BJP state vice president and former minister Haratalu Halappa announced a massive BJP protest in Hosanagara on January 17, demanding a high-level investigation into the alleged assault case and accusing ruling party legislators and officials of misuse of power.
ಹೊಸನಗರದಲ್ಲಿ ಜ.17ರಂದು ಬಿಜೆಪಿ ಬೃಹತ್ ಪ್ರತಿಭಟನೆ: ಉನ್ನತ ಮಟ್ಟದ ತನಿಖೆಗೆ ಆಗ್ರಹ
ಹೊಸನಗರ: ಡಿಸೆಂಬರ್ 31ರ ರಾತ್ರಿ ಸುಮಾರು 2 ಗಂಟೆಯ ವೇಳೆಗೆ ಮಾಧವಶೆಟ್ಟಿಗೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿ ಕೊಲೆ ಮಾಡಲು ಸಂಚು ರೂಪಿಸಿದ್ದಾರೆ ಎಂಬ ಆರೋಪದಡಿ ಮೂರು ಜನ ಬಿಜೆಪಿ ಕಾರ್ಯಕರ್ತರನ್ನು ಜೈಲಿಗೆ ಕಳುಹಿಸಿರುವ ಪ್ರಕರಣದ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ಮಾಜಿ ಸಚಿವ ಹರತಾಳು ಹಾಲಪ್ಪ ಆಗ್ರಹಿಸಿದರು.
ಹೊಸನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲವು ಭ್ರಷ್ಟ ಸರ್ಕಾರಿ ಅಧಿಕಾರಿಗಳು ಶಾಸಕರ ಕೈಗೊಂಬೆಯಾಗಿ ಕಾರ್ಯನಿರ್ವಹಿಸಿ ಬಿಜೆಪಿ ಕಾರ್ಯಕರ್ತರ ಮೇಲೆ ಹಿಂಸೆ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು. ಕಳೆದ ಎರಡೂವರೆ ವರ್ಷಗಳಿಂದ ನಾವು ಮತ್ತು ನಮ್ಮ ಕಾರ್ಯಕರ್ತರು ಸಹಿಸಿಕೊಂಡು ಬಂದಿದ್ದೇವೆ. ಹೊಸನಗರ–ಸಾಗರ ಕ್ಷೇತ್ರದ ಶಾಸಕರು ಅಧಿಕಾರಿಗಳನ್ನು ಮುಂದೆ ನಿಲ್ಲಿಸಿ ತಮ್ಮ ಕಾರ್ಯಕರ್ತರ ವಿರುದ್ಧ ಸೇಡು ತೀರಿಸಿಕೊಳ್ಳುತ್ತಿದ್ದಾರೆ ಎಂದರು.
ಡಿಸೆಂಬರ್ 31ರ ರಾತ್ರಿ ಮಾಜಿ ಶಾಸಕ ಬಿ. ಸ್ವಾಮಿರಾವ್ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ವೇಳೆ, ಅವರ ಪುತ್ರ ಸುರೇಶ್ ಸ್ವಾಮಿರಾವ್ ಹಾಗೂ ಸ್ನೇಹಿತರು ಅಲ್ಲಿದ್ದರು. ಅಂಥ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಶಾಸಕರ ಬೆಂಬಲಿಗರಾದ ಮಾಧವಶೆಟ್ಟಿಗೆ ರಾತ್ರಿ ಎರಡು ಗಂಟೆಗೆ ಸತ್ಯಾಗ್ರಹ ಸ್ಥಳಕ್ಕೆ ಬರುವ ಅಗತ್ಯವೇನು ಎಂಬುದನ್ನು ಅವರು ಪ್ರಶ್ನಿಸಿದರು. ಹೊಸನಗರ–ಸಾಗರ ಕ್ಷೇತ್ರದ ಶಾಸಕರು ಪೊಲೀಸ್, ಕಂದಾಯ, ಮೆಸ್ಕಾಂ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳನ್ನು ದುರುಪಯೋಗಪಡಿಸಿಕೊಂಡು ತಮ್ಮ ಕೆಲಸಗಳನ್ನು ಸಾಧಿಸಿಕೊಳ್ಳುತ್ತಿದ್ದಾರೆ. ಅಧಿಕಾರಿಗಳು ಕಾನೂನು ಅಡಿಯಲ್ಲಿ ಕೆಲಸ ಮಾಡಬೇಕು, ಇಲ್ಲವಾದರೆ ಬಿಜೆಪಿ ಹಮ್ಮಿಕೊಳ್ಳುವ ಪ್ರತಿಭಟನೆಯ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಹಾಲಪ್ಪ ಎಚ್ಚರಿಕೆ ನೀಡಿದರು.
ಈ ಎಲ್ಲ ವಿಚಾರಗಳು ಹಾಗೂ ಹೊಸನಗರ ತಾಲ್ಲೂಕಿನ ವಿವಿಧ ಸಮಸ್ಯೆಗಳನ್ನು ಮುಂದಿಟ್ಟು ಜ.17ರ ಶನಿವಾರ ಹೊಸನಗರದಲ್ಲಿ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಈ ಪ್ರತಿಭಟನೆಯಲ್ಲಿ ಲೋಕಸಭಾ ಸದಸ್ಯ ಬಿ.ವೈ. ರಾಘವೇಂದ್ರ, ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ, ಶಿವಮೊಗ್ಗ ಶಾಸಕ ಚನ್ನಬಸಪ್ಪ, ಜಿಲ್ಲಾಧ್ಯಕ್ಷ ಜಗದೀಶ್ ಸೇರಿದಂತೆ ಟಿ.ಡಿ. ಮೇಘರಾಜ್, ಶಿವರಾಜ್, ಎಂ.ಎನ್. ಸುಧಾಕರ್, ಉಮೇಶ್ ಕಂಚುಗಾರ್, ಆರ್.ಟಿ. ಗೋಪಾಲ್ ಹಾಗೂ ಕ್ಷೇತ್ರದ ಎಲ್ಲ ಬಿಜೆಪಿ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಹೇಳಿದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

- ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್