ಇಂದಿನ ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ಅಗತ್ಯ – ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ್ ವೈ

ಇಂದಿನ ಮಕ್ಕಳಿಗೆ ಮೌಲ್ಯಯುತ ಶಿಕ್ಷಣ  ಅಗತ್ಯ – ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ್ ವೈ

ರಿಪ್ಪನ್ ಪೇಟೆ :  ಇಂದಿನ ಆಧುನಿಕ ತಂತ್ರ ಜ್ಞಾನ ದ ಯುಗದಲ್ಲಿ ಮಕ್ಕಳಲ್ಲಿ ಕೇವಲ ಅಂಕಗಳ ಸ್ಪರ್ಧೆಯಲ್ಲ, ಮೌಲ್ಯಾಧಾರಿತ ಶಿಕ್ಷಣವನ್ನು ಬೆಳೆಸುವತ್ತ ಪೋಷಕರು ಮತ್ತು ಶಾಲೆಗಳು ಹೆಚ್ಚಿನ ಗಮನ ಹರಿಸಬೇಕು ಎಂದು ಹೊಸನಗರ ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ್ ವೈ ಹೇಳಿದರು.

ಪಟ್ಟಣದ ಗುಡ್ ಶೆಫರ್ಡ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದ್ದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣವು ವಿದ್ಯಾರ್ಥಿಗಳ ಜೀವನಕ್ಕೆ ದಿಕ್ಕು ತೋರಿಸುವ ಶಕ್ತಿಯಾಗಬೇಕು. ಶಿಸ್ತು, ಪ್ರಾಮಾಣಿಕತೆ, ಸಹಕಾರ, ಮಾನವೀಯ ಮೌಲ್ಯಗಳು ಶಿಕ್ಷಣದ ಅವಿಭಾಜ್ಯ ಅಂಗಗಳಾಗಬೇಕು ಎಂದು ಹೇಳಿದರು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಜ್ಞಾನವಷ್ಟೇ ಅಲ್ಲದೆ ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವುದು ಅತ್ಯವಶ್ಯಕವಾಗಿದೆ ಎಂದು ಅಭಿಪ್ರಾಯಪಟ್ಟರು.

ಪೋಷಕರು ತಮ್ಮ ಮಕ್ಕಳ ವಿದ್ಯಾಭ್ಯಾಸದಲ್ಲಿ ಶಿಕ್ಷಕರೊಂದಿಗೆ ಕೈಜೋಡಿಸಿ, ಮಕ್ಕಳ ಸಾಮರ್ಥ್ಯವನ್ನು ಗುರುತಿಸಿ ಪ್ರೋತ್ಸಾಹಿಸಬೇಕು. ಶಿಕ್ಷಕರು ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಹೊರತರುವಲ್ಲಿ ಮಹತ್ವದ ಪಾತ್ರ ವಹಿಸುತ್ತಾರೆ. ಶಾಲಾ ಹಂತದಲ್ಲಿಯೇ ಮಕ್ಕಳಿಗೆ ಸಮಾಜಮುಖಿ ಚಿಂತನೆ, ರಾಷ್ಟ್ರಭಕ್ತಿ ಹಾಗೂ ಪರಿಸರ ಸಂರಕ್ಷಣೆ  ಸ್ವಚ್ಚತೆಯ ಕುರಿತ ಅರಿವು ಮೂಡಿಸಬೇಕು, ನಮ್ಮ ಗ್ರಾಮೀಣ  ಪ್ರದೇಶದ  ಮಕ್ಕಳು ಕನ್ನಡ ಮಾಧ್ಯಮ ಶಾಲೆಯಲ್ಲಿ ಶಿಕ್ಷಣ ಪಡೆದು ಉನ್ನತ ಶಿಕ್ಷಣ ಪಡೆದು ಸಮಾಜದ ಮುಖ್ಯ ವಾಹಿನಿಗೆ ಬರಬೇಕೆಂದು   ಹೇಳಿದರು.

ಶಾಲಾ ಆಡಳಿತ ಮಂಡಳಿ ಸದಸ್ಯ ಸೆಬಾಸ್ಟಿಯನ್ ಮ್ಯಾಥ್ಯೂಸ್ ಮಾತನಾಡಿ ಮಕ್ಕಳಿಗೆ ಶಿಕ್ಷಣದ ಜೊತೆಗೆ ಸಂಸ್ಕಾರ ಮತ್ತು ಸಾಮಾಜಿಕ ಹೊಣೆಗಾರಿಕೆಯನ್ನು ಬೆಳೆಸುವ ಶಿಕ್ಷಣವೇ ನಿಜವಾದ ಮೌಲ್ಯಯುತ ಶಿಕ್ಷಣವಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಧರ್ಮಗುರುಗಳಾದ ಬಿನೋಯ್ ಮ್ಯಾಥ್ಯೂಸ್, ಆರಾಧನಾ ಸಂಸ್ಥೆಯ ಸಿಸ್ಟೆರ್ ಮರ್ಸಿ ಗ್ರಾಪಂ ಉಪಾಧ್ಯಕ್ಷರಾದ ಸುಧೀಂದ್ರ ಪೂಜಾರಿ , ಗ್ರಾಪಂ ಸದಸ್ಯರಾದ ಮಹಾಲಕ್ಷ್ಮಿ ಅಣ್ಣಪ್ಪ , ಶಿಕ್ಷಣ ಇಲಾಖೆಯ ಕರಿಬಸಪ್ಪ , ಜಗದೀಶ್ ಕಾಗಿನೆಲೆ , ಶಿವರಾಮ್  ಶಾಲಾ ಆಡಳಿತ ಮಂಡಳಿ ಸದಸ್ಯರು, ಮುಖ್ಯ ಶಿಕ್ಷಕರು, ಶಿಕ್ಷಕ ವೃಂದ, ಪೋಷಕರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು. ನೃತ್ಯ, ನಾಟಕ, ಹಾಡುಗಳ ಮೂಲಕ ಶಿಕ್ಷಣದ ಮಹತ್ವವನ್ನು ಸಾರಿದ ವಿದ್ಯಾರ್ಥಿಗಳ ಪ್ರದರ್ಶನಕ್ಕೆ ಸಭಿಕರಿಂದ ಮೆಚ್ಚುಗೆ ವ್ಯಕ್ತವಾಯಿತು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

17 hours ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

18 hours ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

22 hours ago

ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆ ಮಾಲೀಕ, ಮಾಜಿ ವಕ್ಫ್‌ ಬೋರ್ಡ್ ಅಧ್ಯಕ್ಷ ತಲ್ಕೀನ್ ಅಹ್ಮದ್ ನಿಧನ

ಈಸ್ಟ್‌ವೆಸ್ಟ್‌ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…

24 hours ago

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…

1 day ago

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

1 day ago