Headlines

ಸಿಗಂದೂರು ಲಾಂಚ್‌ನಲ್ಲಿ  ಬೆಳಗಾವಿಯ ಕುಟುಂಬದ ಮೇಲೆ ಹಲ್ಲೆ

ಸಿಗಂದೂರು ಲಾಂಚ್‌ನಲ್ಲಿ  ಬೆಳಗಾವಿಯ ಕುಟುಂಬದ ಮೇಲೆ ಹಲ್ಲೆ ಸಾಗರ : ಸಿಗಂದೂರು ಲಾಂಚ್‌ಗೆ  ವಾಹನಗಳನ್ನು ಬಿಡುವ ವಿಚಾರದಲ್ಲಿ ಜಗಳವಾಗಿ ಪ್ರಯಾಣಿಕರ ಮೇಲೆ ಹಲ್ಲೆ ಮಾಡಿದ ಆರೋಪ ಕೇಳಿ ಬಂದಿದೆ. ಗ್ರಾಮ ಪಂಚಾಯಿತಿ ನೇಮಿಸಿರುವ ಟಿಕೆಟ್ ಕಲೆಕ್ಟರ್ ಸೇರಿ ಹಲವರ ವಿರುದ್ಧ ಕಾರ್ಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗ್ರಾಮ ಪಂಚಾಯಿತಿ ವತಿಯಿಂದ ನೇಮಕವಾಗಿರುವ ಟಿಕೆಟ್ ಕಲೆಕ್ಟರ್ ಮತ್ತು 10-15 ಸಹಚರರ ವಿರುದ್ದ ಎಫ್‌ಐಆರ್‌ ದಾಖಲಿಸಲಾಗಿದೆ. ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಕಡಬಿ ಶಿವಪುರದ ನಿವಾಸಿ ಪ್ರಣತಿ, ತಂದೆ ಪ್ರಸನ್ನ,…

Read More

ಅನಧಿಕೃತ ಜೇನುತುಪ್ಪ, ವಿನೆಗರ್ ತಯಾರಿಕೆ ಘಟಕದ ಮೇಲೆ ತಹಶೀಲ್ದಾರ್ ದಾಳಿ

ಅನಧಿಕೃತ ಜೇನುತುಪ್ಪ, ವಿನೆಗರ್ ತಯಾರಿಕೆ ಘಟಕದ ಮೇಲೆ ತಹಶೀಲ್ದಾರ್ ದಾಳಿ ಶಿವಮೊಗ್ಗ ಜಿಲ್ಲೆಯ ಕೆಲವು ಕೆಮಿಕಲ್ ಫ್ಯಾಕ್ಟರಿಗಳಲ್ಲಿ ಅನಧಿಕೃತವಾಗಿ ಜೇನುತುಪ್ಪ ಹಾಗೂ ವಿನೆಗರ್ ತಯಾರು ಮಾಡುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಸಾಗರ ತಾಲೂಕಿನ ಹುಲ್ಲತ್ತಿ ಗ್ರಾಮದ ಜೇನುತುಪ್ಪ ಮತ್ತು ವಿನೆಗರ್ ತಯಾರಿಕಾ ಘಟಕಕ್ಕೆ ಅಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಅಧಿಕಾರಿಗಳು ಹಾಗೂ ಸಾಗರ ತಹಸೀಲ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯಾವುದೇ ಕೆಮಿಕಲ್ ಫ್ಯಾಕ್ಟರಿಗಳಲ್ಲಿ ಆಹಾರ ಪದಾರ್ಥಗಳು ತಯಾರು ಮಾಡಬಾರದು ಎಂದು…

Read More

BSNL ನೆಟ್ವರ್ಕ್ ಸಮಸ್ಯೆ – ಗ್ರಾಹಕನ ಏಕಾಂಗಿ ಧರಣಿ!

