ಗ್ರಾಮೀಣ ಕ್ರೀಡೆಗಳನ್ನು ಉಳಿಸಿ ಬೆಳೆಸಬೇಕಿದೆ – ಶಾಸಕ ಬೇಳೂರು ಗೋಪಾಲಕೃಷ್ಣ

ಗ್ರಾಮೀಣ ಕ್ರೀಡೆಗಳನ್ನು ಉಳಿಸಿ ಬೆಳೆಸಬೇಕಿದೆ – ಶಾಸಕ ಬೇಳೂರು ಗೋಪಾಲಕೃಷ್ಣ

Rural sports need to be preserved and developed – MLA Belur Gopalakrishna

ಬಿಳಿಕಿ ಗ್ರಾಮದಲ್ಲಿ ಜಿಲ್ಲಾ ಮಟ್ಟದ ಹಗ್ಗ ಜಗ್ಗಾಟ ಕ್ರೀಡಾಕೂಟ

Rural sports need to be preserved and developed – MLA Belur Gopalakrishna

Rural sports need to be preserved and developed – MLA Belur Gopalakrishna

Rural sports need to be preserved and developed – MLA Belur Gopalakrishna

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಿಳಿಕಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಹಗ್ಗ ಜಗ್ಗಾಟ ಕ್ರೀಡಾಕೂಟ ಗ್ರಾಮೀಣ ಸಾಂಸ್ಕೃತಿಕ ಸೊಗಡಿನೊಂದಿಗೆ ಯಶಸ್ವಿಯಾಗಿ ನಡೆಯಿತು. ಕ್ರೀಡಾಕೂಟಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಚಾಲನೆ ನೀಡಿದ್ದು, ತಾವೂ ಕ್ರೀಡಾಪಟುಗಳೊಂದಿಗೆ ಹಗ್ಗ ಜಗ್ಗಾಟದಲ್ಲಿ ಭಾಗವಹಿಸಿ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ತಂದರು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ, ಗ್ರಾಮೀಣ ಭಾಗದ ಪಾರಂಪರಿಕ ಕ್ರೀಡೆಗಳು ನಮ್ಮ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿವೆ. ಇಂದಿನ ಯುಗದಲ್ಲಿ ಆಧುನಿಕ ಕ್ರೀಡೆಗಳ ಪ್ರಭಾವ ಹೆಚ್ಚುತ್ತಿರುವುದರಿಂದ ಹಗ್ಗ ಜಗ್ಗಾಟದಂತಹ ಸಾಂಪ್ರದಾಯಿಕ ಕ್ರೀಡೆಗಳು ನಿಧಾನವಾಗಿ ಮರೆಯಾಗುತ್ತಿರುವುದು ವಿಷಾದಕರ ಸಂಗತಿ. ಇವುಗಳನ್ನು ಉಳಿಸಿ ಬೆಳೆಸುವ ಹೊಣೆಗಾರಿಕೆ ಸಮಾಜದ ಪ್ರತಿಯೊಬ್ಬರ ಮೇಲಿದೆ ಎಂದು ಹೇಳಿದರು.

ಹಗ್ಗ ಜಗ್ಗಾಟದಂತಹ ಕ್ರೀಡೆಗಳು ಕೇವಲ ಮನರಂಜನೆಗಾಗಿ ಮಾತ್ರವಲ್ಲ, ದೈಹಿಕ ಆರೋಗ್ಯ, ಮಾನಸಿಕ ಸ್ಥೈರ್ಯ ಹಾಗೂ ತಂಡಭಾವವನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ಗ್ರಾಮೀಣ ಯುವಕರಿಗೆ ಇಂತಹ ಕ್ರೀಡಾಕೂಟಗಳು ಉತ್ತಮ ವೇದಿಕೆಯಾಗಿದ್ದು, ಅವರಲ್ಲಿರುವ ಪ್ರತಿಭೆ ಹೊರಹೊಮ್ಮಲು ಸಹಕಾರಿಯಾಗುತ್ತವೆ ಎಂದು ಅವರು ಅಭಿಪ್ರಾಯಪಟ್ಟರು.

ಮುಂದಿನ ದಿನಗಳಲ್ಲಿ ಕೋಡೂರು ಹಾಗೂ ಜೇನಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪ್ರದೇಶಗಳನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವುದಾಗಿ ಶಪಥಪೂರ್ವಕವಾಗಿ ಘೋಷಿಸಿದರು.

ಕ್ರೀಡಾ ಮೈದಾನಗಳ ಅಭಿವೃದ್ಧಿ, ಯುವಕರಿಗೆ ಅಗತ್ಯ ಮೂಲಸೌಕರ್ಯ ಒದಗಿಸುವುದು ಹಾಗೂ ಗ್ರಾಮೀಣ ಮಟ್ಟದಲ್ಲಿ ನಿರಂತರವಾಗಿ ಕ್ರೀಡಾಕೂಟಗಳನ್ನು ಆಯೋಜಿಸುವ ಮೂಲಕ ಕ್ರೀಡಾ ಚಟುವಟಿಕೆಗಳಿಗೆ ಹೆಚ್ಚಿನ ಉತ್ತೇಜನ ನೀಡಲಾಗುವುದು ಎಂದು ಭರವಸೆ ನೀಡಿದರು.

ಕ್ರೀಡಾಕೂಟದಲ್ಲಿ ಜಿಲ್ಲೆಯ ವಿವಿಧ ಗ್ರಾಮಗಳಿಂದ ಆಗಮಿಸಿದ ತಂಡಗಳು ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಭಾಗವಹಿಸಿ ಕ್ರೀಡಾಸ್ಫೂರ್ತಿಯನ್ನು ಮೆರೆದವು. ಜಯಶಾಲಿ ತಂಡಗಳಿಗೆ ಬಹುಮಾನ ವಿತರಿಸಲಾಯಿತು.

ಈ ಸಂಧರ್ಭದಲ್ಲಿ ಹೊಸನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಢರಾದ ಬಿ ಜಿ ಚಂದ್ರಮೌಳಿ , ಮುಖಂಡರಾದ ಬೋರಣ್ಣ ಬಿಳಿಕಿ , ವೆಂಕಟಾಚಲ , ಮಹೇಂದ್ರ ಬುಕ್ಕಿವರೆ , ಮಧು ಬಿಳಿಕಿ ಮತ್ತು ನಿರ್ಣಾಯಕರಾದ ಸುರೇಶ್ ಸಿಂಗ್ , ರಾಜು ಹಾಗೂ ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯರು, ಮುಖಂಡರು, ಯುವಕರು ಹಾಗೂ ಕ್ರೀಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದು ಕಾರ್ಯಕ್ರಮದ ಯಶಸ್ಸಿಗೆ ಸಾಕ್ಷಿಯಾದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

7 hours ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

8 hours ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

12 hours ago

ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆ ಮಾಲೀಕ, ಮಾಜಿ ವಕ್ಫ್‌ ಬೋರ್ಡ್ ಅಧ್ಯಕ್ಷ ತಲ್ಕೀನ್ ಅಹ್ಮದ್ ನಿಧನ

ಈಸ್ಟ್‌ವೆಸ್ಟ್‌ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…

14 hours ago

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…

14 hours ago

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

24 hours ago