ಭದ್ರಾವತಿ ತಾಲೂಕಿನ ಶಂಕರಘಟ್ಟದಲ್ಲಿರುವ ಡಿಸಿಸಿ ಬ್ಯಾಂಕ್ ಶಾಖೆಗೆ ಜಿಂಕೆ ನುಗ್ಗಿದ ಘಟನೆ ನಡೆದಿದೆ. ಅರಣ್ಯ ಇಲಾಖೆ ಸಿಬ್ಬಂದಿ ಜಿಂಕೆಯನ್ನು ಸುರಕ್ಷಿತವಾಗಿ ರಕ್ಷಿಸಿ ಅರಣ್ಯಕ್ಕೆ ಬಿಡಲಾಗಿದೆ.
ಶಿವಮೊಗ್ಗ : ಜಿಲ್ಲೆಯ ಭದ್ರಾವತಿ ತಾಲೂಕಿನ ಶಂಕರಘಟ್ಟದಲ್ಲಿರುವ ಡಿಸಿಸಿ ಬ್ಯಾಂಕ್ ಶಾಖೆಗೆ ಜಿಂಕೆ ನುಗ್ಗಿದ ಘಟನೆ ಇಂದು ನಡೆದಿದೆ.
ಕುವೆಂಪು ವಿಶ್ವವಿದ್ಯಾಲಯದ ಒಳಭಾಗದಲ್ಲಿ ನಾಯಿಗಳಿಂದ ಬೆನ್ನಟ್ಟಲ್ಪಟ್ಟ ಜಿಂಕೆ, ತಪ್ಪಿಸಿಕೊಳ್ಳಲು ಏಕಾಏಕಿ ಜಿಗಿದು ಬ್ಯಾಂಕ್ ಆವರಣಕ್ಕೆ ಪ್ರವೇಶಿಸಿದೆ ಎಂದು ತಿಳಿದುಬಂದಿದೆ. ಜಿಂಕೆ ಬ್ಯಾಂಕ್‌ಗೆ ನುಗ್ಗಿದ ತಕ್ಷಣ ಸಿಬ್ಬಂದಿ ತಕ್ಷಣ ಎಚ್ಚರಿಕೆಯಿಂದ ಗೇಟ್‌ಗಳನ್ನು ಮುಚ್ಚಿ, ಯಾವುದೇ ಅನಾಹುತವಾಗದಂತೆ ಕ್ರಮ ಕೈಗೊಂಡು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ಮಾಹಿತಿ ಪಡೆದ ವನ್ಯಜೀವಿ ವಿಭಾಗದ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಜಿಂಕೆಯನ್ನು ಸುರಕ್ಷಿತವಾಗಿ ಹಿಡಿದು ರಕ್ಷಣೆ ಕಾರ್ಯ ನಡೆಸಿದರು. ಬಳಿಕ ಜಿಂಕೆಯನ್ನು ಸಮೀಪದ ಅರಣ್ಯ ಪ್ರದೇಶಕ್ಕೆ ಕರೆದೊಯ್ದು ಬಿಡಲಾಗಿದ್ದು, ಜಿಂಕೆಗೆ ಯಾವುದೇ ಗಾಯಗಳಿಲ್ಲದೆ ಸಂಪೂರ್ಣವಾಗಿ ಸುರಕ್ಷಿತವಾಗಿದೆ ಎಂದು ಅರಣ್ಯ ಇಲಾಖೆ ತಿಳಿಸಿದೆ.
ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…
RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ - ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು…
ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ Former Education Minister Kimmane Ratnakar…
ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ An unidentified man’s partially decomposed…
ಬಸ್-ಬೈಕ್ ಭೀಕರ ಅಪಘಾತ; 27 ವರ್ಷದ ಮೆಕ್ಯಾನಿಕ್ ಸ್ಥಳದಲ್ಲೇ ಸಾವು A 27-year-old mechanic was killed in a…
ಅಕ್ರಮ ವಿದ್ಯುತ್ ಬೇಲಿಗೆ ಸಿಲುಕಿ ಮೂರು ವರ್ಷದ ಕರಡಿ ಸಾವು - ತೋಟದ ಮಾಲೀಕನ ಬಂಧನ A three-year-old male…