Shimoga District Defense Officer Mithun Kumar transfer: Do you know who is the new SP!!? See this news
ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ವರ್ಗಾವಣೆ: ನೂತನ ಎಸ್ಪಿ ಯಾರು ಗೊತ್ತಾ!!? ಈ ಸುದ್ದಿ ನೋಡಿ
Shimoga District Defense Officer Mithun Kumar transfer: Do you know who is the new SP!!? See this news
ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿಯಾಗಿದ್ದ ಜಿ.ಕೆ.ಮಿಥುನ್ ಕುಮಾರ್ ಅವರ ವರ್ಗಾವಣೆ ಆಗಿದ್ದು, ಅವರ ಸ್ಥಾನಕ್ಕೆ ಬಿ.ನಿಖಿಲ್ ಅವರನ್ನು ನೂತನ ಜಿಲ್ಲಾ ರಕ್ಷಣಾಧಿಕಾರಿಯಾಗಿ ಸರ್ಕಾರ ನೇಮಕ ಮಾಡಿದೆ.
ಜಿ.ಕೆ.ಮಿಥುನ್ ಕುಮಾರ್ ಅವರು 2022ರ ಅಕ್ಟೋಬರ್ 5ರಂದು ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಅವರ ಆಡಳಿತಾವಧಿಯಲ್ಲಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ, ಅಪರಾಧ ನಿಯಂತ್ರಣ ಹಾಗೂ ವಿಶೇಷ ಕಾರ್ಯಾಚರಣೆಗಳಿಗೆ ಒತ್ತು ನೀಡಲಾಗಿತ್ತು. ಇದೀಗ ಅವರನ್ನು ಬೆಂಗಳೂರು ನಗರದ ಈಶಾನ್ಯ ವಿಭಾಗದ ಡಿಸಿಪಿ (DCP) ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
ಇದೀಗ ಕೋಲಾರ ಜಿಲ್ಲೆಯ ರಕ್ಷಣಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಬಿ.ನಿಖಿಲ್ ಅವರನ್ನು ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ. ನೂತನ ಎಸ್ಪಿಯಾಗಿ ಅವರು ಶೀಘ್ರದಲ್ಲೇ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
Shivamogga SP Transfer, ಶಿವಮೊಗ್ಗ ಎಸ್ಪಿ ವರ್ಗಾವಣೆ, GK Mithun Kumar Transfer, B Nikhil IPS, Shivamogga Police News, Karnataka Police Transfer
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್