Headlines

RIPPONPETE | ಪಡಿತರ ಅಕ್ಕಿ ಅಕ್ರಮ ದಾಸ್ತಾನು – ಪಿಎಸ್ಐ ರಾಜುರೆಡ್ಡಿ ನೇತೃತ್ವದ ಸಿಬ್ಬಂದಿಗಳಿಂದ ದಾಳಿ, ಮಾಲು ಸಮೇತ ಓರ್ವ ವಶಕ್ಕೆ.!

RIPPONPETE | ಪಡಿತರ ಅಕ್ಕಿ ಅಕ್ರಮ ದಾಸ್ತಾನು – ಪಿಎಸ್ಐ ರಾಜುರೆಡ್ಡಿ ನೇತೃತ್ವದ ಸಿಬ್ಬಂದಿಗಳಿಂದ ದಾಳಿ, ಮಾಲು ಸಮೇತ ಓರ್ವ ವಶಕ್ಕೆ.! ರಿಪ್ಪನ್‌ಪೇಟೆ, ಸೆಪ್ಟೆಂಬರ್ 27:ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪಡಿತರ ಅಕ್ಕಿಯ ಅಕ್ರಮ ದಾಸ್ತಾನು ಪತ್ತೆಯಾಗಿದ್ದು ಪಟ್ಟಣದ ಪಿಎಸ್ ಐ ರಾಜುರೆಡ್ಡಿ ನೇತ್ರತ್ವದ ಸಿಬ್ಬಂದಿಗಳು ದಾಳಿ ನಡೆಸಿ ಮಾಲು ಸಮೇತ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ. ಸರ್ಕಾರ ಬಡ ಕುಟುಂಬಗಳಿಗೆ ಉಚಿತವಾಗಿ ವಿತರಿಸುವ ಪಡಿತರ ಅಕ್ಕಿಯನ್ನು ಕೆಲವು ಜನರು ಅಕ್ರಮವಾಗಿ ಸಂಗ್ರಹಿಸಿ ಮಾರುಕಟ್ಟೆಗೆ…

Read More

ಶಿವಮೊಗ್ಗದ ಮೆಡಿಕಲ್ ಕಾಲೇಜಿನ ವೈದ್ಯೆ ಗೆ 1 ಕೋಟಿ 81 ಲಕ್ಷ  ರೂ ವಂಚನೆ

ಶಿವಮೊಗ್ಗದ ಮೆಡಿಕಲ್ ಕಾಲೇಜಿನ ವೈದ್ಯೆ ಗೆ 1 ಕೋಟಿ 81 ಲಕ್ಷ  ರೂ ವಂಚನೆ ಶಿವಮೊಗ್ಗ : ನಗರದ ಪ್ರತಿಷ್ಠಿತ ಮೆಡಿಕಲ್ ಕಾಲೇಜಿನ ಕಾರ್ಯನಿರ್ವಹಿಸುವ  ವೈದ್ಯೆ ಗೆ  1 ಕೋಟಿ 81 ಲಕ್ಷದ 33 ಸಾವಿರದ 770 ರೂಗಳ ಮೋಸ ನಡೆದಿದ್ದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ನಗರದ ಪ್ರತಿಷ್ಠಿತ ಮೆಡಿಕಲ್ ಕಾಲೇಜಿನ ಕಾರ್ಯನಿರ್ವಹಿಸುವ ವೈದ್ಯೆ ಒಬ್ಬರಿಗೆ ಒಬ್ಬ ಅಪರಿಚಿತ ವ್ಯಕ್ತಿ ದಿನಾಂಕ 26/4 /2025 ರಂದು ಕರೆ ಮಾಡಿ ನಾವು ಬುಲ್ ಮಾರ್ಕೆಟ್  ಎಂಬ‌ ಕಂಪನಿ…

