Headlines

ಹುಂಚದಕಟ್ಟೆ ಸಮೀಪದಲ್ಲಿ ಕಾಲು ಜಾರಿ ಕೆರೆಗೆ ಬಿದ್ದು ರಿಪ್ಪನ್ ಪೇಟೆ ವ್ಯಕ್ತಿ  ಸಾವು

ಹುಂಚದಕಟ್ಟೆ ಸಮೀಪದಲ್ಲಿ ಕಾಲು ಜಾರಿ ಕೆರೆಗೆ ಬಿದ್ದು ರಿಪ್ಪನ್ ಪೇಟೆ ವ್ಯಕ್ತಿ  ಸಾವು ಭಾನುವಾರ ಬೆಳಗ್ಗೆ ಸೊಪ್ಪು ತರಲು ಕಾಡಿಗೆ ಹೋಗಿದ್ದ ಅವರು, ಬಹಳ ಹೊತ್ತಾದರೂ ವಾಪಸ್ ಬರದ ಕಾರಣ ಕುಟುಂಬದವರು ಹುಡುಕಾಟ ನಡೆಸಿದ್ದಾರೆ. ಈ ವೇಳೆ, ಹೊಸಕೆರೆ ಕೆರೆಯಲ್ಲಿ ಕಾಲುಜಾರಿ ಬಿದ್ದು ದುರ್ಘಟನೆ ಸಂಭವಿಸಿರುವುದು ಬೆಳಕಿಗೆ ಬಂದಿದೆ. ರಿಪ್ಪನ್‌ಪೇಟೆ: ಹುಂಚದಕಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಕೆರೆ ಕೆರೆಯಲ್ಲಿ ಕಾಲು ಜಾರಿ ಬಿದ್ದು ರಿಪ್ಪನ್ ಪೇಟೆ ಮೂಲದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ಪಟ್ಟಣದ ಸಮೀಪದ ಕರಡಿಗ ಗ್ರಾಮದ…

Read More

RIPPONPETE | ದಕ್ಷ , ಜನಸ್ನೇಹಿ ಅಧಿಕಾರಿಗಳಿಗೆ ಸಾರ್ವಜನಿಕರಿಂದ ಆತ್ಮೀಯ ಬೀಳ್ಕೊಡುಗೆ

RIPPONPETE | ದಕ್ಷ , ಜನಸ್ನೇಹಿ ಅಧಿಕಾರಿಗಳಿಗೆ ಸಾರ್ವಜನಿಕರಿಂದ ಆತ್ಮೀಯ ಬೀಳ್ಕೊಡುಗೆ ರಿಪ್ಪನ್ ಪೇಟೆ : ಪಟ್ಟಣದ ವ್ಯಾಪ್ತಿಯಲ್ಲಿ ದಕ್ಷತೆ ಹಾಗೂ ಜನಸ್ನೇಹಿಯಾಗಿ ಕಾರ್ಯ ನಿರ್ವಹಿಸಿ ವರ್ಗಾವಣೆಗೊಂಡ ಇಬ್ಬರು ಅಧಿಕಾರಿಗಳಿಗೆ ಸಾರ್ವಜನಿಕರಿಂದ ಆತ್ಮೀಯ ಬೀಳ್ಕೊಡುಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪಟ್ಟಣದ ಗ್ರಾಮ ಪಂಚಾಯತ್ ಸಭಾಂಗದಲ್ಲಿ ಆಯೋಜಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಜನಸ್ನೇಹಿ ಪಿಎಸ್‌ಐಯಾಗಿ ಕರ್ತವ್ಯ ನಿರ್ವಹಿಸಿ ಪ್ತಸ್ತುತ ಆನಂದಪುರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡ ಪ್ರವೀಣ್‌ಎಸ್.ಪಿ ಮತ್ತು ಅರಣ್ಯಇಲಾಖೆಯ ರಿಪ್ಪನ್‌ಪೇಟೆ ವಲಯದಲ್ಲಿ ಡಿಆರ್‌ಎಫ್‌ಓ ಆಗಿ ಕರ್ತವ್ಯ ನಿರ್ವಹಿಸಿ ನಗರ ವಲಯದ ನಿಟ್ಟೂರು…

