Categories: Blog

ವಯೋವೃದ್ಧ ದಂಪತಿಗಳ ಅನುಮಾನಾಸ್ಪದ ಸಾವು – ಚಿನ್ನಾಭರಣ ನಾಪತ್ತೆ!

An elderly couple was found dead under suspicious circumstances in Bhadravati, Karnataka. Gold ornaments were reported missing. Police have launched an intensive investigation.

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದ ತರಿಕೆರೆ ರಸ್ತೆಯ ಸೀರಾಕ್ ಹೋಟೆಲ್ ಹಿಂಭಾಗದ ಭೂತನಗುಡಿ ಬಡಾವಣೆಯಲ್ಲಿ ವಾಸವಾಗಿದ್ದ ವಯೋವೃದ್ಧ ದಂಪತಿ ಅನುಮಾನಾಸ್ಪದವಾಗಿ ಸಾವಿಗೀಡಾದ ಘಟನೆ ಸೋಮವಾರ ತಡರಾತ್ರಿ ಸಂಭವಿಸಿದ್ದು, ಮಂಗಳವಾರ ಬೆಳಗ್ಗೆ ಬೆಳಕಿಗೆ ಬಂದಿದೆ.

ಮೃತರ ಮನೆಯಲ್ಲಿದ್ದ ಚಿನ್ನಾಭರಣಗಳು ನಾಪತ್ತೆಯಾಗಿರುವುದು ಪ್ರಕರಣಕ್ಕೆ ಇನ್ನಷ್ಟು ಗಂಭೀರತೆ ತಂದಿದೆ.

ಮೃತರನ್ನು ವಿಐಎಸ್‌ಎಲ್ ನಿವೃತ್ತ ನೌಕರ ವೇಗ ನಡಿಗೆಯ ಚಂದ್ರಪ್ಪ (78) ಮತ್ತು ಅವರ ಪತ್ನಿ ಜಯಮ್ಮ (75) ಎಂದು ಗುರುತಿಸಲಾಗಿದೆ. ಜಯಮ್ಮ ಅವರ ಕತ್ತಿನಲ್ಲಿದ್ದ ಬಂಗಾರದ ಚೈನ್ ಸೇರಿದಂತೆ ಮನೆಯಲ್ಲಿದ್ದ ಇತರೆ ಒಡವೆಗಳು ಕಾಣೆಯಾಗಿವೆ. ಆದರೆ ದಂಪತಿಯ ದೇಹದ ಮೇಲೆ ಯಾವುದೇ ಗಾಯದ ಗುರುತುಗಳು ಇಲ್ಲವೆಂದು ಅವರ ಮಕ್ಕಳು ತಿಳಿಸಿದ್ದಾರೆ.

ಚಂದ್ರಪ್ಪ–ಜಯಮ್ಮ ದಂಪತಿ ಪ್ರತಿದಿನ ಬೆಳಗಿನ ಜಾವ ವಾಯುವಿಹಾರಕ್ಕೆ ಹೋಗುವ ಅಭ್ಯಾಸ ಹೊಂದಿದ್ದರು. ಇವರಿಗೆ ಶಿವಮೊಗ್ಗದ ಚೀಲೂರು ಎನ್‌ಇಎಸ್ ವಿದ್ಯಾಸಂಸ್ಥೆಯ ಮುಖ್ಯ ಶಿಕ್ಷಕ ಆದರ್ಶ್, ನಗರದ ಸಿದ್ದಾಪುರ–ಹೊಸೂರು ಸರ್ಕಾರಿ ಉರ್ದು ಶಾಲೆಯ ಶಿಕ್ಷಕ ರವಿಕುಮಾರ್ ಹಾಗೂ ದಾವಣಗೆರೆ ಶುಗರ್ಸ್‌ನಲ್ಲಿ ಲೆಕ್ಕಾಧಿಕಾರಿಯಾಗಿರುವ ವಿಶ್ವನಾಥ್ ಎಂಬ ಮೂರು ಮಕ್ಕಳು ಇದ್ದಾರೆ.

ಕಳೆದ ಶನಿವಾರ ಆದರ್ಶ್ ಹಾಗೂ ಕುಟುಂಬಸ್ಥರು ಮನೆಗೆ ಬಂದು ಹೋಗಿದ್ದರು. ಸೋಮವಾರ ದಂಪತಿ ಹೊಸದಾಗಿ ಚಿನ್ನಾಭರಣ ಖರೀದಿಸಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ಘಟನೆ ಮಾಹಿತಿ ಪಡೆದ ತಕ್ಷಣ ಶಿವಮೊಗ್ಗ ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಕಾರ್ಯಪ್ಪ, ಡಿವೈಎಸ್‌ಪಿ ಪ್ರಕಾಶ್ ರಾಥೋಡ್, ಸರ್ಕಲ್ ಇನ್ಸ್‌ಪೆಕ್ಟರ್ ಚಿದಾನಂದ್, ಹಳೇನಗರ ಪೊಲೀಸ್ ಠಾಣೆಯ ಸಬ್‌ಇನ್ಸ್‌ಪೆಕ್ಟರ್ ಸುನಿಲ್ ತೇಲಿ ಸೇರಿದಂತೆ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶ್ವಾನದಳ, ಬೆರಳಚ್ಚು ತಜ್ಞರು ಹಾಗೂ ದಾವಣಗೆರೆಯಿಂದ ಆಗಮಿಸಿದ ವಿಶೇಷ ತಂಡಗಳು ಸ್ಥಳ ಪರಿಶೀಲನೆ ನಡೆಸಿವೆ.

ಹಳೇನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವೃದ್ಧ ದಂಪತಿಯ ಸಾವಿನ ಕಾರಣ ಹಾಗೂ ಚಿನ್ನಾಭರಣ ನಾಪತ್ತೆಯ ಹಿಂದಿನ ರಹಸ್ಯ ಪತ್ತೆಹಚ್ಚಲು ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…

9 hours ago

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ – ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ - ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು…

9 hours ago

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ Former Education Minister Kimmane Ratnakar…

11 hours ago

ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ An unidentified man’s partially decomposed…

11 hours ago

ಬಸ್‌-ಬೈಕ್ ಭೀಕರ ಅಪಘಾತ; 27 ವರ್ಷದ ಯುವಕ ಸ್ಥಳದಲ್ಲೇ ಸಾವು

ಬಸ್‌-ಬೈಕ್ ಭೀಕರ ಅಪಘಾತ; 27 ವರ್ಷದ ಮೆಕ್ಯಾನಿಕ್ ಸ್ಥಳದಲ್ಲೇ ಸಾವು A 27-year-old mechanic was killed in a…

14 hours ago

ಅಕ್ರಮ ವಿದ್ಯುತ್‌ ಬೇಲಿಗೆ ಸಿಲುಕಿ ಮೂರು ವರ್ಷದ ಕರಡಿ ಸಾವು – ತೋಟದ ಮಾಲೀಕನ ಬಂಧನ

ಅಕ್ರಮ ವಿದ್ಯುತ್‌ ಬೇಲಿಗೆ ಸಿಲುಕಿ ಮೂರು ವರ್ಷದ ಕರಡಿ ಸಾವು - ತೋಟದ ಮಾಲೀಕನ ಬಂಧನ A three-year-old male…

14 hours ago