Headlines

ಸರ್ಕಾರಿ ಶಾಲೆ ವಿದ್ಯಾರ್ಥಿನಿಯರಿಗೆ ಸುವರ್ಣಾವಕಾಶ: 32 ಸಾವಿರ ರೂ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

Azim Premji Foundation invites applications for a ₹32,000 scholarship for first-year undergraduate girl students who studied in government schools. Last date: January 31.

ಹೆಣ್ಣು ಮಕ್ಕಳ ಉನ್ನತ ಶಿಕ್ಷಣಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಆಜೀಂ ಪ್ರೇಂ ಜೀ ಫೌಂಡೇಶನ್ ವಿನೂತನ ವಿದ್ಯಾರ್ಥಿವೇತನ ಯೋಜನೆಯನ್ನು ಆರಂಭಿಸಿದೆ. ಈ ಯೋಜನೆಯಡಿ ಪದವಿ ಮೊದಲನೇ ವರ್ಷದಲ್ಲಿ ಓದುತ್ತಿರುವ ಅರ್ಹ ವಿದ್ಯಾರ್ಥಿನಿಯರಿಗೆ ರೂ.32,000 ವಿದ್ಯಾರ್ಥಿವೇತನವನ್ನು ನೀಡಲಾಗುತ್ತಿದೆ.


ಎಸ್‌ಎಸ್‌ಎಲ್ಸಿ ಹಾಗೂ ಪಿಯುಸಿ ಶಿಕ್ಷಣವನ್ನು ಸರ್ಕಾರಿ ಶಾಲೆಗಳಲ್ಲಿ ಪೂರ್ಣಗೊಳಿಸಿ, ಪ್ರಸ್ತುತ ಪದವಿ ಶಿಕ್ಷಣವನ್ನು ಸರ್ಕಾರಿ ಅಥವಾ ಖಾಸಗಿ ಕಾಲೇಜಿನಲ್ಲಿ ಮುಂದುವರಿಸುತ್ತಿರುವ ಪದವಿ ಪ್ರಥಮ ವರ್ಷದ ವಿದ್ಯಾರ್ಥಿನಿಯರು ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದು.


ಯೋಜನೆಯಡಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನವರಿ 31 ಆಗಿದ್ದು, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಹೆಚ್ಚಿನ ಮಾಹಿತಿಗಾಗಿ


 https://www.youtube.com/@azimpremjischolarship


ಯೂಟ್ಯೂಬ್ ಲಿಂಕ್‌ಗಳನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಪಂಚಾಯತ್ ಸಿಇಓ ಎನ್. ಹೇಮಂತ್ ತಿಳಿಸಿದ್ದಾರೆ.


ಈ ವಿದ್ಯಾರ್ಥಿವೇತನ ಯೋಜನೆ ಗ್ರಾಮೀಣ ಹಾಗೂ ಆರ್ಥಿಕವಾಗಿ ಹಿಂದುಳಿದ ಹಿನ್ನೆಲೆಯ ಹೆಣ್ಣು ಮಕ್ಕಳಿಗೆ ಉನ್ನತ ಶಿಕ್ಷಣದ ಕನಸು ನನಸು ಮಾಡಿಕೊಳ್ಳಲು ಮಹತ್ವದ ಅವಕಾಶವಾಗಲಿದೆ ಎಂದು ಶಿಕ್ಷಣ ವಲಯದವರು ಅಭಿಪ್ರಾಯಪಟ್ಟಿದ್ದಾರೆ.

About The Author