ರಿಪ್ಪನ್ ಪೇಟೆ | ಕಾಡಾನೆ ದಾಳಿ ಪ್ರದೇಶಕ್ಕೆ ತಹಶೀಲ್ದಾರ್ ಭರತ್ ರಾಜ್ ಭೇಟಿ – ಸೂಕ್ತ ಪರಿಹಾರದ ಭರವಸೆ
ರಿಪ್ಪನ್ ಪೇಟೆ: ಕೆರೆಹಳ್ಳಿ ವ್ಯಾಪ್ತಿಯಲ್ಲಿ ಕಾಡಾನೆಯೊಂದು ದಾಳಿ ನಡೆಸಿ ತೋಟ ಮತ್ತು ಗದ್ದೆಗಳನ್ನು ನಾಶಮಾಡಿರುವ ವಿಷಯ ತಿಳಿಯುತಿದ್ದಂತೆ ಹೊಸನಗರ ತಹಶೀಲ್ದಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ,ಸೂಕ್ತ ಪರಿಹಾರಕ್ಕೆ ಅರಣ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.
ಶಿವಮೊಗ್ಗ ರಸ್ತೆಯ ಪೆಟ್ರೋಲ್ ಬಂಕ್ ಹಿಂಭಾಗದಲ್ಲಿರುವ ಕೆಳಗಿನ ಕೆರೆಹಳ್ಳಿಯ ಟೀಕಪ್ಪ ಗೌಡರ ತೋಟಕ್ಕೆ ನುಗ್ಗಿದ ಕಾಡಾನೆ ಬಾಳೆಗಿಡಗಳನ್ನು ಮುರಿದು ನಾಶಮಾಡಿದ್ದು, ಅಕ್ಕಪಕ್ಕದ ಗದ್ದೆಗಳು ಕೂಡ ಗಂಭೀರ ಹಾನಿಗೊಳಗಾಗಿತ್ತು ಈ ಹಿನ್ನೆಲೆಯಲ್ಲಿ ದಾಳಿಗೊಳಗಾದ ಸ್ಥಳ ಪರಿಶೀಲನೆ ನಡೆಸಿ ಸಂತ್ರಸ್ಥ ರೈತರಿಗೆ ಸಾಂತ್ವಾನ ಹೇಳಿ ಸೂಕ್ತ ಪರಿಹಾರದ ಭರವಸೆ ನೀಡಿ ಸ್ಥಳದಿಂದಲೇ ಅರಣ್ಯಾಧಿಕಾರಿಗೆ ಕರೆ ಮಾಡಿ ಸೂಚನೆ ನೀಡಿದರು.
ಈ ಸಂಧರ್ಭದಲ್ಲಿ ಉಪ ತಹಶೀಲ್ದಾರ್ ಗೌತಮ್ , ರಾಜಸ್ವ ನಿರೀಕ್ಷಕ ಅಫ಼್ರೋಜ್ ಅಹಮದ್ ,ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು , ಗ್ರಾಪಂ ಸದಸ್ಯ ನಿರೂಪ್ ಕುಮಾರ್ ಸಂತ್ರಸ್ಥ ರೈತರಾದ ಟೀಕಪ್ಪ ಗೌಡ , ಮುರುಳಿ ಕೆರೆಹಳ್ಳಿ ಹಾಗೂ ಇನ್ನಿತರರು ಇದ್ದರು.



