w
Headlines
Home » ಭದ್ರಾ ಎಡದಂಡೆ ನಾಲೆಯಲ್ಲಿ ದುರಂತ: ಒಂದೇ ಕುಟುಂಬದ ನಾಲ್ವರು ನಾಪತ್ತೆ, ಶೋಧ ಕಾರ್ಯ ತೀವ್ರ

ಭದ್ರಾ ಎಡದಂಡೆ ನಾಲೆಯಲ್ಲಿ ದುರಂತ: ಒಂದೇ ಕುಟುಂಬದ ನಾಲ್ವರು ನಾಪತ್ತೆ, ಶೋಧ ಕಾರ್ಯ ತೀವ್ರ

GridArt 20260119 110438630 wm

Four members of a family went missing after slipping into the Bhadra Left Bank Canal near Bhadravati. Rescue operations are underway in Shivamogga.

ಹೊಳೆಹೊನ್ನೂರು: ಭದ್ರಾ ಎಡದಂಡೆ ನಾಲೆಯಲ್ಲಿ ನಡೆದ ದುರಂತದಲ್ಲಿ ಒಂದೇ ಕುಟುಂಬದ ನಾಲ್ವರು ನಾಪತ್ತೆಯಾಗಿರುವ ಘಟನೆ ಭದ್ರಾವತಿ ತಾಲೂಕು ಅರಬಿಳಚಿ ಕ್ಯಾಂಪ್‌ನಲ್ಲಿ ನಡೆದಿದೆ.

ನಾಪತ್ತೆಯಾದವರಿಗಾಗಿ ಅಗ್ನಿಶಾಮಕ ದಳ ಹಾಗೂ ಪೊಲೀಸರಿಂದ ತೀವ್ರ ಶೋಧ ಕಾರ್ಯ ಮುಂದುವರಿದಿದೆ.

ನಾಪತ್ತೆಯಾದವರು ನೀಲಾಬಾಯಿ, ಅವರ ಪುತ್ರ ರವಿಕುಮಾರ್‌, ಪುತ್ರಿ ಶ್ವೇತಾ ಹಾಗೂ ಅಳಿಯ ಪರಶುರಾಮ್‌ ಎಂದು ಗುರುತಿಸಲಾಗಿದೆ. ಭದ್ರಾ ಎಡದಂಡೆ ನಾಲೆಯಲ್ಲಿ ಬಟ್ಟೆ ಒಗೆಯಲು ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು ಶಂಕಿಸಿದ್ದಾರೆ.

ಪೊಲೀಸ್‌ ಮೂಲಗಳ ಪ್ರಕಾರ, ನಾಲೆಗೆ ಜಾರಿ ಬಿದ್ದ ಒಬ್ಬರನ್ನು ರಕ್ಷಿಸಲು ಮತ್ತೊಬ್ಬರು, ಅವರ ಹಿಂದೆ ಇನ್ನೊಬ್ಬರು ಇಳಿದ ಪರಿಣಾಮ ನಾಲ್ವರೂ ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವ ಸಾಧ್ಯತೆ ಇದೆ.

ಘಟನೆ ಹಿನ್ನೆಲೆಯಲ್ಲಿ ಸ್ಥಳಕ್ಕೆ ಹೆಚ್ಚುವರಿ ರಕ್ಷಣಾಧಿಕಾರಿ ಎ.ಜಿ. ಕಾರಿಯಪ್ಪ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜಾತ್ರೆ ಹಿನ್ನೆಲೆ ಅಳಿಯ ಪರಶುರಾಮ್‌ ಅವರು ಮಾವನ ಮನೆಗೆ ಬಂದಿದ್ದರೆಂದು ತಿಳಿದು ಬಂದಿದೆ.

ಈ ಘಟನೆ ಹೊಳೆಹೊನ್ನೂರು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ನಾಪತ್ತೆಯಾದವರ ಪತ್ತೆಗೆ ಶೋಧ ಕಾರ್ಯ ನಿರಂತರವಾಗಿ ನಡೆಯುತ್ತಿದೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.