Read More

ಸಿಎ ಪರೀಕ್ಷೆಯಲ್ಲಿ ತೇರ್ಗಡೆಗೊಂಡ ಪ್ರಜ್ವಲ್: ಗ್ರಾಮ ಪಂಚಾಯತ್ ವತಿಯಿಂದ ಸನ್ಮಾನ

ಸಿಎ ಪರೀಕ್ಷೆಯಲ್ಲಿ ತೇರ್ಗಡೆಗೊಂಡ ಪ್ರಜ್ವಲ್: ಗ್ರಾಮ ಪಂಚಾಯತ್ ವತಿಯಿಂದ ಸನ್ಮಾನ ಹುಂಚ : ಇತ್ತೀಚೆಗೆ ಪ್ರಕಟವಾದ ಚಾರ್ಟರ್ಡ್ ಅಕೌಂಟೆಂಟ್ (ಸಿಎ) ಅಂತಿಮ ಪರೀಕ್ಷೆಯಲ್ಲಿ ಯಶಸ್ವಿಯಾಗಿ ತೇರ್ಗಡೆಗೊಂಡ ಪ್ರಜ್ವಲ್ ಅವರಿಗೆ ಇಂದು ಅವರ ಹುಟ್ಟೂರಾದ ಹೊಸನಗರ ತಾಲೂಕಿನ ಹುಂಚ ಗ್ರಾಮ ಪಂಚಾಯತ್ ವತಿಯಿಂದ ಆತ್ಮೀಯ ಸನ್ಮಾನ ಏರ್ಪಡಿಸಲಾಗಿತ್ತು. ಹುಂಚ ಗ್ರಾಮದ ಪ್ರಜ್ವಲ್ ನಿವಾಸಕ್ಕೆ ತೆರಳಿದ ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು ಸದಸ್ಯರು, ಗ್ರಾಮದ ಹಿರಿಯರು, ಶಿಕ್ಷಣ ತಜ್ಞರು ಹಾಗೂ ಸಾರ್ವಜನಿಕರು ಪ್ರಜ್ವಲ್ ಅವರ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.ಇದೇ ಸಂಧರ್ಭದಲ್ಲಿ…

Read More

ಭೂತ ಬಿಡಿಸಲು ಮಹಿಳೆಗೆ ಕೋಲಿನಿಂದ ಹೊಡೆತ – ಏಟು ತಾಳಲಾಗದೇ ಮಹಿಳೆ ಸಾವು

ಭೂತ ಬಿಡಿಸಲು ಮಹಿಳೆಗೆ ಕೋಲಿನಿಂದ ಹೊಡೆತ – ಏಟು ತಾಳಲಾಗದೇ ಮಹಿಳೆ ಸಾವು ರಾಜ್ಯದಲ್ಲಿ ಮೂಢ ನಂಬಿಕೆಗೆ ಮತ್ತೊಬ್ಬ ಮಹಿಳೆ ಬಲಿ ಆಗಿದ್ದಾರೆ. ‘ದೆವ್ವ ಬಿಡಿಸುವ’ ಪ್ರಯತ್ನದ ನಡುವೆ 45 ವರ್ಷದ ಮಹಿಳೆ, ಕೋಲುಗಳಿಂದ ಬೀಳುತ್ತಿದ್ದ ನಿರಂತರ ಏಟುಗಳನ್ನು ತಾಳಲಾಗದೇ ದಾರುಣವಾಗಿ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸ ಜಂಬರಘಟ್ಟದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಹಳೆ ಜಂಬರಘಟ್ಟ ನಿವಾಸಿ ಗೀತಾ ಎಂದು ಗುರುತಿಸಲಾಗಿದೆ. ಮಾಹಿತಿಯ ಪ್ರಕಾರ, ಶಾಂತಮ್ಮ ಎಂಬ ಮಹಿಳೆ ಗೀತಾಳ ಮೈ ಮೇಲೆ ‘ದೆವ್ವ ಬರುತ್ತದೆ….

Read More

ಡಿಜಿಟಲ್ ಅರೆಸ್ಟ್ – ಮಹಿಳೆಗೆ 3.16 ಕೋಟಿ ರೂ. ವಂಚನೆ

ಡಿಜಿಟಲ್ ಅರೆಸ್ಟ್ – ಮಹಿಳೆಗೆ 3.16 ಕೋಟಿ ರೂ. ವಂಚನೆ ದೇಶದಲ್ಲಿ ಸೈಬರ್ ಕ್ರೈಂ ಪ್ರಕರಣಗಳು ದಿನೇದಿನೇ ಹೆಚ್ಚುತ್ತಲೇ ಇದ್ದು, ಡಿಜಿಟಲ್ ಅರೆಸ್ಟ್ ಮೂಲಕ ಮಂಗಳೂರಿನ ಮಹಿಳೆಯೊಬ್ಬರಿಗೆ ಬರೋಬ್ಬರಿ 3.16 ಕೋಟಿ ರೂ. ವಂಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಂಚನೆಗೊಳಗಾದ 40 ವರ್ಷದ ಮಹಿಳೆ, ಸೈಬರ್ ಎಕನಾಮಿಕ್ ಮತ್ತು ನಾರ್ಕೋಟಿಕ್ಸ್ ಕ್ರೈಮ್(ಸಿಇಎನ್) ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಪ್ರಕಾರ, ಜೂನ್ 6 ರಂದು ವಂಚಕರು ತಾವು ನ್ಯಾಷನಲ್ ಕ್ರೈಮ್ ರಿಪೋರ್ಟಿಂಗ್ ಪೋರ್ಟಲ್(ಎನ್‌ಸಿಆರ್‌ಪಿ) ಅಧಿಕಾರಿ ಎಂದು ಹೇಳಿಕೊಂಡು…