BSNL ನೆಟ್ವರ್ಕ್ ಸಮಸ್ಯೆ – ಗ್ರಾಹಕನ ಏಕಾಂಗಿ ಧರಣಿ! ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹುಲಿದೇವರಬನ ಸಮೀಪದ ಹೊಸಕೊಪ್ಪ ಗ್ರಾಮದಲ್ಲಿ ಬಿಎಸ್‌ಎನ್‌ಎಲ್ ನೆಟ್‌ವರ್ಕ್ ಸಿಗುತ್ತಿಲ್ಲ ಎಂದು ದೂರಿ ಗ್ರಾಮದ ಸೀತಾರಾಮ ಹೆಗಡೆ ಶುಕ್ರವಾರ (ಮಾ.07) ಬಿಎಸ್‌ಎನ್‌ಎಲ್ ಕಚೇರಿ ಎದುರು ಏಕಾಂಗಿ ಧರಣಿ ನಡೆಸಿ ಗಮನ ಸೆಳೆದರು. ಕಳೆದ ಹದಿನೈದು ಇಪ್ಪತ್ತು ದಿನಗಳಿಂದ ನಮ್ಮ ಮನೆಗೆ ಬಿಎಸ್‌ಎನ್‌ಎಲ್ ನೆಟ್‌ವರ್ಕ್ ಸೌಲಭ್ಯ ಇಲ್ಲವಾಗಿದೆ. ಈ ಬಗ್ಗೆ ಅಧಿಕಾರಿಗಳಿಗೆ ತಿಳಿಸಿದರೆ ಸ್ಪಂದಿಸುತ್ತಿಲ್ಲ. ದಿನಕ್ಕೆ ಕನಿಷ್ಠ ಸಂಜೆ 5ರಿಂದ 7 ಗಂಟೆ ನೆಟ್‌ವರ್ಕ್…

Read More

ANANDAPURA | ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ANANDAPURA | ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ರಾಷ್ಟ್ರೀಯ ಹೆದ್ದಾರಿ 69ರ ಸಾಗರ ರಸ್ತೆಯ ನೇದರಹಳ್ಳಿ ಬಳಿ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ. ಶಿವಮೊಗ್ಗದಿಂದ ಸಾಗರಕ್ಕೆ ತೆರಳುತಿದ್ದ ಕಾರು ನೇದರಹಳ್ಳಿ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಆಗಿದ್ದು ಕಾರಿನಲ್ಲಿ ಗಂಡ, ಹೆಂಡತಿ, ಪುತ್ರಿ ಮೂರು ಜನರು ಪ್ರಯಾಣಿಸುತ್ತಿದ್ದರು. ಸದ್ಯ ಯಾವುದೇ ಪ್ರಾಣಾಪಾಯವಾಗದೆ ಮೂವರಿಗೂ ಸಣ್ಣ ಪುಟ್ಟ ಗಾಯಗಳಾಗಿವೆ. ಕಾರು ಪಲ್ಟಿಯಾದ ತಕ್ಷಣ ಸಾಗರ ಶಿವಮೊಗ್ಗಕ್ಕೆ ತೆರಳುತ್ತಿದ್ದ ಬಸ್ಸಿನಿಂದ ಪ್ರಯಾಣಿಕರು…

Read More

ಇಂದು ಮಾಜಿ ಸಚಿವ ಹರತಾಳು ಹಾಲಪ್ಪರವರ 63ನೇ ಹುಟ್ಟುಹಬ್ಬ – ಮಾಜಿ ಸಚಿವರ ಬಗ್ಗೆ ನಿಮಗೆಷ್ಟು ಗೊತ್ತು…?? ಈ ಸುದ್ದಿ ನೋಡಿ

ಇಂದು ಮಾಜಿ ಸಚಿವ ಹರತಾಳು ಹಾಲಪ್ಪರವರ 63ನೇ ಹುಟ್ಟುಹಬ್ಬ –  ಹರತಾಳು ಹಾಲಪ್ಪ ಬಗ್ಗೆ ನಿಮಗೆಷ್ಟು ಗೊತ್ತು…?? ಈ ಸುದ್ದಿ ನೋಡಿ ರಾಜ್ಯ ರಾಜಕೀಯದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ,ಮಾತು ಕಡಿಮೆ ಕೆಲಸ ಹೆಚ್ಚು ಎಂಬಂತೆ ಕಾರ್ಯನಿರ್ವಹಿಸುತ್ತಿರುವ ಮಾಜಿ ಸಚಿವರಾದ ಹರತಾಳು ಹಾಲಪ್ಪ ಹೋರಾಟ, ಜನಸೇವೆ ಮೂಲಕ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮನೆ ಮಾತಾಗಿರುವ ರಾಜಕಾರಣಿ.  ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ರವರ ಗರಡಿಯಲ್ಲಿ ಬೆಳೆದು ರಾಜಕೀಯ ಪ್ರವೇಶಿಸಿ ಎದುರಾದ ಅನೇಕ ಕಷ್ಟಗಳನ್ನು ಎದುರಿಸಿ ಸೋಲು-ಗೆಲುವು ಎರಡನ್ನೂ ಸಮನಾಗಿ…

Read More

ಮಾಜಿ ಸಚಿವ ಹರತಾಳು ಹಾಲಪ್ಪ ಹುಟ್ಟುಹಬ್ಬದ ಅಂಗವಾಗಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮ

