POSTMANNEWS

ನೈಜ ಸುದ್ದಿ ನೇರ ಬಿತ್ತರ..

ರಿಪ್ಪನ್‌ಪೇಟೆ: ಹೃದಯಾಘಾತದಿಂದ ಬಿ.ಕೆ. ಹರೀಶ್ ನಿಧನ

ರಿಪ್ಪನ್‌ಪೇಟೆ: ಹೃದಯಾಘಾತದಿಂದ ಬಿ.ಕೆ. ಹರೀಶ್ ನಿಧನ

ರಿಪ್ಪನ್‌ಪೇಟೆ ಪಟ್ಟಣದ ಹೊಸನಗರ ರಸ್ತೆಯ ನಿವಾಸಿ, ಹಿರಿಯ ಸಾಮಾಜಿಕ ಕಾರ್ಯಕರ್ತ ಹಾಗೂ ಉತ್ತಮ ಕ್ರೀಡಾಪಟುವಾಗಿದ್ದ ಬಿ.ಕೆ. ಹರೀಶ್ ಅವರು ಸೋಮವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಪಟ್ಟಣದ ಸಾಮಾಜಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸದಾ ಮುಂಚೂಣಿಯಲ್ಲಿದ್ದ ಹರೀಶ್ ಅವರು ಜನಪ್ರಿಯ ವ್ಯಕ್ತಿತ್ವವಾಗಿದ್ದರು. ಕ್ರೀಡಾಕ್ಷೇತ್ರದಲ್ಲಿಯೂ ತಮ್ಮದೇ ಆದ ಛಾಪು ಮೂಡಿಸಿದ್ದ ಅವರು ಯುವಕರಿಗೆ ಪ್ರೇರಣೆಯಾಗಿದ್ದರು.

ಮೃತರು ಪತ್ನಿ, ರಾಕೇಶ್ ಫರ್ಟಿಲೈಸರ್ ಸಂಸ್ಥೆಯ ಮಾಲೀಕರಾದ ಪುತ್ರ ರಾಕೇಶ್, ಪಟ್ಟಣದ ಗ್ರಾಮ ಪಂಚಾಯತ್ ಸದಸ್ಯೆಯಾಗಿರುವ ಸೊಸೆ ನಿರುಪಮಾ ರಾಕೇಶ್, ಓರ್ವ ಪುತ್ರಿ ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

ಹರೀಶ್ ಅವರ ನಿಧನಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ, ಜಿಪಂ ಮಾಜಿ ಸದಸ್ಯ ಕಲಗೋಡು ರತ್ನಾಕರ್, ಬಿ.ಪಿ. ರಾಮಚಂದ್ರ, ರಿಪ್ಪನ್‌ಪೇಟೆ ಘಟಕದ ಕಾಂಗ್ರೆಸ್ ಅಧ್ಯಕ್ಷ ಗಣಪತಿ, ಗ್ರಾಮ ಪಂಚಾಯತ್ ಸದಸ್ಯರಾದ ಆಸೀಫ್, ನಿರೂಪ್ ಕುಮಾರ್, ಮಧುಸೂಧನ್, ಗ್ಯಾರಂಟಿ ಸಮಿತಿ ಸದಸ್ಯ ರವೀಂದ್ರ ಕೆರೆಹಳ್ಳಿ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

About The Author