Read More

ವಿದ್ಯುತ್ ಸ್ಪರ್ಶ – ವಿದ್ಯಾರ್ಥಿ ಸಾವು

ವಿದ್ಯುತ್ ಸ್ಪರ್ಶ – ವಿದ್ಯಾರ್ಥಿ ಸಾವು ಶಿವಮೊಗ್ಗ: ಹಾಡೋನಹಳ್ಳಿಯಲ್ಲಿ ವಿದ್ಯುತ್ ಸ್ಪರ್ಶವಾಗಿ ಬಾಲಕನೊಬ್ಬ ಜೀವ ಕಳೆದುಕೊಂಡಿರುವ ಘಟನೆ ವರದಿಯಾಗಿದೆ. ಹಾಡೋನಹಳ್ಳಿಯ ಅಂಬಾಭವಾನಿ ದೇವಸ್ಥಾನಕ್ಕೆ ನವರಾತ್ರಿಯ ಹಿನ್ನೆಲೆಯಲ್ಲಿ ವಿದ್ಯುತ್ ದೀಪದ ಅಲಂಕಾರ ಮಾಡಲಾಗಿದೆ. ದೇವಸ್ಥಾನಕ್ಕೆ ಹಾಕಿದ ಸೀರಿಯಲ್ ಸೆಟ್ ಅಲಂಕಾರವನ್ನ ದೇವಸ್ಥಾನದ ಗೇಟಿಗೆ ಸಹ ಹಾಕಲಾಗಿದೆ. ಈ ವೇಳೆ ಸೀರಿಯಲ್ ಸೆಟ್ ಸ್ಕಿನ್ ಆಗಿದ್ದರಿಂದ ಗೇಟ್ ಗೂ ವಿದ್ಯುತ್ ಚ್ಛಕ್ತಿ ಹರಿದಿದೆ. ಗ್ರಾಮದ ಬಾಲಕ ಸಮರ್ಥ (೧೪) ಗೇಟನ್ನು ಮುಟ್ಟುತ್ತಿದ್ದಂತೆ ಶಾಕ್ ಹೊಡೆದು ಅಸ್ವಸ್ಥನಾಗಿದ್ದಾನೆ. ಆಸ್ಪತ್ರೆಗೆ ತರುವಾಗ ಬಾಲಕ…

Read More

ಲೈಂಗಿಕ ದೌರ್ಜನ್ಯ ಪ್ರಕರಣ ; 19 ವರ್ಷದ ಯುವಕನಿಗೆ 20 ವರ್ಷ ಜೈಲು , 80 ಸಾವಿರ ದಂಡ ವಿಧಿಸಿ ಕೋರ್ಟ್ ಆದೇಶ

ಲೈಂಗಿಕ ದೌರ್ಜನ್ಯ ಪ್ರಕರಣ ; 19 ವರ್ಷದ ಯುವಕನಿಗೆ 20 ವರ್ಷ ಜೈಲು , 80 ಸಾವಿರ ದಂಡ ವಿಧಿಸಿ ಕೋರ್ಟ್ ಆದೇಶ ಶಿವಮೊಗ್ಗ: 15 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಭದ್ರಾವತಿ ತಾಲ್ಲೂಕಿನ 19 ವರ್ಷದ ಯುವಕನಿಗೆ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ ₹80 ಸಾವಿರ ದಂಡ ವಿಧಿಸಿ ಮಂಗಳವಾರ ಆದೇಶಿಸಿದೆ. 2022ರಲ್ಲಿ ಬಾಲಕಿಯ ಲೈಂಗಿಕ ದೌರ್ಜನ್ಯ ನಡೆಸಿದ್ದ ಆರೋಪಿ ನಂತರ ಆಕೆಯನ್ನು ಮದುವೆಯಾಗಿದ್ದ. ಈ…

Read More

ನೇಣಿಗೆ ಕೊರಳೊಡ್ಡಲು ಮುಂದಾದ ವ್ಯಕ್ತಿ | ವೀಡಿಯೋ ಕಾಲ್ ನಲ್ಲಿ ಆತ್ಮ*ಹತ್ಯೆ ಬಗ್ಗೆ ಮಾಹಿತಿ | ಅಷ್ಟರಲ್ಲಿ ಮನೆಗೆ ಬಂದ ಪೊಲೀಸ್‌, ಆಗಿದ್ದೇನು?

ಫ್ಯಾನಿಗೆ ಕೊರಳೊಡ್ಡಲು ಮುಂದಾದ ವ್ಯಕ್ತಿ | ವೀಡಿಯೋ ಕಾಲ್ ನಲ್ಲಿ ಆತ್ಮ*ಹತ್ಯೆ ಬಗ್ಗೆ ಮಾಹಿತಿ | ಅಷ್ಟರಲ್ಲಿ ಮನೆಗೆ ಬಂದ ಪೊಲೀಸ್‌, ಆಗಿದ್ದೇನು? ಶಿವಮೊಗ್ಗ: ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಳ್ಳಲು ಯತ್ನಿಸಿದ್ದ ವ್ಯಕ್ತಿಯನ್ನು ಪೊಲೀಸರು ರಕ್ಷಿಸಿದ್ದಾರೆ. ಶಿವಮೊಗ್ಗ ನಗರದ ಆಲ್ಕೊಳ ಬಡಾವಣೆಯ ಮನೆಯೊಂದರಲ್ಲಿ ಈ ಘಟನೆ ನಡೆದಿದೆ. ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಳ್ಳುವುದಾಗಿ ವ್ಯಕ್ತಿಯೊಬ್ಬರು ತಮ್ಮ ಸಂಬಂಧಿಕರಿಗೆ ವಿಡಿಯೋ ಕಾಲ್‌ನಲ್ಲಿ ತಿಳಿಸಿದ್ದರು. ಈ ಕುರಿತು ಮಾಹಿತಿ ಪಡೆದ 112 ಇಆರ್‌ಎಸ್‌ಎಸ್‌ ಸಿಬ್ಬಂದಿ ಜಗದೀಶ್ ಮತ್ತು ಚಾಲಕ ಮಂಜುನಾಥ್…

