A man was seriously injured after a scooter hit a cow at Avuka Circle near Garthikere. The injured was shifted to Shivamogga for advanced treatment.
ಗರ್ತಿಕೆರೆ ಬಳಿ ಎಮ್ಮೆಗೆ ಡಿಕ್ಕಿಯಾಗಿ ಸ್ಕೂಟಿ ಪಲ್ಟಿ, ಓರ್ವ ಗಂಭೀರ – ಮೆಗ್ಗಾನ್ ಗೆ ದಾಖಲು
ರಿಪ್ಪನ್‌ಪೇಟೆ : ಇಲ್ಲಿನ ಗರ್ತಿಕೆರೆ ಪಟ್ಟಣದ ಅವುಕ ಸರ್ಕಲ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಗಾಯಾಳುವನ್ನು ಹುಂಚ ಸಮೀಪದ ಶಂಕ್ರಹಳ್ಳಿ ಗ್ರಾಮದ ಭಾಸ್ಕರ್ ಶೆಟ್ಟಿ ಎಂದು ಗುರುತಿಸಲಾಗಿದೆ.
ಮಂಗಳವಾರ ರಾತ್ರಿ ಅವುಕ ಸರ್ಕಲ್ ಬಳಿ ಸ್ಕೂಟಿಯಲ್ಲಿ ಸಂಚರಿಸುತ್ತಿದ್ದ ಭಾಸ್ಕರ್ ಶೆಟ್ಟಿ, ಅಚಾನಕ್ ರಸ್ತೆ ದಾಟುತ್ತಿದ್ದ ಎಮ್ಮೆಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅಪಘಾತದ ವೇಳೆ ಭಾಸ್ಕರ್ ಶೆಟ್ಟಿಗೆ ತಲೆಗೆ ಗಂಭೀರ ಪೆಟ್ಟು ಬಿದ್ದು ತೀವ್ರ ರಕ್ತಸ್ರಾವವಾಗಿದೆ ಎನ್ನಲಾಗಿದೆ.
ಘಟನೆಯ ಮಾಹಿತಿ ತಿಳಿದ ಕೂಡಲೇ ಸ್ಥಳೀಯರು ಆಂಬುಲೆನ್ಸ್‌ಗೆ ಕರೆ ಮಾಡಿದರೂ, ಅದು ತಡವಾಗಿ ಬರುವ ಹಿನ್ನಲೆಯಲ್ಲಿ ಗರ್ತಿಕೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಚಿನ್ ಗೌಡ ಹಾಗೂ ಅವರ ಸ್ನೇಹಿತರು ಮಾನವೀಯತೆ ಮೆರೆದಿದ್ದಾರೆ. ಗಾಯಾಳುವನ್ನು ತಕ್ಷಣ ಖಾಸಗಿ ವಾಹನದಲ್ಲಿ ಆಸ್ಪತ್ರೆಗೆ ಕರೆದೊಯ್ಯಲು ಮುಂದಾದ ಅವರು, ಮಾರ್ಗಮಧ್ಯೆ ಮೂಗೂಡ್ತಿ ಬಳಿ ಆಗಮಿಸಿದ ಆಂಬುಲೆನ್ಸ್‌ಗೆ ಭಾಸ್ಕರ್ ಶೆಟ್ಟಿಯನ್ನು ಶಿಫ್ಟ್ ಮಾಡಿದ್ದಾರೆ.
ಗಾಯಾಳುವಿಗೆ ಮೊದಲು ರಿಪ್ಪನ್‌ಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ನಂತರ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಸಾಗರ ಗ್ರಾಮಾಂತರ ಠಾಣೆಯ ನೂತನ ಪಿಎಸ್‌ಐ ಆಗಿ ಶಂಕರ್ ಗೌಡ ಪಾಟೀಲ್ ನೇಮಕ PSI Shankar Gowda Patil has…
ಶತಮಾನದ ಸಂಭ್ರಮದಲ್ಲಿ ರಿಪ್ಪನ್‌ಪೇಟೆ ಬಾಲಕರ ಶಾಲೆ: ಸೆ. 3ಕ್ಕೆ ಹಳೆಯ ವಿದ್ಯಾರ್ಥಿಗಳ ಪೂರ್ವಭಾವಿ ಸಭೆ Ripponpete Government Model Boys…
ಪ್ಲಾಸ್ಟಿಕ್ ಚೀಲಗಳ ನಡುವೆ ಅಡಗಿದ್ದ 7.5 ಅಡಿ ಬೃಹತ್ ಹೆಬ್ಬಾವು ಸೆರೆ A 7.5-foot-long, 10 kg giant python…
ಈದ್ ಮಿಲಾದ್ - ಗಣೇಶೋತ್ಸವಕ್ಕೆ ಅನುಮತಿ ಇಲ್ಲದೆ ಡಿಜೆ ಹಾಕಿದರೆ ಕೇಸ್ ! ಸೌಂಡ್ ಸಿಸ್ಟಂ ಮಾಲೀಕರಿಗೆ ಪೊಲೀಸರಿಂದ ಖಡಕ್…
ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು Sagar Tahsildar Dr. Prathibha…
ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು Thieves broke…