Read More

ಚಾಲಕನ ನಿಯಂತ್ರಣ ತಪ್ಪಿ ಮಿನಿ ಬಸ್ ಪಲ್ಟಿ

ಚಾಲಕನ ನಿಯಂತ್ರಣ ತಪ್ಪಿ ಮಿನಿ ಬಸ್ ಪಲ್ಟಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಮಿನಿ ಬಸ್ ಪಲ್ಟಿಯಾದ ಘಟನೆ ಶಿವಮೊಗ್ಗದ ಅಮೀರ್‌ ಅಹಮದ್‌ ಸರ್ಕಲ್‌ನಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ. ಎ.ಎ. ಸರ್ಕಲ್‌ ಬಳಿ ಬಸ್‌ ಬರುತ್ತಿರುವಾಗ ಅಡ್ಡ ಬಂದ ಆಟೋವನ್ನು ತಪ್ಪಿಸಲು ಹೋಗಿ ಮಿನಿ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಸ್ಸಿನಲ್ಲಿ ಪ್ರಯಾಣಿಕರು ಯಾರೂ ಇರಲಿಲ್ಲ. ಚಾಲಕ ಒಬ್ಬನೇ ಇದ್ದರು ಎಂದು ತಿಳಿದುಬಂದಿದೆ. ಪಶ್ಚಿಮ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

ಇಬ್ಬರು ಬಾಲಕಿಯರ ಅನುಮಾನಾಸ್ಪದ ಸಾವು – ನ್ಯಾಯಕ್ಕಾಗಿ ಆಗ್ರಹಿಸಿ ಭಾರೀ ಪ್ರತಿಭಟನೆ

ಇಬ್ಬರು ಬಾಲಕಿಯರ ಅನುಮಾನಾಸ್ಪದ ಸಾವು – ನ್ಯಾಯಕ್ಕಾಗಿ ಆಗ್ರಹಿಸಿ ಭಾರೀ ಪ್ರತಿಭಟನೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಒಂದು ವರ್ಷದ ಅಂತರದಲ್ಲಿ ಇಬ್ಬರು ಬಾಲಕಿಯರು ಅನುಮಾನಾಸ್ಪದವಾಗಿ ಸಾವಿಗೀಡಾಗಿರುವ ಘಟನೆ ಶಾಲಾ ಆಡಳಿತ ಮತ್ತು ಶಿಕ್ಷಣ ಇಲಾಖೆಯ ನಿರ್ಲಕ್ಷ್ಯದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಈ ಸರಣಿ ಸಾವುಗಳಿಗೆ ಸಮಗ್ರ ತನಿಖೆ ಮತ್ತು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಇಂದು (ಜುಲೈ 7) ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಕರ್ನಾಟಕ ವಿದ್ಯಾರ್ಥಿ ಸಂಘಟನೆ (KVS)…

Read More

ಶಿವಮೊಗ್ಗ ನಗರದಲ್ಲಿ ಗಣೇಶ ಮೂರ್ತಿ,ನಾಗರ ವಿಗ್ರಹಕ್ಕೆ  ಅಪಮಾನ ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್.!

ಶಿವಮೊಗ್ಗ ನಗರದಲ್ಲಿ ಗಣೇಶ ಮೂರ್ತಿ,ನಾಗರ ವಿಗ್ರಹಕ್ಕೆ  ಅಪಮಾನ ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್.! ಶಿವಮೊಗ್ಗದ ರಾಗಿಗುಡ್ಡದ ಬಂಗಾರಪ್ಪ ಬಡಾವಣೆಯಲ್ಲಿ ಅನ್ಯಕೋಮಿನ ಯುವಕರಿಂದ ಗಣಪತಿ ವಿಗ್ರಹ ಹಾಗೂ ನಾಗರ ಕಲ್ಲಿಗೆ ಅಪಮಾನ ಮಾಡಿರುವ ಆರೋಪ ಕೇಳಿಬಂದಿದ್ದು, ಪ್ರಕರಣ ಸಂಬಂಧ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಗಾರಪ್ಪ ಬಡಾವಣೆಯ ಮುಖ್ಯರಸ್ತೆಯಲ್ಲಿ ಇತ್ತೀಚೆಗೆ ಪ್ರತಿಷ್ಠಾಪನೆ ಮಾಡಿದ್ದ ಗಣಪತಿ ವಿಗ್ರಹಕ್ಕೆ ಒದ್ದು, ನಾಗರ ಕಲ್ಲನ್ನು ಚರಂಡಿಗೆ ಎಸೆದಿರುವ ಆರೋಪ ಕೇಳಿಬಂದಿದ್ದು, ಹಿಂದೂ ಮುಖಂಡರು ಕೆರಳಿದ್ದಾರೆ. ಇದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ….

