POSTMANNEWS

ನೈಜ ಸುದ್ದಿ ನೇರ ಬಿತ್ತರ..

BSNLಗೆ ‘ಭಾವಪೂರ್ಣ ಶ್ರದ್ಧಾಂಜಲಿ’ ಪ್ರತಿಭಟನೆ ; ಸಂಸದ ಬಿ.ವೈ. ರಾಘವೇಂದ್ರ ಮಧ್ಯಸ್ಥಿಕೆಯಿಂದ ಫ್ಲೆಕ್ಸ್ ತೆರವು

BSNL network issues triggered a unique protest in Huncha village of Shivamogga. After the issue went viral, MP B.Y. Raghavendra responded promptly, leading to the removal of the protest flex and inspection by BSNL officials.

ಬಿಎಸ್‌ಎನ್‌ಎಲ್ (BSNL) ನೆಟ್‌ವರ್ಕ್ ಸಮಸ್ಯೆ ಹಿನ್ನೆಲೆಯಲ್ಲಿ ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದ್ದ ಘಟನೆಗೆ ಸಂಸದ ಬಿ.ವೈ. ರಾಘವೇಂದ್ರ ಅವರ ತ್ವರಿತ ಸ್ಪಂದನೆ ಪ್ರಮುಖ ತಿರುವು ನೀಡಿದೆ.

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಮದಲ್ಲಿ ಬಿಎಸ್‌ಎನ್‌ಎಲ್ ಮೊಬೈಲ್ ನೆಟ್‌ವರ್ಕ್ ನಿರಂತರವಾಗಿ ಸ್ಥಗಿತಗೊಂಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಇದರ ವಿರುದ್ಧವಾಗಿ ಗ್ರಾಮಸ್ಥರು ಬಿಎಸ್‌ಎನ್‌ಎಲ್ ಪ್ರತಿಕೃತಿಯ ಮೇಲೆ ‘ಬಿಎಸ್‌ಎನ್‌ಎಲ್‌ಗೆ ಭಾವಪೂರ್ಣ ಶ್ರದ್ಧಾಂಜಲಿ’ ಎಂಬ ಪ್ಲೆಕ್ಸ್ ಅಳವಡಿಸಿ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದರು. ಹೊಂಬುಜ ಮಠಕ್ಕೆ ತೆರಳುವ ರಸ್ತೆಯ ಬಳಿ ಈ ಪ್ಲೆಕ್ಸ್ ಅಳವಡಿಸಲಾಗಿತ್ತು.

ವಿಷಯ ಸಂಸದರ ಗಮನಕ್ಕೆ ಬಂದ ತಕ್ಷಣವೇ ಬಿ.ವೈ. ರಾಘವೇಂದ್ರ ಅವರು ತಕ್ಷಣ ಸ್ಪಂದಿಸಿ, ಸಂಬಂಧಪಟ್ಟ ಬಿಎಸ್‌ಎನ್‌ಎಲ್ ಅಧಿಕಾರಿಗಳೊಂದಿಗೆ ಮಾತನಾಡಿ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸುವಂತೆ ಸೂಚನೆ ನೀಡಿದ್ದಾರೆ. ಶೀಘ್ರದಲ್ಲೇ ನೆಟ್‌ವರ್ಕ್ ಸಮಸ್ಯೆ ಬಗೆಹರಿಸುವ ಭರವಸೆಯನ್ನು ಸಂಸದರು ಗ್ರಾಮಸ್ಥರಿಗೆ ನೀಡಿದ್ದಾರೆ.

ಸಂಸದರ ಈ ಭರವಸೆಯ ಹಿನ್ನೆಲೆಯಲ್ಲಿ ಗ್ರಾಮಸ್ಥರು ತಮ್ಮ ಪ್ರತಿಭಟನೆಯ ಸಂಕೇತವಾಗಿ ಅಳವಡಿಸಿದ್ದ ಪ್ಲೆಕ್ಸ್ ಅನ್ನು ಸ್ವಯಂಪ್ರೇರಿತವಾಗಿ ತೆರವುಗೊಳಿಸಿದ್ದಾರೆ. ಬಳಿಕ ಬಿಎಸ್‌ಎನ್‌ಎಲ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ನೆಟ್‌ವರ್ಕ್ ಸಮಸ್ಯೆಯ ಪರಿಶೀಲನೆ ನಡೆಸಿದ್ದಾರೆ.

ನೆಟ್‌ವರ್ಕ್ ವ್ಯತ್ಯಯದಿಂದ ವಿದ್ಯಾರ್ಥಿಗಳ ಆನ್‌ಲೈನ್ ಅಧ್ಯಯನ, ರೈತರ ಸಂಪರ್ಕ ವ್ಯವಸ್ಥೆ ಹಾಗೂ ದಿನನಿತ್ಯದ ಕೆಲಸಗಳು ಅಸ್ತವ್ಯಸ್ತಗೊಂಡಿದ್ದರೂ, ಸಂಸದ ರಾಘವೇಂದ್ರ ಅವರ ತಕ್ಷಣದ ಸ್ಪಂದನೆ ಮತ್ತು ಮಧ್ಯಸ್ಥಿಕೆಯಿಂದ ಸಮಸ್ಯೆ ಶೀಘ್ರ ಪರಿಹಾರವಾಗುವ ವಿಶ್ವಾಸ ಗ್ರಾಮಸ್ಥರಲ್ಲಿ ಮೂಡಿದೆ.

About The Author

Exit mobile version