ರಿಪ್ಪನ್‌ಪೇಟೆ: ಹೃದಯಾಘಾತದಿಂದ ಬಿ.ಕೆ. ಹರೀಶ್ ನಿಧನ
ರಿಪ್ಪನ್‌ಪೇಟೆ ಪಟ್ಟಣದ ಹೊಸನಗರ ರಸ್ತೆಯ ನಿವಾಸಿ, ಹಿರಿಯ ಸಾಮಾಜಿಕ ಕಾರ್ಯಕರ್ತ ಹಾಗೂ ಉತ್ತಮ ಕ್ರೀಡಾಪಟುವಾಗಿದ್ದ ಬಿ.ಕೆ. ಹರೀಶ್ ಅವರು ಸೋಮವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಪಟ್ಟಣದ ಸಾಮಾಜಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸದಾ ಮುಂಚೂಣಿಯಲ್ಲಿದ್ದ ಹರೀಶ್ ಅವರು ಜನಪ್ರಿಯ ವ್ಯಕ್ತಿತ್ವವಾಗಿದ್ದರು. ಕ್ರೀಡಾಕ್ಷೇತ್ರದಲ್ಲಿಯೂ ತಮ್ಮದೇ ಆದ ಛಾಪು ಮೂಡಿಸಿದ್ದ ಅವರು ಯುವಕರಿಗೆ ಪ್ರೇರಣೆಯಾಗಿದ್ದರು.
ಮೃತರು ಪತ್ನಿ, ರಾಕೇಶ್ ಫರ್ಟಿಲೈಸರ್ ಸಂಸ್ಥೆಯ ಮಾಲೀಕರಾದ ಪುತ್ರ ರಾಕೇಶ್, ಪಟ್ಟಣದ ಗ್ರಾಮ ಪಂಚಾಯತ್ ಸದಸ್ಯೆಯಾಗಿರುವ ಸೊಸೆ ನಿರುಪಮಾ ರಾಕೇಶ್, ಓರ್ವ ಪುತ್ರಿ ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ಹರೀಶ್ ಅವರ ನಿಧನಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ, ಜಿಪಂ ಮಾಜಿ ಸದಸ್ಯ ಕಲಗೋಡು ರತ್ನಾಕರ್, ಬಿ.ಪಿ. ರಾಮಚಂದ್ರ, ರಿಪ್ಪನ್‌ಪೇಟೆ ಘಟಕದ ಕಾಂಗ್ರೆಸ್ ಅಧ್ಯಕ್ಷ ಗಣಪತಿ, ಗ್ರಾಮ ಪಂಚಾಯತ್ ಸದಸ್ಯರಾದ ಆಸೀಫ್, ನಿರೂಪ್ ಕುಮಾರ್, ಮಧುಸೂಧನ್, ಗ್ಯಾರಂಟಿ ಸಮಿತಿ ಸದಸ್ಯ ರವೀಂದ್ರ ಕೆರೆಹಳ್ಳಿ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S.…
ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…
ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…
ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…
RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ - ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು…
ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ Former Education Minister Kimmane Ratnakar…