Read More

ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕಕ್ಕೆ ಹೊಸ ನೇತೃತ್ವ – ಶ್ವೇತಾ ಬಂಡಿ ಅಧಿಕಾರ ಸಮಾರಂಭ ನಾಳೆ

ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕಕ್ಕೆ ಹೊಸ ನೇತೃತ್ವ – ಶ್ವೇತಾ ಬಂಡಿ ಅಧಿಕಾರ ಸಮಾರಂಭ ನಾಳೆ | ಸಮಾರಂಭದಲ್ಲಿ ಗೀತಾ ಶಿವರಾಜ್‌ಕುಮಾರ್ ಸೇರಿದಂತೆ ಅನೇಕ ಗಣ್ಯರು ಭಾಗಿ ಶಿವಮೊಗ್ಗ: ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ವತಿಯಿಂದ ಸೆಪ್ಟೆಂಬರ್ 27ರಂದು ಬೆಳಿಗ್ಗೆ 11 ಗಂಟೆಗೆ ನಗರದ ಬಂಜಾರ ಕನ್ವೆನ್ಸನ್ ಹಾಲ್‌ನಲ್ಲಿ ನೂತನ ಜಿಲ್ಲಾಧ್ಯಕ್ಷರಾಗಿ ನೇಮಕಗೊಂಡಿರುವ ಶ್ವೇತಾ ಬಂಡಿ ಅವರ ಅಧಿಕಾರ ಪದಗ್ರಹಣ ಸಮಾರಂಭವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನಕುಮಾರ್ ಮಾಹಿತಿ ನೀಡಿದರು. ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ…

Read More

ಜಾತಿ ಗಣತಿ ಸಮೀಕ್ಷೆ ಕರ್ತವ್ಯಕ್ಕೆ ಗೈರು – ಹೊಸನಗರ‍ ಶಿಕ್ಷಣ ಇಲಾಖೆಯ ಅಧಿಕಾರಿ ಅಮಾನತು

ಜಾತಿ ಗಣತಿ ಸಮೀಕ್ಷೆ ಕರ್ತವ್ಯಕ್ಕೆ ಗೈರು – ಹೊಸನಗರ‍ ಶಿಕ್ಷಣ ಇಲಾಖೆಯ ಅಧಿಕಾರಿ ಅಮಾನತು ರಾಜ್ಯದಲ್ಲಿ ಸೆಪ್ಟೆಂಬರ್ 22ರಿಂದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಆರಂಭವಾಗಿದೆ. ಈ ಸಮೀಕ್ಷೆಯನ್ನು ಯಶಸ್ವಿಯಾಗಿ ಮುನ್ನಡೆಸಲು ರಾಜ್ಯದ ಸರ್ಕಾರಿ ಶಿಕ್ಷಕರನ್ನು ನೇಮಿಸಲಾಗಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಶಿಕ್ಷಣ ಇಲಾಖೆ ಅಧಿಕಾರಿಯಾದ ಎಂ. ರಂಗನಾಥ್ ಅವರು ಕರ್ತವ್ಯಕ್ಕೆ ಗೈರುರಾಗಿದ್ದ ಕಾರಣದಿಂದ ಅಮಾನತುಗೊಳಿಸಲಾಗಿದ್ದು, ಈ ಬಗ್ಗೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಅವರು ಆದೇಶ ಹೊರಡಿಸಿದ್ದಾರೆ. ಎಂ. ರಂಗನಾಥ್ ಅವರು…

