Headlines

ಶಾಮನೂರು ಶಿವಶಂಕರಪ್ಪ ವಿಧಿವಶ | ಹೊಸನಗರ ತಾಲೂಕ್ ಅಖಿಲ ಭಾರತೀಯ ವೀರಶೈವ ಮಹಾಸಭಾ ಸಂತಾಪ

ಶಾಮನೂರು ಶಿವಶಂಕರಪ್ಪ ವಿಧಿವಶ | ಹೊಸನಗರ ತಾಲೂಕ್ ಅಖಿಲ ಭಾರತೀಯ ವೀರಶೈವ ಮಹಾಸಭಾ ಸಂತಾಪ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ ನಾಯಕರು ಹಾಗೂ ಶಾಸಕರಾದ  ಶಾಮನೂರು ಶಿವಶಂಕರಪ್ಪ ನಿಧನವು ವೀರಶೈವ ಲಿಂಗಾಯತ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಹೊಸನಗರ ತಾಲೂಕ್ ಅಖಿಲ ಭಾರತೀಯ ವೀರಶೈವ ಮಹಾಸಭಾ ಅಧ್ಯಕ್ಷರಾದ ಉಮೇಶ್ ಮಸರೂರು ಪತ್ರೀಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ.

ವೀರಶೈವ ಲಿಂಗಾಯತ ಸಮಾಜದ ಗಣ್ಯ ನಾಯಕರೆಂದೇ ಗುರುತಿಸಿಕೊಂಡಿದ್ದ ಶಾಮನೂರು ಶಿವಶಂಕರಪ್ಪ ತಮ್ಮ ನೇರ ನುಡಿ, ದೃಢ ನಿರ್ಧಾರ ಮತ್ತು ಸಮಾಜಮುಖಿ ಚಿಂತನೆಯ ಮೂಲಕ ನಮಗೆಲ್ಲರಿಗೂ ಮಾರ್ಗದರ್ಶಕರಾಗಿದ್ದರು.ಅವರು ವಸತಿ ಸಚಿವರಾಗಿ ಸೇವೆ ಸಲ್ಲಿಸಿದ ಸಂದರ್ಭದಲ್ಲಿ ಹಾಗೂ ಕೊಡುಗೈ ದಾನಿಯಾಗಿ ಸಮಾಜಕ್ಕೆ ನೀಡಿದ ಸೇವೆ ಅಪಾರ. ‘ಕರ್ನಾಟಕದ ಮ್ಯಾಂಚೆಸ್ಟರ್’ ಎಂದೇ ಖ್ಯಾತಿಯಾದ ದಾವಣಗೆರೆಯಲ್ಲಿ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ, ಸಾವಿರಾರು ವಿದ್ಯಾರ್ಥಿಗಳಿಗೆ ಎಂಜಿನಿಯರಿಂಗ್, ವೈದ್ಯಕೀಯ ಸೇರಿದಂತೆ ಉನ್ನತ ಶಿಕ್ಷಣಕ್ಕೆ ಅವಕಾಶ ಕಲ್ಪಿಸುವ ಮೂಲಕ ಸಮಾಜದ ಏಳಿಗೆಗೆ ಅಪೂರ್ವ ಕೊಡುಗೆ ನೀಡಿದ್ದಾರೆ. ವೀರಶೈವ ಲಿಂಗಾಯತ ಸಮಾಜದ ಸಂಘಟನೆಯನ್ನು ಬಲಪಡಿಸಲು ಅವರು ಸಲ್ಲಿಸಿದ ಸೇವೆ ಸ್ಮರಣೀಯ ಎಂದು ಪತ್ರೀಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ ಮುತ್ಸದಿ ಶಾಮನೂರು ಶಿವಶಂಕರಪ್ಪ ಇನ್ನಿಲ್ಲ..

ಕಾಂಗ್ರೆಸ್ ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ಸಂಜೆ ವಿಧಿವಶರಾಗಿದ್ದಾರೆ.

ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರಾದ 94 ವರ್ಷದ ಶಾಮನೂರು ಶಿವಶಂಕರಪ್ಪ ನಿಧನರಾಗಿದ್ದಾರೆ.

ದಶಕಗಳ ಕಾಲ ಸಕ್ರಿಯ ರಾಜಕಾರಣದಲ್ಲಿದ್ದ ಶಾಮನೂರು ಶಿವಶಂಕರಪ್ಪ ಅವರು ಆರು ಬಾರಿ ಶಾಸಕರಾಗಿ ಹಾಗೂ ಒಂದು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. ರಾಜ್ಯದ ವಿವಿಧ ಸರ್ಕಾರಗಳಲ್ಲಿ ಪ್ರಮುಖ ಖಾತೆಗಳನ್ನು ನಿಭಾಯಿಸುವ ಮೂಲಕ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಶಾಮನೂರು ಶಿವಶಂಕರಪ್ಪ ಅವರ ಪುತ್ರ ಎಸ್.ಎಸ್. ಮಲ್ಲಿಕಾರ್ಜುನ ತೋಟಗಾರಿಕೆ ಸಚಿವರಾಗಿದ್ದು ಅವರ ಸೊಸೆ ಪ್ರಭಾ ಮಲ್ಲಿಕಾರ್ಜುನ ಸಂಸದರಾಗಿದ್ದಾರೆ. 1931ರ ಜೂನ್ 16ರಂದು ದಾವಣಗೆರೆಯಲ್ಲಿ ಜನಿಸಿದ್ದ ಶಾಮನೂರು ಶಿವಶಂಕರಪ್ಪ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ವಿಧಾನಸಭೆಯ ಸದಸ್ಯರಾಗಿದ್ದು, ಅವರು ಭಾರತದಲ್ಲಿ ರಾಜ್ಯ ವಿಧಾನಸಭೆಯ ಅತ್ಯಂತ ಹಿರಿಯ ಸದಸ್ಯರಾಗಿದ್ದರು.

ಶಾಮನೂರು ಶಿವಶಂಕರಪ್ಪ ಅವರು ವಿಧಾನಸಭೆಗೆ ಆರು ಸಲ ಶಾಸಕರಾಗಿ, ಒಮ್ಮೆ ಸಂಸದರಾಗಿ ಆಯ್ಕೆಯಾಗಿದ್ದಾರೆ. 1997ರಲ್ಲಿ ದಾವಣಗೆರೆ ಲೋಕಸಭೆ ಮಧ್ಯಂತರ ಚುನಾವಣೆಯಲ್ಲಿ ಸೋಲು ಕಂಡಿದ್ದರು. ಐದು ದೇಶಕದ ರಾಜಕೀಯ ಜೀವನದಲ್ಲಿ ಒಂದು ಬಾರಿ ಸೋಲನ್ನಪ್ಪಿದ್ದರು. 1994, 2004, 2008, 2013, 2018, 2023 ರಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದರು.