್ಲಿ ದೂರು ದಾಖಲಿಸಲಾಗಿದ್ದು, ಬಳಿಕ ಆ ದೂರು ಪಟ್ಟಣದ ಪೊಲೀಸ್ ಠಾಣೆಗೆ ಹಸ್ತಾಂತರಗೊಂಡಿತ್ತು.

ಸಿಇಐಆರ್‌ನಲ್ಲಿ ದಾಖಲಾಗಿದ್ದ ದೂರಿನ ಆಧಾರದಲ್ಲಿ ತನಿಖೆ ಕೈಗೊಂಡ ರಿಪ್ಪನ್‌ಪೇಟೆ ಪೊಲೀಸರು, ಮೊಬೈಲ್ ಅನ್ನು ಯಶಸ್ವಿಯಾಗಿ ಪತ್ತೆ ಹಚ್ಚಿ ನಾಗರಾಜ್ ಅವರಿಗೆ ಪಟ್ಟಣದ ಪಿಎಸೈ ರಾಜು ರೆಡ್ಡಿ ರವರು ಹಸ್ತಾಂತರಿಸಿದ್ದಾರೆ. ವರ್ಷಗಳ ನಂತರ ಕಳೆದುಕೊಂಡ ಮೊಬೈಲ್ ಮರಳಿ ದೊರೆತಿದ್ದು, ಮೊಬೈಲ್ ಮಾಲೀಕರಿಗೆ ಅಪಾರ ಸಂತಸ ತಂದಿದೆ.

ಈ ಸಂದರ್ಭ ಸಾರ್ವಜನಿಕರಿಗೆ ಸಲಹೆ ನೀಡಿದ ಪಿಎಸ್ಐ ರಾಜು ರೆಡ್ಡಿ ಅವರು, “ಮೊಬೈಲ್ ಕಳೆದುಕೊಂಡರೆ ಗಾಬರಿಯಾಗದೆ ತಕ್ಷಣ ಈ-ಲಾಸ್ಟ್ ಅಥವಾ ಸಿಇಐಆರ್ ಪೋರ್ಟಲ್‌ನಲ್ಲಿ ಅಗತ್ಯ ದಾಖಲೆಗಳೊಂದಿಗೆ ದೂರು ದಾಖಲಿಸಬೇಕು. ಇದರಿಂದ ಕಳುವಾದ ಮೊಬೈಲ್‌ಗಳನ್ನು ಟ್ರೇಸ್ ಮಾಡುವ ಸಾಧ್ಯತೆ ಹೆಚ್ಚಾಗುತ್ತದೆ. ಅಲ್ಲದೇ, ಇಂತಹ ಮೊಬೈಲ್‌ಗಳು ದುರುಪಯೋಗವಾಗದಂತೆ ತಡೆಯಲು ಸಹಕಾರಿಯಾಗುತ್ತದೆ. ಶೇ. 90ರಷ್ಟು ಮೊಬೈಲ್‌ಗಳನ್ನು ಪತ್ತೆಹಚ್ಚಲು ಸಾಧ್ಯವಿದೆ” ಎಂದು ತಿಳಿಸಿದ್ದಾರೆ.

ರಿಪ್ಪನ್‌ಪೇಟೆ ಪೊಲೀಸರ ಈ ಕಾರ್ಯಚರಣೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

14 hours ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

14 hours ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

18 hours ago

ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆ ಮಾಲೀಕ, ಮಾಜಿ ವಕ್ಫ್‌ ಬೋರ್ಡ್ ಅಧ್ಯಕ್ಷ ತಲ್ಕೀನ್ ಅಹ್ಮದ್ ನಿಧನ

ಈಸ್ಟ್‌ವೆಸ್ಟ್‌ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…

20 hours ago

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…

21 hours ago

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

1 day ago