
ಶಬರೀಶನಗರದ ನಾಗ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬ ಸಂಭ್ರಮ
ಶಬರೀಶನಗರದ ನಾಗ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬ ಸಂಭ್ರಮ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಪಟ್ಟಣದ ಶಬರೀಶನಗರದ ನಾಗರ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬವನ್ನು ಭಕ್ತಿ ಭಾವನೆ ಮತ್ತು ಶ್ರದ್ಧೆಯಿಂದ ಆಚರಿಸಲಾಯಿತು. ಹಬ್ಬದ ಅಂಗವಾಗಿ ದೇವಾಲಯದಲ್ಲಿ ವಿವಿಧ ಧಾರ್ಮಿಕ ವಿಧಿವಿಧಾನಗಳು ನಡೆಯಿತು. ನಾಗೇಂದ್ರಸ್ವಾಮಿಗೆ ವಿಶೇಷ ಅಭಿಷೇಕ, ಪಂಚಾಮೃತ ಸ್ನಾನ, ನಾಗಬಲಿ, ಅಷ್ಟನಾಗಾರ್ಚನೆ, ಸೇರಿದಂತೆ ಶ್ರದ್ಧಾ ಪೂರ್ವಕವಾದ ಸೇವೆಗಳು ಜರುಗಿದವು. ಈ ಸಂದರ್ಭದಲ್ಲಿ ನೂರಾರು ಭಕ್ತಾಧಿಗಳು ಶ್ರದ್ದೆಯಿಂದ ಪೂಜೆ ಸಲ್ಲಿಸಿ ದೇವರ ಕೃಪೆಗೆ ಪಾತ್ರರಾದರು. ಹೊಂಬುಜ…


