Karnataka Cabinet has decided to provide A-Khata to all B-Khata properties across the state, benefiting nearly 10 lakh property owners.
ರಾಜ್ಯದ ಎಲ್ಲಾ ಬಿ-ಖಾತಾಗಳಿಗೆ ಎ-ಖಾತಾ ನೀಡಲು ಸಂಪುಟ ಸಭೆ ತೀರ್ಮಾನ
ಬೆಂಗಳೂರು: ರಾಜ್ಯದ ಎಲ್ಲಾ ಬಿ-ಖಾತಾ ಆಸ್ತಿಗಳಿಗೆ ಎ-ಖಾತಾ ನೀಡಲು ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ. ಪಾಟೀಲ್, ಬೆಂಗಳೂರು ನಗರಕ್ಕೆ ಮಾತ್ರ ಸೀಮಿತವಾಗಿದ್ದ ಎ-ಖಾತಾ ವ್ಯವಸ್ಥೆಯನ್ನು ಇದೀಗ ರಾಜ್ಯದಾದ್ಯಂತ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಗೂ ವಿಸ್ತರಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯದಾದ್ಯಂತ ಇರುವ ಬಿ-ಖಾತಾ ನಿವೇಶನಗಳು, ಕಟ್ಟಡಗಳು ಹಾಗೂ ಫ್ಲ್ಯಾಟ್‌ಗಳಿಗೆ ಎ-ಖಾತಾ ನೀಡಲಾಗುವುದು. ಈ ನಿರ್ಧಾರದಿಂದ ಸುಮಾರು 10 ಲಕ್ಷ ಕಟ್ಟಡ ಮಾಲೀಕರಿಗೆ ಲಾಭವಾಗಲಿದೆ ಎಂದು ಅವರು ಹೇಳಿದರು.
ಈ ಮೂಲಕ ಹಲವು ವರ್ಷಗಳಿಂದ ಕಾಯುತ್ತಿದ್ದ ಬಿ-ಖಾತಾ ಆಸ್ತಿ ಮಾಲೀಕರಿಗೆ ಸರ್ಕಾರ ಮಹತ್ವದ ಗುಡ್ ನ್ಯೂಸ್ ನೀಡಿದ್ದು, ಆಸ್ತಿ ದಾಖಲಾತಿ ಹಾಗೂ ಕಾನೂನು ಪ್ರಕ್ರಿಯೆಗಳು ಸುಗಮವಾಗುವ ನಿರೀಕ್ಷೆ ವ್ಯಕ್ತವಾಗಿದೆ.