Breaking
14 Jan 2026, Wed

ತೀರ್ಥಹಳ್ಳಿಯ ಭಾರತೀಪುರ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ: ಮಗು ಸೇರಿ ಮೂವರು ಸಾವು

A tragic road accident at Bharatipura Cross in Tirthahalli taluk claimed three lives including a child after a Swift car collided with a KSRTC bus. Three others were seriously injured.

ತೀರ್ಥಹಳ್ಳಿಯ ಭಾರತೀಪುರ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ: ಮಗು ಸೇರಿ ಮೂವರು ಸಾವು

ತೀರ್ಥಹಳ್ಳಿ: ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಭಾರತೀಪುರ ಕ್ರಾಸ್ ಬಳಿ ನಿನ್ನೆ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ.

ಕಾರು ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಮಗು ಸೇರಿದಂತೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಚನ್ನಗಿರಿಯಿಂದ ಶೃಂಗೇರಿಯತ್ತ ಆರು ಪ್ರಯಾಣಿಕರೊಂದಿಗೆ ತೆರಳುತ್ತಿದ್ದ ಸ್ವಿಫ್ಟ್ ಕಾರು ಮತ್ತು ಮಂಗಳೂರಿನಿಂದ ರಾಯಚೂರು ಕಡೆಗೆ ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ನಡುವೆ ಈ ಅಪಘಾತ ಸಂಭವಿಸಿದೆ. ಡಿಕ್ಕಿಯ ತೀವ್ರತೆಗೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಬಸ್‌ನ ಮುಂಭಾಗಕ್ಕೂ ಗಂಭೀರ ಹಾನಿಯಾಗಿದೆ.

ಅಪಘಾತದಲ್ಲಿ ಕಾರಿನ ಚಾಲಕ ರಿಯಾಜ್ ಅಹಮದ್, ಪಕ್ಕದ ಸೀಟಿನಲ್ಲಿದ್ದ ಫಾತಿಮಾ ಹಾಗೂ ಒಂದು ಮಗು (ಹೆಸರು ಇನ್ನೂ ತಿಳಿದುಬಂದಿಲ್ಲ) ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಸ್‌ನಲ್ಲಿದ್ದ ಎಲ್ಲಾ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ಇನ್ನೂ ಕಾರಿನಲ್ಲಿದ್ದ ಉಳಿದ ಮೂವರು ಪ್ರಯಾಣಿಕರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಅವರನ್ನು ತಕ್ಷಣ ತೀರ್ಥಹಳ್ಳಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ತೀರ್ಥಹಳ್ಳಿ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

About The Author

By ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Exit mobile version