ಮಾಜಿ ಸಚಿವ ಹರತಾಳು ಹಾಲಪ್ಪ ಹುಟ್ಟುಹಬ್ಬದ ಅಂಗವಾಗಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ರಿಪ್ಪನ್ ಪೇಟೆ:  ರಾಜ್ಯಬಿಜೆಪಿ ಉಪಾಧ್ಯಕ್ಷ ಹಾಗೂ ಮಾಜಿ ಸಚಿವ ಹರತಾಳು ಹಾಲಪ್ಪ ಅವರ ಹುಟ್ಟುಹಬ್ಬವನ್ನು ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನಿಸುವುದರ ಮೂಲಕ 07-03-2025 ರಂದು ಅರ್ಥಪೂರ್ಣವಾಗಿ  ಆಚರಿಸಲಾಗುವುದು ಎಂದು ಕೆರೆಹಳ್ಳಿ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷರಾದ ಎನ್ ಸತೀಶ್ ತಿಳಿಸಿದರು ಈ ಕುರಿತಾಗಿ ಇಂದು ಭೂಪಾಳಂ ಚಂದ್ರಶೇಖರಯ್ಯ ಸಭಾಂಗಣದಲ್ಲಿ ಬಿಜೆಪಿ ಮುಖಂಡರುಗಳು ಹಾಗೂ ಹರತಾಳು  ಹಾಲಪ್ಪ ಅಭಿಮಾನಿ ಬಳಗ ಏರ್ಪಡಿಸಿದ್ದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು…

Read More

ರಿಪ್ಪನ್‌ಪೇಟೆ , ಆನಂದಪುರ ಠಾಣೆ ವ್ಯಾಪ್ತಿಯಲ್ಲಿ ಮನೆ ಕಳ್ಳತನ ಮಾಡುತಿದ್ದ ಮನೆಗಳ್ಳ ಅರೆಸ್ಟ್ – 32 ಲಕ್ಷಕ್ಕೂ ಹೆಚ್ಚು ಮೌಲ್ಯದ ಚಿನ್ನಾಭರಣ ವಶಕ್ಕೆ

ರಿಪ್ಪನ್‌ಪೇಟೆ , ಆನಂದಪುರ ಠಾಣೆ ವ್ಯಾಪ್ತಿಯಲ್ಲಿ ಮನೆ ಕಳ್ಳತನ ಮಾಡುತಿದ್ದ ಮನೆಗಳ್ಳ ಅರೆಸ್ಟ್ – 32 ಲಕ್ಷಕ್ಕೂ ಹೆಚ್ಚು ಮೌಲ್ಯದ ಚಿನ್ನಾಭರಣ ವಶಕ್ಕೆ ರಿಪ್ಪನ್‌ಪೇಟೆ ಹಾಗೂ ಆನಂದಪುರ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.ಬಂಧಿತರಿಂದ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ರಿಪ್ಪನ್‌ಪೇಟೆ ಠಾಣೆ ವ್ಯಾಪ್ತಿಯ ಕೋಡೂರು , ದೂನ , ನೆವಟೂರು ಸೇರಿದಂತೆ ಐದು ಮನೆ ಕಳ್ಳತನ ಹಾಗೂ ಆನಂದಪುರ ಠಾಣೆ ವ್ಯಾಪ್ತಿಯ ನಾಲ್ಕು ಪ್ರಕರಣದ ಹಾಗೂ ವಿವಿಧ…

