Student drowns while swimming with friends
ಸ್ನೇಹಿತರೊಂದಿಗೆ ಈಜಲು ಇಳಿದ ವಿದ್ಯಾರ್ಥಿ ನೀರುಪಾಲು
Student drowns while swimming with friends
Shivamogga: A student who had gone for a swim in the Tunga River near Pillangiri village in the taluk drowned and died in a tragic incident.
ಶಿವಮೊಗ್ಗ : ತಾಲೂಕಿನ ಪಿಳ್ಳಂಗಿರಿ ಗ್ರಾಮದ ಸಮೀಪ ತುಂಗಾ ನದಿಯಲ್ಲಿ ಈಜಲು ತೆರಳಿದ್ದ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ದುರ್ಘಟನೆ ಸಂಭವಿಸಿದೆ.
ನಗರದ ಕಾಮಾಕ್ಷಿ ಬೀದಿ ನಿವಾಸಿ ಪ್ರೇಮ್ ಕುಮಾರ್ (17) ಮೃತಪಟ್ಟ ವಿದ್ಯಾರ್ಥಿ. ಅವರು ಶಿವಮೊಗ್ಗದ ಡಿವಿಎಸ್ ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದರು.
ಭಾನುವಾರ ಪ್ರೇಮ್ ಕುಮಾರ್ ತಮ್ಮ ಸ್ನೇಹಿತರೊಂದಿಗೆ ಶಿವಮೊಗ್ಗ ತಾಲೂಕಿನ ಪಿಳ್ಳಂಗಿರಿ ದೇವಸ್ಥಾನಕ್ಕೆ ಪ್ರವಾಸ ಕೈಗೊಂಡಿದ್ದರು. ದೇವಸ್ಥಾನದ ದರ್ಶನದ ಬಳಿಕ ಸ್ನೇಹಿತರೊಂದಿಗೆ ತುಂಗಾ ನದಿಯಲ್ಲಿ ಈಜಲು ಇಳಿದಿದ್ದಾರೆ. ಈ ವೇಳೆ ನದಿಯ ಆಳ ಹಾಗೂ ತೀವ್ರ ನೀರಿನ ಸೆಳೆತದಿಂದಾಗಿ ಪ್ರೇಮ್ ಕುಮಾರ್ ಈಜಲಾಗದೆ ನೀರಿನಲ್ಲಿ ಮುಳುಗಿದ್ದಾರೆ ಎಂದು ತಿಳಿದುಬಂದಿದೆ.
ಘಟನೆ ತಿಳಿಯುತ್ತಿದ್ದಂತೆ ಸ್ಥಳದಲ್ಲಿದ್ದವರು ರಕ್ಷಣೆಗೆ ಮುಂದಾದರೂ ಪ್ರಯೋಜನವಾಗಲಿಲ್ಲ. ನಂತರ ಮಾಹಿತಿ ಪಡೆದ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್‌ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…