POSTMANNEWS

ನೈಜ ಸುದ್ದಿ ನೇರ ಬಿತ್ತರ..

ಹುಲ್ಲಿನ ಬಣವೆಯಲ್ಲಿ ಗಾಂಜಾ ಸಂಗ್ರಹ ಪತ್ತೆ: ₹4.03 ಲಕ್ಷ ಮೌಲ್ಯದ ಮಾದಕ ವಸ್ತು ವಶ, ಓರ್ವನ ಬಂಧನ

Police seized 8.60 kg of ganja worth ₹4.03 lakh from Bommanakatte village following a raid by Paper Town police. One accused has been arrested and a case registered under the NDPS Act.

ಬೊಮ್ಮನಕಟ್ಟೆ ಗ್ರಾಮದಲ್ಲಿ ಅಕ್ರಮವಾಗಿ ಮಾದಕ ವಸ್ತು ಗಾಂಜಾವನ್ನು ಸಂಗ್ರಹಿಸಿ ಇಟ್ಟಿರುವ ಕುರಿತು ಪೇಪರ್ ಟೌನ್ ಪೊಲೀಸ್ ಠಾಣೆಗೆ ಖಚಿತ ಮಾಹಿತಿ ಲಭ್ಯವಾಗಿತ್ತು. ಈ ಮಾಹಿತಿಯ ಮೇರೆಗೆ ದಿನಾಂಕ 28-01-2026ರಂದು ಪೇಪರ್ ಟೌನ್ ಪೊಲೀಸ್ ಠಾಣೆಯ ಪಿಎಸ್‌ಐ ಹಾಗೂ ಸಿಬ್ಬಂದಿಗಳ ತಂಡವು ದಾಳಿ ನಡೆಸಿದೆ.

ದಾಳಿಯ ಸಂದರ್ಭದಲ್ಲಿ ಗ್ರಾಮದಲ್ಲಿನ ಹುಲ್ಲಿನ ಬಣವೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿ ಇಟ್ಟಿದ್ದ 8 ಕೆಜಿ 60 ಗ್ರಾಂ ತೂಕದ ಗಾಂಜಾವನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ವಶಪಡಿಸಿಕೊಂಡ ಮಾದಕ ವಸ್ತುವಿನ ಅಂದಾಜು ಮೌಲ್ಯ ₹4,03,000/- ಆಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಅಬ್ದುಲ್ ಖದ್ದೂಸ್ ಎಂಬ ಆರೋಪಿಯನ್ನು ಪೊಲೀಸರು ಸ್ಥಳದಲ್ಲೇ ದಸ್ತಗಿರಿ ಮಾಡಿದ್ದಾರೆ. ಆರೋಪಿಯಿಂದ ವಶಪಡಿಸಿಕೊಂಡ ಗಾಂಜಾವನ್ನು ಜಪ್ತಿ ಮಾಡಿಕೊಂಡು, ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 0016/2026 ಅಡಿಯಲ್ಲಿ NDPS ಕಾಯ್ದೆಯ ಕಲಂ 8(c), 20(b)(ii)(B) ರಂತೆ ಪ್ರಕರಣ ದಾಖಲಿಸಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಮುಂದಿನ ತನಿಖೆಯನ್ನು ಕೈಗೊಂಡಿದ್ದು, ಗಾಂಜಾ ಜಾಲದ ಹಿಂದೆ ಇನ್ನಾರಾದರೂ ಇದ್ದಾರೆಯೇ ಎಂಬುದರ ಕುರಿತು ಮಾಹಿತಿ ಕಲೆಹಾಕುತ್ತಿದ್ದಾರೆ.

About The Author