Headlines

ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು – ಶಾಸಕ ಬೇಳೂರು ಗೋಪಾಲಕೃಷ್ಣ

ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು – ಶಾಸಕ ಬೇಳೂರು ಗೋಪಾಲಕೃಷ್ಣ

well-equipped theatre near the Government Pre-University College and that it will be built under special grant in the coming days. In addition, more emphasis will be given to computer education. He announced that 10 computers will be provided to the college within the next two months. He said that high priority will be given to the education and health sectors.

ರಿಪ್ಪನ್‌ಪೇಟೆ:ವಿದ್ಯಾರ್ಥಿಗಳ ಸಾಂಸ್ಕೃತಿಕ ಹಾಗೂ ಕ್ರೀಡಾ ಪ್ರತಿಭೆ ಪ್ರದರ್ಶನಕ್ಕೆ ಸರ್ಕಾರಿ ಶಿಕ್ಷಣ ಸಂಸ್ಥೆಗಳು ಉತ್ತಮ ವೇದಿಕೆಯಾಗಿವೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು.

ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 2025–26ನೇ ಸಾಲಿನ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದು ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳನ್ನು ಮೀರಿಸುವ ಮಟ್ಟಿಗೆ ಅಭಿವೃದ್ಧಿಯಾಗಿವೆ. ಸರ್ಕಾರಿ ಶಾಲೆಗಳ ಬಗ್ಗೆ ಇರುವ ಕೀಳರಿಮೆಯನ್ನು ತೊರೆದು ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗದಂತೆ ಅಗತ್ಯ ಮೂಲಸೌಕರ್ಯ ಕೊರತೆಯನ್ನು ನೀಗಿಸುವ ಜವಾಬ್ದಾರಿ ನನ್ನದು ಎಂದು ಭರವಸೆ ನೀಡಿದರು.

ಸರ್ಕಾರಿ ಪದವಿ ಪೂರ್ವ ಕಾಲೇಜ್ ಬಳಿಯಲ್ಲಿ ಸುಸಜ್ಜಿತ ರಂಗಮಂದಿರದ ಅಗತ್ಯವಿದ್ದು, ಮುಂಬರುವ ದಿನಗಳಲ್ಲಿ ವಿಶೇಷ ಅನುದಾನದಡಿ ಅದನ್ನು ನಿರ್ಮಿಸಲಾಗುವುದು ಎಂದು ತಿಳಿಸಿದರು. ಜೊತೆಗೆ ಕಂಪ್ಯೂಟರ್ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು. ಮುಂದಿನ ಎರಡು ತಿಂಗಳೊಳಗೆ ಕಾಲೇಜಿಗೆ 10 ಗಣಕಯಂತ್ರಗಳನ್ನು ಒದಗಿಸುವುದಾಗಿ ಘೋಷಿಸಿದರು. ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದರು.

ತಂದೆ-ತಾಯಿಯವರ ಆಶೋತ್ತರಗಳನ್ನು ಈಡೇರಿಸುವುದು ಮಕ್ಕಳ ಪ್ರಮುಖ ಜವಾಬ್ದಾರಿ. ಗುರುಹಿರಿಯರನ್ನು ಗೌರವಿಸುವುದು ವಿದ್ಯಾರ್ಥಿಗಳ ಕರ್ತವ್ಯವಾಗಿದೆ ಎಂದು ಅವರು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಕಾಲೇಜು ಪ್ರಾಚಾರ್ಯ ಕೃಷ್ಣಮೂರ್ತಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಚಂದ್ರಪ್ಪ ಗುಂಡುಪಲ್ಲಿ, ಸಿಡಿಸಿ ಉಪಾಧ್ಯಕ್ಷ ಗೋಪಾಲಕೃಷ್ಣ ಬೇಳೂರು, ಸಿಡಿಸಿ ಸದಸ್ಯರಾದ ಮಹಮ್ಮದ್ ರಫಿ, ಕಟ್ಟೆ ನಾಗಪ್ಪ, ಲೇಖನ ಚಂದ್ರನಾಯ್ಕ್, ಬೋರಪ್ಪ, ಲಲಿತಾರಾಜೇಶ್, ಷಣ್ಮುಖಪ್ಪ, ಗ್ರಾಮ ಪಂಚಾಯತ್ ಸದಸ್ಯರಾದ ಆರ್.ವಿ. ನಿರೂಫ್, ಆಶೀಫ್ ಭಾಷಾ, ಆಶ್ವಿನಿ ರವಿಶಂಕರ್, ಮಹಾಲಕ್ಷ್ಮಿ ಹಾಗೂ ದೇವೇಂದ್ರಪ್ಪ ಗೌಡ ನೆವಟೂರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ 2024–25ನೇ ಸಾಲಿನಲ್ಲಿ ದ್ವಿತೀಯ ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿ ಉತ್ತೀರ್ಣರಾದ ವಿದ್ಯಾರ್ಥಿಗಳು ಹಾಗೂ ಕ್ರೀಡಾ ಚಟುವಟಿಕೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಶಾಸಕ ಬೇಳೂರು ಗೋಪಾಲಕೃಷ್ಣ ಗೌರವಿಸಿ ಅಭಿನಂದಿಸಿದರು.

ಉಪನ್ಯಾಸಕ ಜನಾರ್ಧನ ನಾಯ್ಕ್ ಸ್ವಾಗತಿಸಿದರು. ಸುಜಯ ನಾಡಿಗ್ ಎ.ಹೆಚ್. ನಿರೂಪಿಸಿದರು. ರಾಜೇಶ್ ಬೋಳಾರ್ ವಂದಿಸಿದರು.