{"ServiceProvider":"meizhuo","Time":"2026-01-15 19:13:29.759","ContentID":"b7fd78944bdd4db392578e797b82e238"}
Azim Premji Foundation invites applications for a ₹32,000 scholarship for first-year undergraduate girl students who studied in government schools. Last date: January 31.
ಹೆಣ್ಣು ಮಕ್ಕಳ ಉನ್ನತ ಶಿಕ್ಷಣಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಆಜೀಂ ಪ್ರೇಂ ಜೀ ಫೌಂಡೇಶನ್ ವಿನೂತನ ವಿದ್ಯಾರ್ಥಿವೇತನ ಯೋಜನೆಯನ್ನು ಆರಂಭಿಸಿದೆ. ಈ ಯೋಜನೆಯಡಿ ಪದವಿ ಮೊದಲನೇ ವರ್ಷದಲ್ಲಿ ಓದುತ್ತಿರುವ ಅರ್ಹ ವಿದ್ಯಾರ್ಥಿನಿಯರಿಗೆ ರೂ.32,000 ವಿದ್ಯಾರ್ಥಿವೇತನವನ್ನು ನೀಡಲಾಗುತ್ತಿದೆ.
ಎಸ್‌ಎಸ್‌ಎಲ್ಸಿ ಹಾಗೂ ಪಿಯುಸಿ ಶಿಕ್ಷಣವನ್ನು ಸರ್ಕಾರಿ ಶಾಲೆಗಳಲ್ಲಿ ಪೂರ್ಣಗೊಳಿಸಿ, ಪ್ರಸ್ತುತ ಪದವಿ ಶಿಕ್ಷಣವನ್ನು ಸರ್ಕಾರಿ ಅಥವಾ ಖಾಸಗಿ ಕಾಲೇಜಿನಲ್ಲಿ ಮುಂದುವರಿಸುತ್ತಿರುವ ಪದವಿ ಪ್ರಥಮ ವರ್ಷದ ವಿದ್ಯಾರ್ಥಿನಿಯರು ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದು.
ಯೋಜನೆಯಡಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನವರಿ 31 ಆಗಿದ್ದು, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಹೆಚ್ಚಿನ ಮಾಹಿತಿಗಾಗಿ
https://www.youtube.com/@azimpremjischolarship
ಯೂಟ್ಯೂಬ್ ಲಿಂಕ್‌ಗಳನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಪಂಚಾಯತ್ ಸಿಇಓ ಎನ್. ಹೇಮಂತ್ ತಿಳಿಸಿದ್ದಾರೆ.
ಈ ವಿದ್ಯಾರ್ಥಿವೇತನ ಯೋಜನೆ ಗ್ರಾಮೀಣ ಹಾಗೂ ಆರ್ಥಿಕವಾಗಿ ಹಿಂದುಳಿದ ಹಿನ್ನೆಲೆಯ ಹೆಣ್ಣು ಮಕ್ಕಳಿಗೆ ಉನ್ನತ ಶಿಕ್ಷಣದ ಕನಸು ನನಸು ಮಾಡಿಕೊಳ್ಳಲು ಮಹತ್ವದ ಅವಕಾಶವಾಗಲಿದೆ ಎಂದು ಶಿಕ್ಷಣ ವಲಯದವರು ಅಭಿಪ್ರಾಯಪಟ್ಟಿದ್ದಾರೆ.
ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…
ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…
ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…