Read More

DIGITAL ARREST | ವಿಡಿಯೋ ಕರೆಯಲ್ಲೇ ವ್ಯಕ್ತಿಗೆ 19 ಲಕ್ಷ ರೂ. ವಂಚನೆ

DIGITAL ARREST | ವಿಡಿಯೋ ಕರೆಯಲ್ಲೇ ವ್ಯಕ್ತಿಗೆ 19 ಲಕ್ಷ ರೂ. ವಂಚನೆ ಶಿವಮೊಗ್ಗ:  ವಿಡಿಯೋ ಕಾಲ್‌ನಲ್ಲೇ ಅರೆಸ್ಟ್ ಮಾಡಿ, ವಿಡಿಯೋ ಕಾಲ್‌ನಲ್ಲೇ ಬೇಲ್ ಕೊಡಿಸಿ ಹಣ ಪಡೆದು ವಂಚಿಸಿದ ಘಟನೆ  ಶಿವಮೊಗ್ಗದಲ್ಲಿ ನಡೆದಿದ್ದು,  ವ್ಯಕ್ತಿಯೊಬ್ಬರಿಗೆ ೧೯ ಲಕ್ಷ ರೂ. ವಂಚಿಸಲಾಗಿದೆ. ಶಿವಮೊಗ್ಗದ ನಿವೃತ್ತ ಉದ್ಯೋಗಿಯೊಬ್ಬರನ್ನು ಗುರಿಯಾಗಿಸಿ ವಾಟ್ಸಪ್‌ನಲ್ಲಿ ವಿಡಿಯೋ ಕಾಲ್ ಮಾಡಲಾಗಿದೆ. ಮುಂಬೈನ ಕೊಲಾಬ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಶಿಖಾವತ್ ಎಂದು ಆತ ಪರಿಚಯಿಸಿಕೊಂಡಿದ್ದ. ವಂಚನೆ ಪ್ರಕರಣದಲ್ಲಿ ನಿಮ್ಮ ಹೆಸರಿದೆ. ಹಾಗಾಗಿ ಈ ಕೂಡಲೆ ಅರೆಸ್ಟ್…

Read More

ಬೆಳಕೋಡು ಹಾಲಸ್ವಾಮಿ ಗೌಡ ನಿಧನ |ಮೃತರ ಅಂತಿಮ ದರ್ಶನ ಪಡೆದ ಶಾಸಕ ಬೇಳೂರು ಗೋಪಾಲಕೃಷ್ಣ

ರಿಪ್ಪನ್‌ಪೇಟೆ ; ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅಭುವೃದ್ದಿ ಸಮಿತಿ ಉಪಾಧ್ಯಕ್ಷರು , ಕೆಂಜಿಗಾಪುರದ ವೀರಭದ್ರಸ್ವಾಮಿ ದೇವಸ್ಥಾನದ ಧರ್ಮದರ್ಶಿ ಸಮಿತಿಯ ಅಧ್ಯಕ್ಷ, ಅಕ್ಷಯಸಾಗರ ಸೌಹಾರ್ದ ಸಹಕಾರ ಬ್ಯಾಂಕ್‌ನ ಮಾಜಿ ಆಧ್ಯಕ್ಷರು ಹಾಗೂ ಶ್ರೀಬಸವೇಶ್ವರ ವೀರಶೈವ ಸಮಾಜದ ನಿರ್ದೇಶಕರಾದ ಕಾರಗೋಡು ಗ್ರಾಮದ ಬೆಳಕೋಡು ನಿವಾಸಿ ಹಾಲಸ್ವಾಮಿಗೌಡ (77) ಅನಾರೋಗ್ಯದ ಹಿನ್ನಲೆಯಲ್ಲಿ ಇಂದು ಗುರುವಾರ ಸಂಜೆ 5:00 ಗಂಟೆಗೆ ತಮ್ಮ ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಇಬ್ಬರು ಪುತ್ರಿಯರು, ಇಬ್ಬರು ಪುತ್ರರು ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಅಂತಿಮ…

Read More

ಬದುಕು ಕಟ್ಟಿಕೊಳ್ಳಲು ಶಿಕ್ಷಣ ಅಗತ್ಯ ; ಆನಂದಪುರ ಶ್ರೀ

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ ; ವಿದ್ಯಾರ್ಥಿಗಳಲ್ಲಿ ಕೃಷಿಯ ಬಗ್ಗೆ ಕೀಳರಿಮೆ ಇರಬಾರದು. ಈ ಹಿಂದೆ ಅಮೇರಿಕಾ ದೇಶದಿಂದ ಗೋಧಿಯನ್ನು ಆಮದು ಮಾಡಿಕೊಂಡು ಶಾಲಾ ಮಕ್ಕಳಿಗೆ ಗೋಧಿ ಉಪ್ಪಿಟ್ಟು ನೀಡುವ ಕಾಲವೊಂದಿತ್ತು ಅಷ್ಟು ಬಡತನದ ದೇಶವಾಗಿದ್ದ ಭಾರತ ಮುಂದುವರೆದಂತೆ ನಮ್ಮ ದೇಶದಲ್ಲಿ ಕೃಷಿಗೆ ಹೆಚ್ಚು ಒತ್ತು ನೀಡುವ ಮೂಲಕ ಆಹಾರದ ಕೊರತೆಯನ್ನು ದೂರ ಮಾಡಿ ವಿದೇಶಕ್ಕೆ ರಫ್ತು ಮಾಡುವಲ್ಲಿ ಭಾರತ ದೇಶ ಮೊದಲ ಸ್ಥಾನದಲ್ಲಿದೆ ಎಂದು ಆನಂದಪುರ ಮುರುಘಾರಾಜೇಂದ್ರ ಮಠದ…

Read More
Exit mobile version