Dr. K.S. Shubhrata from Shivamogga has been selected for the Karnataka Government’s Grassroot Innovation 2025 program and awarded a ₹4 lakh grant for innovative mental health treatment using dance movement therapy.
ಶಿವಮೊಗ್ಗ: ಕರ್ನಾಟಕ ಸರ್ಕಾರದ ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ವಿಜ್ಞಾನ ಹಾಗೂ ತಂತ್ರಜ್ಞಾನ ಇಲಾಖೆಯ ವತಿಯಿಂದ ರಾಜ್ಯದಾದ್ಯಂತ ಆಯೋಜಿಸಲಾದ ಗ್ರಾಸ್-ರೂಟ್ ಇನ್ನೋವೇಶನ್ 2025 ಕಾರ್ಯಕ್ರಮದಲ್ಲಿ ಆಯ್ಕೆಯಾದ 30 ವಿಜೇತರ ಪೈಕಿ ಶಿವಮೊಗ್ಗ ನಗರದ ಡಾ. ಕೆ.ಎಸ್. ಶುಭ್ರತಾ ಅವರು ಒಬ್ಬರಾಗಿದ್ದಾರೆ.
ಆರೋಗ್ಯ ಸೇವಾ ವಿಭಾಗದಲ್ಲಿ ಅವರು ಕೈಗೊಂಡಿರುವ ನವೀನ ಹಾಗೂ ಸಾಮಾಜಿಕವಾಗಿ ಉಪಯುಕ್ತ ಕಾರ್ಯಕ್ಕೆ ಮಾನ್ಯತೆ ನೀಡಿ, ಸರ್ಕಾರದಿಂದ ಡಾ. ಶುಭ್ರತಾ ಅವರಿಗೆ 4 ಲಕ್ಷ ರೂಪಾಯಿಗಳ ಗ್ರಾಂಟ್ ಮಂಜೂರು ಮಾಡಲಾಗಿದೆ.
ಮಾನಸಿಕ ರೋಗಿಗಳ ಚಿಕಿತ್ಸೆಯಲ್ಲಿ ನೃತ್ಯ–ಚಲನ ಚಿಕಿತ್ಸೆಯನ್ನು ಪರಿಣಾಮಕಾರಿಯಾಗಿ ಬಳಸುವ ಉದ್ದೇಶದಿಂದ, ಅದರಿಗಾಗಿ ವಿಶೇಷ ಟೂಲ್ಕಿಟ್ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಈ ಅನುದಾನವನ್ನು ಬಳಸಿಕೊಳ್ಳಲಾಗುತ್ತದೆ. ಡಾ. ಶುಭ್ರತಾ ಅವರ ಈ ಸಾಧನೆಗೆ ವೈದ್ಯಕೀಯ ಹಾಗೂ ಸಂಶೋಧನಾ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್