Read More

ಹೊಸನಗರ | ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಜೆಡಿಎಸ್ ಪ್ರತಿಭಟನೆ

ಹೊಸನಗರ | ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಜೆಡಿಎಸ್ ಪ್ರತಿಭಟನೆ HOSANAGARA | ಸಿದ್ದರಾಮಯ್ಯನವರ ಸರ್ಕಾರದ ಆಡಳಿತದಲ್ಲಿ ದಿನನಿತ್ಯ ಭ್ರಷ್ಟಾಚಾರ ತಾಂಡವವಾಡುತ್ತಿದೆ, ಜನಸಾಮಾನ್ಯರಿಗೆ ವಂಚನೆ ಮಾಡುತ್ತಿದೆ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್.ಎ. ಚಾಬುಸಾಬ್ ಹೇಳಿದರು. ಪಟ್ಟಣದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಪಕ್ಷದ ವತಿಯಿಂದ ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಎನ್ ವರ್ತೇಶ್ ನೇತೃತ್ವದಲ್ಲಿ ಪ್ರತಿಭಟನೆ ಮೆರವಣಿಗೆ ನಡೆಸಿ ತಾಲ್ಲೂಕು ಇಲಾಖೆಯ ಸಹಾಯಕ ಗ್ರೇಡ್ 2ತಹಶೀಲ್ದಾರ್ ರಾಕೇಶ್ ಅವರು ಬಿಟ್ಟೋರಿಗೆ ಮನವಿ ಪತ್ರ ಸಲ್ಲಿಸಿದರು. ರಾಜ್ಯದಲ್ಲಿ ಹೃದಯಾಘಾತ…

Read More

ರೈಲ್ವೇ ಟ್ರ್ಯಾಕ್‌ನಲ್ಲಿ ನವವಿವಾಹಿತೆ ಶವ ಪತ್ತೆ ಪ್ರಕರಣ – ಪತಿ ಮನೆ ಮುಂದೆ ಮೃತದೇಹವಿಟ್ಟು ಪ್ರತಿಭಟನೆ

ರೈಲ್ವೇ ಟ್ರ್ಯಾಕ್‌ನಲ್ಲಿ ನವವಿವಾಹಿತೆ ಶವ ಪತ್ತೆ ಪ್ರಕರಣ – ಪತಿ ಮನೆ ಮುಂದೆ ಮೃತದೇಹವಿಟ್ಟು ಪ್ರತಿಭಟನೆ ಕಳೆದ 7 ತಿಂಗಳ ಹಿಂದೆ ವಿದ್ಯಾಳ ಮದುವೆ ಮಾಡಲಾಗಿತ್ತು. ಪತಿ ಶಿವು ಪೊಲೀಸ್ ಆಗಿ ಕಾರ್ಯನಿರ್ವಹಿಸುತ್ತಿದ್ದು, ಇಬ್ಬರು ಬೆಂಗಳೂರಿನ ಶಂಕರಪುರಂನಲ್ಲಿ ವಾಸವಾಗಿದ್ದರು.ಜೂ.30ರಂದು ವಿದ್ಯಾ ಕಾಣೆಯಾಗಿದ್ದರು. ಈ ಕುರಿತು ಶಂಕರಪುರಂ ಪೊಲೀಸ್ ಠಾಣೆಯಲ್ಲಿ ನಾಪತ್ತೆಯಾಗಿರುವ ಪ್ರಕರಣ ದಾಖಲಾಗಿತ್ತು. ಏಳು ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆಯ ಶವ ರೈಲ್ವೇ ಟ್ರ್ಯಾಕ್‌ನಲ್ಲಿ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಕ್ಷಿಣೆ ಕಿರುಕುಳ ನೀಡುತ್ತಿದ್ದರೆಂದು ಆರೋಪ ಕೇಳಿಬಂದಿದೆ. ಮೃತಳನ್ನು…

Read More