Read More

ಮದ್ಯದಂಗಡಿಗೆ ಕಟ್ಟಡ ಬಾಡಿಗೆ ಕೊಟ್ಟಿದ್ದಕ್ಕೆ ಕುಟುಂಬಕ್ಕೆ ಬಹಿಷ್ಕಾರ ಹಾಕಿದ ಗ್ರಾಮಸ್ಥರು

ಮದ್ಯದಂಗಡಿಗೆ ಕಟ್ಟಡ ಬಾಡಿಗೆ ಕೊಟ್ಟಿದ್ದಕ್ಕೆ ಕುಟುಂಬಕ್ಕೆ ಬಹಿಷ್ಕಾರ ಹಾಕಿದ ಗ್ರಾಮಸ್ಥರು ಮದ್ಯದ ಅಂಗಡಿಗೆ ಕಟ್ಟಡ ಬಾಡಿಗೆ ಕೊಟ್ಟಿದಕ್ಕೆ ಗ್ರಾಮಸ್ಥರೆಲ್ಲಾ ಸೇರಿ ಕುಟುಂಬವೊಂದನ್ನು ಬಹಿಷ್ಕಾರ ಹಾಕಿದ ಘಟನೆವೊಂದು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ತಟ್ಟೆಹಳ್ಳಿ ಗ್ರಾಮದಲ್ಲಿ ನಡೆದಿದೆ. ಬಹಿಷ್ಕಾರ ಹಾಕಿದ ಕುಟುಂಬಸ್ಥರನ್ನು ಮಾತನಾಡಿಸಿದರೆ 5 ಸಾವಿರ ದಂಡ ಕಟ್ಟಬೇಕು ಎಂಬ ನಿಯಮವನ್ನೂ ಗ್ರಾಮದಲ್ಲಿ ಜಾರಿಗೆ ತರಲಾಗಿದೆ. ಹೌದು, ಭದ್ರಾವತಿ ತಾಲೂಕಿನ ತಟ್ಟೆಹಳ್ಳಿ ಗ್ರಾಮದ ಮಂಜೋಜಿರಾವ್ ಎಂಬುವರಿಗೆ ಸೇರಿದ ಜಾಗವನ್ನು ಖಾಸಗಿ ವ್ಯಕ್ತಿಯೊಬ್ಬರು 27 ವರ್ಷಕ್ಕೆ ಜಾಗ ಲೀಜ್ ಪಡೆದು…

Read More

ಹಕ್ಕಿ ಜ್ವರದ ಭೀತಿ: ಮುನ್ನೆಚ್ಚರಿಕೆ ಕ್ರಮಕ್ಕೆ ಶಿವಮೊಗ್ಗ ಜಿಲ್ಲಾಧಿಕಾರಿ ಕರೆ

ಹಕ್ಕಿ ಜ್ವರದ ಭೀತಿ: ಮುನ್ನೆಚ್ಚರಿಕೆ ಕ್ರಮಕ್ಕೆ ಶಿವಮೊಗ್ಗ ಜಿಲ್ಲಾಧಿಕಾರಿ ಕರೆ ಶಿವಮೊಗ್ಗ ಜಿಲ್ಲೆಯಲ್ಲಿ ಇದುವರೆಗೂ ಯಾವುದೇ ಹಕ್ಕಿಜ್ವರ ಪ್ರಕರಣ ವರದಿಯಾಗಿಲ್ಲ. ಆದರೂ ಸಾರ್ವಜನಿಕರು ಹಕ್ಕಿಜ್ವರ ಬಾರದಂತೆ ಮುನ್ನಚ್ಚರಿಕೆ ಕ್ರಮಗಳನ್ನು ವಹಿಸಬೇಕು ಹಾಗೂ ಜ್ವರ, ಉಸಿರಾಟದ ತೊಂದರೆ ಇತರೆ ಲಕ್ಷಣಗಳು ಕಂಡು ಬಂದಲ್ಲಿ ಕೂಡಲೇ ಚಿಕಿತ್ಸೆ ಪಡೆಯಬೇಕು” ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೇಳಿದರು. ಗುರುವಾರ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಹಕ್ಕಿ ಜ್ವರ ಹಾಗೂ ಇತರೆ ಸಾಂಕ್ರಾಮಿಕ ರೋಗ ತಡೆಗಟ್ಟಲು ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ…

Read More

ತುಂಗಾ ಚಾನಲ್‌ಗೆ ಬಟ್ಟೆ ತೊಳೆಯಲು ಹೋಗಿದ್ದ ಮಹಿಳೆ ನಾಪತ್ತೆ

ತುಂಗಾ ಚಾನಲ್‌ಗೆ ಬಟ್ಟೆ ತೊಳೆಯಲು ಹೋಗಿದ್ದ ಮಹಿಳೆ ನಾಪತ್ತೆ ಶಿವಮೊಗ್ಗ : ಚಾನಲ್‌ಗೆ ಬಟ್ಟೆ ತೊಳೆಯಲು ಹೋಗಿದ್ದ ಮಹಿಳೆಯೊಬ್ಬರು  ನಾಪತ್ತೆಯಾಗಿದ್ದಾಳೆ. ಅಗ್ನಿಶಾಮಕ ಸಿಬ್ಬಂದಿ ನಾಪತ್ತೆಯಾಗಿರುವ ಮಹಿಳೆಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಶಿವಮೊಗ್ಗದ ರಾಗಿಗುಡ್ಡದ ಬಳಿ ತುಂಗಾ ಚಾನಲ್‌ಗೆ ಬಟ್ಟೆ ತೊಳೆಯಲು ಹೋಗಿದ್ದ ರೇಷ್ಮಾಬಾನು (33) ನಾಪತ್ತೆಯಾಗಿದ್ದಾರೆ. ಕಾಲು ಜಾರಿ ಚಾನಲ್‌ಗೆ ಬಿದ್ದಿರುವ ಶಂಕೆ ಇರುವುದರಿಂದ ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Read More