POSTMANNEWS

ನೈಜ ಸುದ್ದಿ ನೇರ ಬಿತ್ತರ..

ಡಿಜಿಪಿ ರಾಮಚಂದ್ರರಾವ್ ವಿರುದ್ಧ ಕಛೇರಿಯಲ್ಲಿಯೇ ರಾಸಲೀಲೆ ನಡೆಸಿದ ಆರೋಪ, ವಿಡಿಯೊ ವೈರಲ್!

Karnataka DGP Ramachandra Rao alleged viral office video sparks public outrage. Senior police officer controversy creates statewide discussion.

ಕರ್ನಾಟಕ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರ ವಿರುದ್ಧ ಗಂಭೀರ ಆರೋಪಗಳು ಕೇಳಿಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೊಗಳು ರಾಜ್ಯಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿವೆ. ಡಿಜಿಪಿ ಹುದ್ದೆಯಲ್ಲಿರುವ ರಾಮಚಂದ್ರ ರಾವ್ ಅವರು ತಮ್ಮ ಕಚೇರಿಯಲ್ಲೇ ಪೊಲೀಸ್ ಸಮವಸ್ತ್ರ ಧರಿಸಿ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿರುವ ದೃಶ್ಯಗಳು ವೈರಲ್ ಆಗಿವೆ ಎನ್ನಲಾಗಿದೆ. ಈ ಬೆಳವಣಿಗೆಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ವಿಶೇಷವಾಗಿ, ಕಚೇರಿಗೆ ಕೆಲಸದ ನಿಮಿತ್ತ ಬರುವ ಮಹಿಳೆಯರೊಂದಿಗೆ ಸರಸವಾಡುತ್ತಿದ್ದರೆನ್ನುವ ಆರೋಪಗಳು ಕೇಳಿಬಂದಿದ್ದು, ಮಾಡೆಲ್‌ಗಳು ಸೇರಿದಂತೆ ಹಲವು ಮಹಿಳೆಯರೊಂದಿಗೆ ಇರುವ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ. ವೈರಲ್ ದೃಶ್ಯಗಳಲ್ಲಿ, ಸಮವಸ್ತ್ರದಲ್ಲೇ ಕಚೇರಿ ಒಳಗೆ ಅಸಭ್ಯ ವರ್ತನೆ ನಡೆಸಿರುವುದು ಕಂಡುಬಂದಿದೆ ಎಂಬ ಆರೋಪಗಳು ಉಂಟಾಗಿವೆ.

ಗಮನಾರ್ಹ ಅಂಶವೆಂದರೆ, ಡಿಜಿಪಿ ರಾಮಚಂದ್ರ ರಾವ್ ಅವರು ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟಿ ರನ್ಯಾ ರಾವ್ ಅವರ ಮಲ ತಂದೆಯಾಗಿದ್ದಾರೆ. ಪುತ್ರಿಯ ಪ್ರಕರಣದ ಹಿನ್ನೆಲೆಯಲ್ಲಿ ಈಗಾಗಲೇ ಸಂಕಷ್ಟ ಎದುರಿಸುತ್ತಿದ್ದ ಅವರಿಗೆ, ಇದೀಗ ಈ ಹೊಸ ವಿವಾದ ಮತ್ತಷ್ಟು ತೊಂದರೆಯನ್ನು ತಂದಿದೆ.

ವೈರಲ್ ಆಗಿರುವ ವಿಡಿಯೊಗಳ ಸತ್ಯಾಸತ್ಯತೆ ಕುರಿತು ಇನ್ನೂ ಅಧಿಕೃತ ದೃಢೀಕರಣವಾಗಿಲ್ಲ. ಆದರೆ, ಪೊಲೀಸ್ ಇಲಾಖೆಯಂತಹ ಶಿಸ್ತುಬದ್ಧ ಸಂಸ್ಥೆಯ ಉನ್ನತಾಧಿಕಾರಿಯ ವಿರುದ್ಧ ಈ ರೀತಿಯ ಆರೋಪಗಳು ಕೇಳಿಬಂದಿರುವುದು ರಾಜ್ಯದ ಆಡಳಿತ ವ್ಯವಸ್ಥೆಯ ಮೇಲೆ ಪ್ರಶ್ನಾರ್ಥಕ ಚಿಹ್ನೆಯನ್ನು ಎಬ್ಬಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಹಾಗೂ ಪೊಲೀಸ್ ಇಲಾಖೆಯ ಮುಂದಿನ ಕ್ರಮಗಳತ್ತ ಸಾರ್ವಜನಿಕರ ಗಮನ ಕೇಂದ್ರೀಕೃತವಾಗಿದೆ.

About The Author